Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

- Advertisement -
- Advertisement -

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಚುನಾವಣೆಯಲ್ಲಿ, ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ 200 ಕೌನ್ಸಿಲರ್ ಸ್ಥಾನಗಳಲ್ಲಿ ಬಿಜೆಪಿಯಿಂದ ಗೆದ್ದ ಏಕೈಕ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಉಮಾ ಆನಂದನ್. ಇವರು ತನ್ನ ಚುನಾವಣಾ ಪ್ರಚಾರದ ವೇಳೆ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ವಿವಾದ ಸೃಷ್ಟಿಸಿದ್ದರು.

ಉಮಾ ಅವರು ಚೆನ್ನೈನ ವೆಸ್ಟ್ ಮಾಂಬಲಂನ ವಾರ್ಡ್ 134 ಅನ್ನು ಗೆದ್ದಿದ್ದಾರೆ. ಈ ಪ್ರದೇಶವು ಕಳೆದ ವರ್ಷ ಸಂಭವಿಸಿದ ನೆರೆಯಿಂದಾಗಿ ಸಂಕಷ್ಟ ಅನುಭವಿಸಿತ್ತು. ಇದು ಮಹಾನಗರ ಪಾಲಿಕೆಯ ವಿರುದ್ದ ಜನರು ತಿರುಗಿ ಬೀಳಲು ಕಾರಣ ಎನ್ನಲಾಗಿದೆ.

ದಿ ನ್ಯೂಸ್ ಮಿನಿಟ್‌ ವರದಿ ಮಾಡಿದಂತೆ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವೀಡಿಯೊ ಕ್ಲಿಪ್‌ನಲ್ಲಿ ಸಂದರ್ಶಕರೊಬ್ಬರು ಉಮಾ ಅವರನ್ನು ಪ್ರಶ್ನಿಸುತ್ತಾ, “ಚಾಕು ಮತ್ತು ಬಂದೂಕುಗಳನ್ನು ಎತ್ತುವವರಲ್ಲಿ ಹೆಚ್ಚಿನವರು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ನೀವು ಹೇಳುತ್ತೀರಾ?” ಎಂದು ಕೇಳುತ್ತಾರೆ. ಅದಕ್ಕೆ ಉಮಾ ಅವರು, “ಹೌದು” ಎಂದು ಉತ್ತರಿಸುತ್ತಾರೆ.

ಇದೇ ವೇಳೆ ಸಂದರ್ಶಕ, ಗೋಡ್ಸೆ ಗಾಂಧಿಯನ್ನು ಗುಂಡಿಕ್ಕಿದ ಬಗ್ಗೆ ಪ್ರಶ್ನಿಸುತ್ತಾರೆ. ಇದಕ್ಕೆ ಉತ್ತರಿಸಿದ ಉಮಾ, “ಆದರೆ ಗೋಡ್ಸೆ ಗಾಂಧಿಯನ್ನು ಯಾಕೆ ಕೊಂದಿದ್ದು ಗೊತ್ತೆ?” ಎಂದು ಹೇಳುತ್ತಾರೆ. ಅದೇ ಕ್ಲಿಪ್‌ನಲ್ಲಿ ಅವರು, “ಗೋಡ್ಸೆ ಗಾಂಧಿಯನ್ನು ಕೊಂದಿದ್ದಕ್ಕೆ, ಗೋಡ್ಸೆಯದ್ದೇ ಆದ ಸಮರ್ಥನೆಯನ್ನು ಹೊಂದಿದ್ದ. ಗೂಡ್ಸೆ ಹಿಂದೂ ಆಗಿದ್ದ, ಅದಕ್ಕಾಗಿ ತುಂಬಾ ಹೆಮ್ಮೆಯಿದೆ. ಇದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ, ನಾನು ಗೋಡ್ಸೆಯ ಬೆಂಬಲಿಗ” ಎಂದು ಹೇಳುತ್ತಾರೆ.

ಉಮಾ ಚುವಾವಣೆಯಲ್ಲಿ ಗೆದ್ದ ನಂತರ ಅವರ ಇತರ ಹಳೆಯ ಸಂದರ್ಶನಗಳ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊಗಳಲ್ಲಿ ಅವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು, ದಲಿತ ನಾಯಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ.

ಒಂದು ವೀಡಿಯೊದಲ್ಲಿ ಅವರು, “ನಾನು ಬ್ರಾಹ್ಮಣನಾಗಿರುವುದರಲ್ಲಿ ಹೆಮ್ಮೆಯಿದೆ. ನನಗೆ ಜಾತಿಯ ವ್ಯಾಮೋಹವಿಲ್ಲ, ಆದರೆ ನನ್ನ ಪರಂಪರೆಯ ಬಗ್ಗೆ ನನಗೆ ಹೆಮ್ಮೆ ಇದೆ. ಜಾತಿಗಳಿವೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಜಾತಿ ಹೋದರೆ ನಮ್ಮಲ್ಲಿ ಸಂಸ್ಕೃತಿ ಇರುವುದಿಲ್ಲ” ಎಂದು ಹೇಳುತ್ತಾರೆ.

ಬ್ರಾಹ್ಮಣರು ವಾಪಾಸು ಹೊಡೆಯಬೇಕು ಎಂದು ಪ್ರತಿಪಾದಿಸುತ್ತಾ, ದ್ರಾವಿಡ ಕಳಗಂನ ಪ್ರಧಾನ ಕಾರ್ಯದರ್ಶಿ ಕೆ. ವೀರಮಣಿ ಅವರ ಬಗ್ಗೆ ನಿಂದನೀಯ ಭಾಷೆಯನ್ನು ಉಮಾ ಬಳಸಿದ್ದರು.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...