Homeಮುಖಪುಟತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

ತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

- Advertisement -
- Advertisement -

ತಮಿಳುನಾಡು ರಾಜ್ಯಾದ್ಯಂತ ಆರ್‌ಎಸ್‌ಎಸ್‌ ನಾಳೆ ಹಮ್ಮಿಕೊಳ್ಳಲು ಹೊರಟಿದ್ದ ರಸ್ತೆ ಮೆರವಣಿಗೆಗೆ ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಮೈದಾನ ಅಥವಾ ಕ್ರೀಡಾಂಗಣದಂತಹ ಕಾಂಪೌಂಡ್ ಆವರಣದಲ್ಲಿ ಮಾತ್ರ ಮೆರವಣಿಗೆ ನಡೆಸಲು ಕೋರ್ಟ್ ಸೂಚಿಸಿದ್ದು, ರಸ್ತೆ ಮೆರವಣಿಗೆಯನ್ನು ನಡೆಸುವುದಿಲ್ಲ ಎಂದು ಆರ್‌ಎಸ್‌ಎಸ್ ಹೇಳಿದೆ.

ತನ್ನ ಹೇಳಿಕೆಯಲ್ಲಿ ಹಿಂದುತ್ವವಾದಿ ಸಂಘಟನೆ “ಈ ಆದೇಶವು ಸ್ವೀಕಾರಾರ್ಹವಲ್ಲ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು” ಎಂದಿದೆ.

ತಮಿಳುನಾಡಿನಾದ್ಯಂತ ನವೆಂಬರ್ 6ರ ಭಾನುವಾರದಂದು 44 ಸ್ಥಳಗಳಲ್ಲಿ ಮೆರವಣಿಗೆ ನಡೆಸಲು ಮದ್ರಾಸ್ ಹೈಕೋರ್ಟ್ ಆರ್‌ಎಸ್‌ಎಸ್‌ಗೆ ಷರತ್ತುಬದ್ಧ ಅನುಮತಿ ನೀಡಿದೆ. ಬಲಪಂಥೀಯ ಸಂಘಟನೆಯು ಕೋರಿದ್ದ 50 ಸ್ಥಳಗಳ ಪೈಕಿ ಮೂರರಲ್ಲಿ ಮಾತ್ರ ರಾಜ್ಯ ಸರ್ಕಾರವು ಈ ಹಿಂದೆ ಮೆರವಣಿಗೆಗೆ ಅನುಮತಿ ನೀಡಿತ್ತು. ಆರ್‌ಎಸ್‌ಎಸ್, ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಬೇಕು, ಇಲ್ಲದಿದ್ದರೆ ಪರಿಣಾಮ ಎದುರಿಸಬೇಕು ಎಂದು ಕೋರ್ಟ್‌ ಎಚ್ಚರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಶ್ಮೀರ, ಪಶ್ಚಿಮ ಬಂಗಾಳ, ಕೇರಳ ಮತ್ತು ಇತರ ಸ್ಥಳಗಳಲ್ಲಿ ರಸ್ತೆ ಮೆರವಣಿಗೆಗಳು ನಡೆಯುತ್ತವೆ. ನಾವು ನವೆಂಬರ್ 6 ರಂದು ನಮ್ಮ ತಮಿಳುನಾಡಿನಲ್ಲಿ ರಸ್ತೆ ಮೆರವಣಿಗೆಗಳನ್ನು ನಡೆಸುತ್ತಿಲ್ಲ. ನಾವು ಮನವಿ ಮಾಡುತ್ತೇವೆ” ಎಂದು ಆರ್‌ಎಸ್‌ಎಸ್ ಹೇಳಿಕೆ ತಿಳಿಸಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಕೊಯಮತ್ತೂರು, ಪೊಲ್ಲಾಚಿ ಮತ್ತು ನಾಗರ್‌ಕೋಯಿಲ್ ಸೇರಿದಂತೆ ಆರು ಕೋಮು ಸೂಕ್ಷ್ಮ ಸ್ಥಳಗಳಲ್ಲಿ ಮೆರವಣಿಗೆಗೆ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು.

ಎರಡು ತಿಂಗಳ ನಂತರ ಇತರ ಆರು ಸ್ಥಳಗಳಲ್ಲಿ ಮೆರವಣಿಗೆಗೆ ಅನುಮತಿ ಪಡೆಯಲು ಆರ್‌ಎಸ್‌ಎಸ್‌ಗೆ ಕೋರ್ಟ್ ಅನುಮತಿ ನೀಡಿದೆ.

ಕೊಯಮತ್ತೂರಿನಲ್ಲಿ ಇತ್ತೀಚೆಗೆ ದೀಪಾವಳಿಯ ಒಂದು ದಿನದ ಮೊದಲು ಕಾರ್ ಸ್ಫೋಟ ನಡೆದಿತ್ತು. ಇದರಲ್ಲಿ ಜಮೀಶಾ ಮುಬಿನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಅಕ್ಟೋಬರ್ 2ರಂದು ನ್ಯಾಯಾಲಯವು ಅನುಮತಿ ನೀಡಿದ್ದರೂ ತಮಿಳುನಾಡು ಸರ್ಕಾರವು ಈ ಹಿಂದೆ ಅನುಮತಿ ನಿರಾಕರಿಸಿತ್ತು. ಆರ್‌ಎಸ್‌ಎಸ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಲು ಮುಂದಾಯಿತು.

ಇದನ್ನೂ ಓದಿರಿ: ಗುಜರಾತ್ ಚುನಾವಣೆ: ಬಿಜೆಪಿ ತೊರೆದ ಹಿರಿಯ ಮುಖಂಡ ಜಯ್ ನಾರಾಯಣ್ ವ್ಯಾಸ್

ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮತ್ತು ಪೊಲೀಸ್ ಕಮಿಷನರ್‌ಗಳಿಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸುತ್ತೋಲೆಯನ್ನು ಹೊರಡಿಸಿದ್ದು, ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗಳಿಗೆ ಒಳಪಟ್ಟು ಅನುಮತಿ ನೀಡುವಂತೆ ತಿಳಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ನಿಷೇಧದ ನಂತರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವನ್ನು ಸರ್ಕಾರ ಪ್ರಸ್ತಾಪಿಸುತ್ತಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿದುತಲೈ ಚಿರುತೈಗಲ್ ಕೂಡ ಅದೇ ದಿನ ಶಾಂತಿಗಾಗಿ ಮಾನವ ಸರಪಳಿ ನಿರ್ಮಿಸಲು ಅನುಮತಿ ಕೋರಿದ್ದರು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ, ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ ಮತ್ತು ಗಾಂಧಿಯವರ ಮರಣವನ್ನು ಹೇಗೆ ಸಂಭ್ರಮಿಸಲಾಗಿದೆ ಎಂಬುದನ್ನು ಪಕ್ಷವು ಉಲ್ಲೇಖಿಸಿದೆ. ಈ ಕಾರ್ಯಕ್ರಮಕ್ಕೆ ಗಾಂಧಿ ಜಯಂತಿಯನ್ನು ಆಯ್ಕೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ಪಕ್ಷವು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...