ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಗೃಹಖಾತೆಯನ್ನು ಪಿ ಜಯರಾಜ್ ಮತ್ತು ಜೆ ಬೆನ್ನಿಕ್ಸ್ ಲಾಕಪ್ ಡೆತ್ ಪ್ರಕರಣದ ತನಿಖೆ ಮುಗಿಸುವವರೆಗೆ ತಡೆಹಿಡಿಯಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಯರಾಜ್ ಮತ್ತು ಅವರ 31 ವರ್ಷದ ಮಗ ಬೆನ್ನಿಕ್ಸ್ ರನ್ನು ಜೂನ್ 19 ರಂದು ಲಾಕ್‌ಡೌನ್ ಸಮಯದಲ್ಲಿ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತುತುಕುಡಿಯ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹಾಗಾಗಿ ಅವರಿಬ್ಬರು ಮೃತಪಟ್ಟಿದ್ದರು.
ವಕೀಲ ಎ ರಾಜರಾಜನ್ ಸಲ್ಲಿಸಿದ್ದ ಪಿಐಎಲ್, ಜೂನ್ 24 ರಂದು ಮುಖ್ಯಮಂತ್ರಿಗಳು ಬಲಿಪಶುಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಆದರೆ ಅವರು ಪೊಲೀಸ್ ದೌರ್ಜನ್ಯದಿಂದ ಮೃತಪಟ್ಟಿರುವುದಾಗಿ ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿಗಳ ಹೇಳಿಕೆಯು ತನಿಖೆಯನ್ನು ದಿಕ್ಕು ತಪ್ಪಿಸುತ್ತಿದೆ ಎಂದು ವಾದಿಸಲಾಗಿದೆ.
ಸಂತ್ರಸ್ತರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿಯ ಹೇಳಿಕೆಯು ಅನುಚಿತವೆಂದು ಅರ್ಜಿ ಉಲ್ಲೇಖಿಸಿದೆ.
ಸಂತ್ರಸ್ತರ ಕುಟುಂಬ ಸದಸ್ಯರ ಹೇಳಿಕೆಗಳನ್ನು ಉಲ್ಲೇಖಿಸಿ, ಮೃತ ವ್ಯಕ್ತಿಗಳನ್ನು ಕ್ರಿಮಿನಲ್ ಪ್ರಕರಣದಲ್ಲಿ ರಿಮಾಂಡ್ ಮಾಡುವ ಮೊದಲು ತುತುಕುಡಿಯ ಸಾಥನ್‌ಕುಲಂ ಪೊಲೀಸ್ ಠಾಣೆಯ ಪೊಲೀಸರಿಂದ ತೀವ್ರ ದೈಹಿಕ ಹಿಂಸೆಗೆ ಒಳಗಾಗಿದ್ದರು ಹಾಗೂ ಅವರ ಸಾವಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವುದು ಕಾರಣ ಎಂದು ಅರ್ಜಿ ಹೇಳಿದೆ.
ಈ ಪ್ರಕರಣವು ತಮಿಳುನಾಡಿನಾದ್ಯಂತ ಆಕ್ರೋಶವನ್ನು ಹುಟ್ಟು ಹಾಕಿತು, ಅಲ್ಲದೆ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ವಿಚಾರಣೆ ನಡೆಸಿತು.
ಜುಲೈ 1 ರಂದು ಹೈಕೋರ್ಟ್‌ನ ನಿರ್ದೇಶನದ ಅನುಸಾರವಾಗಿ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಸಿಐಡಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣದಲ್ಲಿ ಕೆಲವು ಪೊಲೀಸರು ಸಂತ್ರಸ್ತರಿಗೆ ಹಿಂಸೆ ನೀಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದೆ.
ಈ ಸಂಬಂಧ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ನಾಲ್ಕು ಅಧಿಕಾರಿಗಳನ್ನು ಬಂಧಿಸಲಾಗಿದೆ.
ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರ ಬಂಧನ


