Homeಮುಖಪುಟತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

- Advertisement -
- Advertisement -

ಕರೋನವೈರಸ್ ಲಾಕ್ ಡೌನ್ ಸಮಯದಲ್ಲಿ ಕರ್ಫ್ಯೂ ಮೀರಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ಜಯರಾಜ್‌ ಮತ್ತು ಅವರ ಮಗ ಬೆನ್ನಿಕ್ಸ್ ಲಾಕಪ್‌ ಡೆತ್ ಪ್ರಕರಣದಲ್ಲಿ, ಟುಟಿಕೋರಿನ್ ಪೊಲೀಸ್ ಮುಖ್ಯಸ್ಥರನ್ನು ಬದಲಾಯಿಸಲಾಗಿದೆ ಮತ್ತು ಮೂವರು ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಮರಣೋತ್ತರ ವರದಿಯ ಆಧಾರದ ಮೇಲೆ ತಿಳಿಸಿದೆ.

ಈ ಪ್ರಕರಣದ ಕುರಿತು ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರನೆ ನಡೆಸುತ್ತಿದೆ.

ಟುಟಿಕೋರಿನ್ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಬಾಲಗೋಪಾಲನ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಸ್ ಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮರಣೋತ್ತರ ವರದಿಗಳ ಆಧಾರದ ಮೇಲೆ ತಂದೆ-ಮಗನ ಸಾವಿನಲ್ಲಿ ಭಾಗಿಯಾಗಿರುವ ಮೂವರು ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ನಂತರ ಹೈಕೋರ್ಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿ.ಪ್ರಥಾಪನ್, ಹೆಚ್ಚುವರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ಕುಮಾರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಾರಾಜನ್ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿದೆ.

“ನೀವು ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಕಾನ್ಸ್ಟೇಬಲ್ ಮಹಾರಾಜನ್ ಹೇಳಿದ್ದರು ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ನೀಡಿದ ವರದಿಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...