Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ಬಿಜೆಪಿ ಅಭ್ಯರ್ಥಿಯ ಕುಟುಂಬದಲ್ಲಿಯೇ 5 ಜನ ಮತದಾರರಿದ್ದರು!

- Advertisement -
- Advertisement -

ತಮಿಳುನಾಡಿನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಕೇವಲ ಒಂದು ಮತ ಪಡೆದು ನಗೆಪಾಟೀಲುಗೀಡಾದ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ಡಿ.ಕಾರ್ತಿಕ್ ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರ ಕುಟುಂಬದಲ್ಲಿಯೇ 5 ಜನ ಮತದಾರರಿದ್ದರು ಸಹ ಅವರು ಕೇವಲ ಒಂದೇ ಒಂದು ಮತ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಅದು ಅವರದೇ ಮತ ಎಂದು ಹಲವರು ವ್ಯಂಗ್ಯವಾಡಿದ್ದು ಟ್ವಿಟರ್‌ನಲ್ಲಿ ‘ಸಿಂಗಲ್ ವೋಟ್ ಬಿಜೆಪಿ’ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸಾಮಿ ಟ್ವೀಟ್ ಮಾಡಿ, “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಕೇವಲ ಒಂದು ಮತ ಸಿಕ್ಕಿದೆ. ಇತರರಿಗೆ ಮತ ಹಾಕಲು ನಿರ್ಧರಿಸಿದ ಅವರ ಮನೆಯ ಇತರ ನಾಲ್ಕು ಮತದಾರರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದಿದ್ದಾರೆ.

ಶಿವ ಪ್ರಸಾತ್ ಟಿ ಆರ್ ಎಂಬುವವರು ಟ್ವೀಟ್ ಮಾಡಿ, “ಒಂದು ದೇಶ, ಒಂದು ಚುನಾವಣೆ, ಒಂದು ಧರ್ಮ, ಒಂದು ವೋಟು, ತಮಿಳುನಾಡಿನಲ್ಲಿ ಬಿಜೆಪಿ ನಂಬರ್ 1 ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ ವಿಶೇಷ ಸೂಚನೆ ಒಂದು ಮತ ಪಡೆದ ಅಭ್ಯರ್ಥಿ ಕೊಯಮತ್ತೂರು ಜಿಲ್ಲಾ ಬಿಜೆಪಿ ಯುವ ವಿಭಾಗದ ಉಪ ಕಾರ್ಯದರ್ಶಿಯೂ ಹೌದು” ಎಂದಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿ ಅಭ್ಯರ್ಥಿಯ ಕುಟುಂಬ ಸದಸ್ಯರೂ ಸಹ ಬಿಜೆಪಿಗೆ ಮತ ನೀಡದೆ “ಬಿಜೆಪಿಗೆ ನಮಸ್ಕಾರ” ಎಂದು ಹೇಳಿದ್ದಾರೆ ಎಂದು ನೀರಜ್ ಭಾಟಿಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಮತ ನೀಡುವುದು ವ್ಯರ್ಥ ಎಂದು ಬಿಜೆಪಿಯ ಅಭ್ಯರ್ಥಿಯ ಕುಟುಂಬಸ್ಥರಿಗೂ ತಿಳಿದಿದೆ. ಅದಕ್ಕೆ ಬಿಜೆಪಿ ಅಭ್ಯರ್ಥಿಯ ಮನೆಯಲ್ಲಿ 5 ಮತದಾರರಿದ್ದರೂ ಕೇವಲ ಒಂದು ಮತ ಬಿದ್ದಿದೆ ಎಂದು ಸಿದ್ದಿಕ್ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 6 ಮತ್ತು 9 ರಂದು ನಡೆಯಿತು. ಒಟ್ಟಾರೆಯಾಗಿ, 79,433 ಅಭ್ಯರ್ಥಿಗಳು 27,003 ಹುದ್ದೆಗಳಿಗೆ ಸ್ಪರ್ಧಿಸಿದ್ದರು.


ಇದನ್ನೂ ಓದಿ: ಮೋದಿಯನ್ನು ಉದ್ದೇಶಿಸಿ ‘ಅನಕ್ಷರಸ್ತರು ದೇಶಕ್ಕೆ ಹೊರೆ’ ಎಂದು ಅಮಿತ್‌ ಶಾ ಹೇಳಿದ್ದಾರೆ: ನೆಟ್ಟಿಗರ ವ್ಯಂಗ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಬಂಧನ

0
ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಪ್ರಿನ್ಸ್ ಟನ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ಮೂಲದ...