Homeಮುಖಪುಟತಮಿಳುನಾಡಿನಲ್ಲಿ ಭಾರಿ ಮಳೆ: 25 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನಲ್ಲಿ ಭಾರಿ ಮಳೆ: 25 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

- Advertisement -
- Advertisement -

ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವಾರು ಪ್ರದೇಶಗಳು ಜಲಾವೃತಗೊಂಡ ಬಳಿಕ 25 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ರಾಜ್ಯದ ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಭಾರಿ ಮಳೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD) ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಬೆಳೆಗಳು, ಕಟ್ಟಡಗಳು ಮತ್ತು ರಸ್ತೆಗಳಿಗೆ ವ್ಯಾಪಕ ಹಾನಿಯಾಗಿದೆ. ಇದುವರೆಗೆ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಕಳೆದ ತಿಂಗಳಿನಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೂತುಕುಡಿ, ಕನ್ನಿಯಾಕುಮಾರಿ, ತಿರುನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ, ಪುದುಚೇರಿ, ಕಾರೈಕಲ್‌ ಮತ್ತು ವಿಲ್ಲುಪುರಂ ಸೇರಿದಂತೆ 25 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತೂತುಕುಡಿಯದಲ್ಲಿ ಇಂದು ಬೆಳಿಗ್ಗೆ 5:30 ರವರೆಗೆ 25.9 ಸೆಂ.ಮೀ ಮಳೆಯಾಗಿದ್ದರೆ, ಪುದುಚೇರಿಯ ಕಾರೈಕಲ್‌ನಲ್ಲಿ 11.9 ಸೆಂ.ಮೀ ಮಳೆಯಾಗಿದೆ. ತೂತುಕುಡಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಕ್ಟೋಬರ್‌ನಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ 2,300 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನವೆಂಬರ್ ಎರಡನೇ ವಾರದಲ್ಲಿ ಸತತ ಎರಡು ಬಾರಿ ಮಳೆ ಸುರಿದಿದ್ದರಿಂದ ರಾಜ್ಯದ ಮೂರನೇ ಎರಡರಷ್ಟು ಭಾಗ ಜಲಾವೃತಗೊಂಡಿದೆ.

50,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ಪ್ರತಿಬಾರಿಯ ಮುಂಗಾರು ಋತುವಿನಲ್ಲಾಗುವ ಸರಾಸರಿ ಮಳೆಗಿಂತ ಈ ಭಾರಿ 68 ಪ್ರತಿಶತ ಹೆಚ್ಚು ಮಳೆಯಾಗಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ತಮಿಳುನಾಡು ಮಳೆ: 14 ಕ್ಕೆ ಏರಿದ ಸಾವು; ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಣೆಗೆ ನಿಂತ ಮಹಿಳಾ ಇನ್ಸ್‌‌ಪೆಕ್ಟರ್‌‌!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...