Homeಮುಖಪುಟತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವಿನತ್ತ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವಿನತ್ತ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ

- Advertisement -
- Advertisement -

ತಮಿಳುನಾಡಿನ 9 ಜಿಲ್ಲೆಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತರೂಢ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಮತ ಎಣಿಕೆ ಇನ್ನು ನಡೆಯುತ್ತಿದ್ದು, ಒಟ್ಟು 1381 ಪಂಚಾಯತ್ ಯೂನಿಯನ್‌ಗಳು ಮತ್ತು 140 ಜಿಲ್ಲಾ ಪಂಚಾಯತ್ ವಾರ್ಡ್‌ಗಳಲ್ಲಿ 1100 ಕ್ಕೂ ಹೆಚ್ಚಿನ ವಾರ್ಡ್‌ಗಳಲ್ಲಿ ಡಿಎಂಕೆ-ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ‘ಇದು ಐದು ತಿಂಗಳ ನಮ್ಮ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಮನ್ನಣೆ’ ಎಂದಿದ್ದು, ಮತದಾರರಿಗೆ ಕೃತಜ್ಞತೆ ತಿಳಿಸಿದ್ದಾರೆ.

“ನಾವು ಇನ್ನೂ ಹೆಚ್ಚು ಕೆಲಸ ಮಾಡುತ್ತೇವೆ. ಜನರು ನಮ್ಮ ಮೇಲೆ ಹೊಂದಿರುವ ವಿಶ್ವಾಸವನ್ನು ರಕ್ಷಿಸುತ್ತೇವೆ. ಕಳೆದ ಐದು ತಿಂಗಳಲ್ಲಿ ನಮ್ಮ ಮೇಲಿನ ಅಭಿಮಾನ ಹೆಚ್ಚಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಒಟ್ಟಾಗಿಯೇ ಈ ಚುನಾವಣೆ ಎದುರಿಸಿದ್ದವು. ಎಡಪಕ್ಷಗಳು ಕೆಲ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರು. ಪಿಎಂಕೆ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಬಿಜೆಪಿ ಒಂದು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಉಳಿದ ಕಡೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕಮಲ್ ಹಾಸನ್‌ರವರ ಎಂಎನ್‌ಎಂ ಕೂಡ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು.

ಚುನಾವಣೆಯ ಆಸಕ್ತಿದಾಯಕ ಫಲಿತಾಂಶದಲ್ಲಿ ತೆಂಕಾಸಿ ಜಿಲ್ಲೆಯ 22 ವರ್ಷದ ಸಾರುಲತಾ ವೆಂಕದಂಪಟ್ಟಿ ಪಂಚಾಯತ್ ವಾರ್ಡ್‌ನಲ್ಲಿ ಜಯಗಳಿಸಿದ್ದು ಅತ್ಯಂತ ಕಿರಿಯ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗುವ ಸಂಭವವಿದೆ.

ಅದೇ ರೀತಿ ಬಿಜೆಪಿ ಅಭ್ಯರ್ಥಿ ಡಿ.ಕಾರ್ತಿಕ್ ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರ ಕುಟುಂಬದಲ್ಲಿಯೇ 5 ಜನ ಮತದಾರರಿದ್ದರು ಸಹ ಅವರು ಕೇವಲ ಒಂದೇ ಒಂದು ಮತ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಅದು ಅವರದೇ ಮತ ಎಂದು ಹಲವರು ವ್ಯಂಗ್ಯವಾಡಿದ್ದು ಟ್ವಿಟರ್‌ನಲ್ಲಿ ‘ಸಿಂಗಲ್ ವೋಟ್ ಬಿಜೆಪಿ’ ಎಂದು ಟ್ರೋಲ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರೆಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...