Homeಮುಖಪುಟತಮಿಳುನಾಡು ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರ ಬಂಧನ

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರ ಬಂಧನ

ಪೊಲೀಸರು ಈ ಹಿಂದೆ ಅನುಮಾನಾಸ್ಪದ ಸಾವಿನ ಪ್ರಕರಣಗಳನ್ನು ಮಾತ್ರ ದಾಖಲಿಸಿದ್ದರು. ಮದ್ರಾಸ್ ನ್ಯಾಯಾಲಯವು ಕೊಲೆ ಪ್ರಕರಣ ದಾಖಲಿಸುವಂತೆ ಆದೇಶಿಸಿ, ಸಿಬಿಐ-ಸಿಐಡಿಗೆ ಈ ಪ್ರಕರಣ ವರ್ಗಾಹಿಸುವಂತೆ ತಾಕೀತು ಮಾಡಿತ್ತು.

- Advertisement -
- Advertisement -

ತಮಿಳುನಾಡು ಪೊಲೀಸ್ ದೌರ್ಜನ್ಯಕ್ಕೆ ಮೃತಪಟ್ಟ ಜಯರಾಜ್ ಮತ್ತು ಬೆನಿಕ್ಸ್ ಪ್ರಕರಣದಲ್ಲಿ ಆರೋಪಿಗಳಾದ ನಾಲ್ವರು ಪೊಲೀಸರನ್ನು ಬಂಧಿಸಿದ್ದು, ಇತರ ಮೂವರು ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ.

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನಿಗಧಿಗಿಂತ ಹದಿನೈದು ನಿಮಿಷ ಹೆಚ್ಚು ಕಾಲ ಅಂಗಡಿ ತೆಗೆದಿದ್ದ ಕ್ಷುಲಕ ಕಾರಣಕ್ಕಾಗಿ ಪೊಲೀಸರು ಅವರ ಮೇಲೆ ಕ್ರೂರ ದೌರ್ಜನ್ಯ ಎಸಗಿದ್ದರು ಎಂದು ದಾಖಲೆಗಳು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯನ್ನು ದೇಶಾದ್ಯಂತದ ಜನರು ಖಂಡಿಸಿದ್ದು, ಪೊಲೀಸ್‌ ನಡವಳಿಕೆಗಳಲ್ಲಿ ತೀವ್ರ ಬದಲಾವಣೆಗೆ ಆಗ್ರಹಿಸಿದ್ದರು. ಈ ಪ್ರಕರಣವನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ಸಿಬಿಐಗೆ ಹಸ್ತಾಂತರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್‌ಗಳಾದ ರಘು ಗಣೇಶ್ ಮತ್ತು ಬಾಲಕೃಷ್ಣನ್ ಮತ್ತು ಕಾನ್‌ಸ್ಟೆಬಲ್‌ಗಳಾದ ಮುರುಗನ್ ಮತ್ತು ಮುತ್ತುರಾಜ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ತಮಿಳುನಾಡಿನ ಸಿಐಡಿ (ಅಪರಾಧ ತನಿಖಾ ಇಲಾಖೆ) ಯ ಅಪರಾಧ ಶಾಖೆ ಬಂಧಿಸಿದೆ.

“ಎಫ್‌ಐಆರ್‌ಗಳನ್ನು ಐಪಿಸಿ 302 ಕಲಂಗೆ ಬದಲಾಯಿಸಲಾಗಿದೆ. ಐಜಿ ಮತ್ತು ಎಸ್‌ಪಿ (ಸಿಬಿ-ಸಿಐಡಿ) ಅಡಿಯಲ್ಲಿ 12 ವಿಶೇಷ ತಂಡಗಳು ಸೇರಿ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿವೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಶಂಕರ್ ತಿಳಿಸಿದ್ದಾರೆ.

ಪೊಲೀಸರು ಈ ಹಿಂದೆ ಅನುಮಾನಾಸ್ಪದ ಸಾವಿನ ಪ್ರಕರಣಗಳನ್ನು ಮಾತ್ರ ದಾಖಲಿಸಿದ್ದರು. ಮದ್ರಾಸ್ ನ್ಯಾಯಾಲಯವು ಕೊಲೆ ಪ್ರಕರಣ ದಾಖಲಿಸುವಂತೆ ಆದೇಶಿಸಿ, ಸಿಬಿಐ-ಸಿಐಡಿಗೆ ಈ ಪ್ರಕರಣ ವರ್ಗಾಹಿಸುವಂತೆ ತಾಕೀತು ಮಾಡಿತ್ತು.

ಜೂನ್ 19 ರಂದು ಸಾಥಾನ್ಕುಳಂ ಪೊಲೀಸ್ ಠಾಣೆಯಲ್ಲಿ ಇಬ್ಬರನ್ನು ಬಂಧಿಸಿ ಹಿಂಸಿಸಲಾಯಿತು ಎಂದು ಹೇಳಲಾದ ಘಟನೆಗಳ ಬಗ್ಗೆ ಮುಖ್ಯ ಮಾಹಿತಿ ಒದಗಿಸಬಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದರಿಂದ ನ್ಯಾಯಾಲಯವು ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಪೊಲೀಸರ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿತ್ತು.


ಮತ್ತಷ್ಟು ಸುದ್ದಿಗಳು

ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...