Homeಮುಖಪುಟತಮಿಳುನಾಡು ಲಾಕಪ್ ಡೆತ್: ಮುಖ್ಯಮಂತ್ರಿಯ ಗೃಹಖಾತೆ ತಡೆಹಿಡಿಯುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ

ತಮಿಳುನಾಡು ಲಾಕಪ್ ಡೆತ್: ಮುಖ್ಯಮಂತ್ರಿಯ ಗೃಹಖಾತೆ ತಡೆಹಿಡಿಯುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ

ಅರ್ಜಿಯೂ ಗೃಹಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಯು ಬಲಿಪಶುಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದೆ.

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಗೃಹಖಾತೆಯನ್ನು ಪಿ ಜಯರಾಜ್ ಮತ್ತು ಜೆ ಬೆನ್ನಿಕ್ಸ್ ಲಾಕಪ್ ಡೆತ್ ಪ್ರಕರಣದ ತನಿಖೆ ಮುಗಿಸುವವರೆಗೆ ತಡೆಹಿಡಿಯಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಜಯರಾಜ್ ಮತ್ತು ಅವರ 31 ವರ್ಷದ ಮಗ ಬೆನ್ನಿಕ್ಸ್ ರನ್ನು ಜೂನ್ 19 ರಂದು ಲಾಕ್‌ಡೌನ್ ಸಮಯದಲ್ಲಿ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತುತುಕುಡಿಯ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹಾಗಾಗಿ ಅವರಿಬ್ಬರು ಮೃತಪಟ್ಟಿದ್ದರು.

ವಕೀಲ ಎ ರಾಜರಾಜನ್ ಸಲ್ಲಿಸಿದ್ದ ಪಿಐಎಲ್, ಜೂನ್ 24 ರಂದು ಮುಖ್ಯಮಂತ್ರಿಗಳು ಬಲಿಪಶುಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಆದರೆ ಅವರು ಪೊಲೀಸ್ ದೌರ್ಜನ್ಯದಿಂದ ಮೃತಪಟ್ಟಿರುವುದಾಗಿ ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿಗಳ ಹೇಳಿಕೆಯು ತನಿಖೆಯನ್ನು ದಿಕ್ಕು ತಪ್ಪಿಸುತ್ತಿದೆ ಎಂದು ವಾದಿಸಲಾಗಿದೆ.

ಸಂತ್ರಸ್ತರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿಯ ಹೇಳಿಕೆಯು ಅನುಚಿತವೆಂದು ಅರ್ಜಿ ಉಲ್ಲೇಖಿಸಿದೆ.

ಸಂತ್ರಸ್ತರ ಕುಟುಂಬ ಸದಸ್ಯರ ಹೇಳಿಕೆಗಳನ್ನು ಉಲ್ಲೇಖಿಸಿ, ಮೃತ ವ್ಯಕ್ತಿಗಳನ್ನು ಕ್ರಿಮಿನಲ್ ಪ್ರಕರಣದಲ್ಲಿ ರಿಮಾಂಡ್ ಮಾಡುವ ಮೊದಲು ತುತುಕುಡಿಯ ಸಾಥನ್‌ಕುಲಂ ಪೊಲೀಸ್ ಠಾಣೆಯ ಪೊಲೀಸರಿಂದ ತೀವ್ರ ದೈಹಿಕ ಹಿಂಸೆಗೆ ಒಳಗಾಗಿದ್ದರು ಹಾಗೂ ಅವರ ಸಾವಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವುದು ಕಾರಣ ಎಂದು ಅರ್ಜಿ ಹೇಳಿದೆ.

ಈ ಪ್ರಕರಣವು ತಮಿಳುನಾಡಿನಾದ್ಯಂತ ಆಕ್ರೋಶವನ್ನು ಹುಟ್ಟು ಹಾಕಿತು, ಅಲ್ಲದೆ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ವಿಚಾರಣೆ ನಡೆಸಿತು.

ಜುಲೈ 1 ರಂದು ಹೈಕೋರ್ಟ್‌ನ ನಿರ್ದೇಶನದ ಅನುಸಾರವಾಗಿ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಸಿಐಡಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣದಲ್ಲಿ ಕೆಲವು ಪೊಲೀಸರು ಸಂತ್ರಸ್ತರಿಗೆ ಹಿಂಸೆ ನೀಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದೆ.

ಈ ಸಂಬಂಧ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ನಾಲ್ಕು ಅಧಿಕಾರಿಗಳನ್ನು ಬಂಧಿಸಲಾಗಿದೆ.


ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...