Homeಮುಖಪುಟಕೊರೊನಾ ಸೋಂಕಿನಿಂದ ತಮಿಳುನಾಡು ಶಾಸಕ ಜೆ. ಅನ್ಬಳಗನ್ ಸಾವು

ಕೊರೊನಾ ಸೋಂಕಿನಿಂದ ತಮಿಳುನಾಡು ಶಾಸಕ ಜೆ. ಅನ್ಬಳಗನ್ ಸಾವು

- Advertisement -
- Advertisement -

ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ತಮಿಳುನಾಡಿನ ಡಿಎಂಕೆ ಶಾಸಕ ಜೆ ಅನ್ಬಳಗನ್ (62) ಚೆನ್ನೈನಲ್ಲಿ ಬುಧವಾರ ನಿಧನರಾದರು. ಅವರು ತಮ್ಮ 62 ನೇ ಹುಟ್ಟುಹಬ್ಬದಂದೇ ನಿಧನರಾಗಿದ್ದು ಕುಟುಂಬಸ್ಥರಲ್ಲಿ ಭಾರೀ ಅಘಾತವನ್ನುಂಟುಮಾಡಿದೆ.

ಅನ್ಬಳಗನ್ ಅವರು ಕೋವಿಡ್ -19 ಗೆ ಚೆನ್ನೈನ ಕ್ರೋಮ್‌ಪೇಟೆಯಲ್ಲಿರುವ ಡಾ. ರೇಲಾ ಸಂಸ್ಥೆ ಮತ್ತು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್-19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಅವರನ್ನು ಜೂನ್ 2 ರಂದು ಆಸ್ಪತ್ರೆಗೆ ದಾಖಲಿಸಲಾಯಿತು.

“ತೀವ್ರ ನ್ಯುಮೋನಿಯಾದಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಅನ್ಬಳಗನ್ ಅವರ ಆರೋಗ್ಯ ಇಂದು ಮುಂಜಾನೆ ಹೆಚ್ಚು ಹದಗೆಟ್ಟಿತ್ತು. ಹೀಗಾಗಿ  ವೈದ್ಯರು ಎಷ್ಟೇ ಪ್ರಯತ್ನಪಟ್ಟರೂ ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ” ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಶಾಸಕರ ನಿಧನದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ತಮ್ಮ ಸಂತಾಪ ಸೂಚಿಸಿದ್ದಾರೆ. ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕೂಡ ಅನ್ಬಳಗನ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಅವರಿಗೆ ಗೌರವ ಸಲ್ಲಿಸಿದರು.

ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಅವರು ಶಾಸಕರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದರು ಮತ್ತು ಅವರ ಸಾವು ದೊಡ್ಡ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...