Homeಮುಖಪುಟಕಾರ್ಯಕರ್ತರ ಮೇಲೆ ಕಲ್ಲು ಎಸೆದ ತಮಿಳುನಾಡು ಸಚಿವ!

ಕಾರ್ಯಕರ್ತರ ಮೇಲೆ ಕಲ್ಲು ಎಸೆದ ತಮಿಳುನಾಡು ಸಚಿವ!

- Advertisement -
- Advertisement -

ಕಾರ್ಯಕ್ರಮವೊಂದರಲ್ಲಿ ತನಗೆ ಕುರ್ಚಿ ತರಲು ವಿಳಂಬ ಮಾಡಿದರು ಎನ್ನುವ ಕಾರಣಕ್ಕೆ ತಮಿಳುನಾಡಿನ ಸಚಿವರೊಬ್ಬರು ಮಂಗಳವಾರ ತಾಳ್ಮೆ ಕಳೆದುಕೊಂಡು ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ಎಸೆದಿರುವುದು ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ANI ಸುದ್ದಿ ಸಂಸ್ಥೆ ವಿಡಿಯೋದೊಟ್ಟಿಗೆ ಟ್ವೀಟ್ ಮಾಡಿದೆ. ನಾಳೆ ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನಾಳೆ ಭಾಗವಹಿಸಲಿದ್ದಾರೆ. ಹಾಗಾಗಿ, ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಎಸ್‌ಎಂ ನಾಸರ್ ಅವರು ಕಾರ್ಯಕ್ರಮದ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾಗ ಕಾರ್ಯಕರ್ತರ ಮೇಲೆ ಕಲ್ಲು ಎಸೆದಿದ್ದಾರೆ ಎಂದು ಹೇಳಲಾಗಿದೆ.

ಪಕ್ಷದ ಕಾರ್ಯಕರ್ತ ತನಗೆ ಕುರ್ಚಿ ತರಲು ವಿಳಂಬ ಮಾಡಿದ್ದಕ್ಕೆ ಸಚಿವರು ಕೋಪಗೊಂಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಳೆದ ವ‍ರ್ಷ ಈ ಸಚಿವರು, “ನರೇಂದ್ರ ಮೋದಿ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ವಿಧಿಸಿದೆ. ಹಾಗಾಗಿ ಹಾಲಿನ ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ಸುದ್ದಿಯ ಹೆಡ್‌ಲೈನ್ ಆಗಿದ್ದರು. ಇದೀಗ ಕಾರ್ಯಕರ್ತರ ಮೇಲೆ ಕಲ್ಲು ತೂರಾಡಿ ಸುದ್ದಿಯಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಗನ್ ಮೋಹನ್ ರೆಡ್ಡಿಯನ್ನು ಡ್ರಗ್ ಲಾರ್ಡ್ ಪ್ಯಾಬ್ಲೋ ಎಸ್ಕೋಬಾರ್‌ಗೆ ಹೋಲಿಸಿದ ಚಂದ್ರಬಾಬು ನಾಯ್ಡು

0
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ ಮುಖ್ಯಮಂತ್ರಿ ವೈಎಸ್ ಜಗನ್‌ಮೋಹನ್ ರೆಡ್ಡಿ ವಿರುದ್ಧ ಇಂದು ರಾಜ್ಯ ವಿಧಾನಸಭೆಯಲ್ಲಿ ಸೇಡು ತೀರಿಸಿಕೊಂಡಿದ್ದು, ಅವರನ್ನು ಕೊಲಂಬಿಯಾದ ಡ್ರಗ್ ಲಾರ್ಡ್ ಪ್ಯಾಬ್ಲೋ ಎಸ್ಕೋಬಾರ್‌ಗೆ ಹೋಲಿಸಿದ್ದಾರೆ. ಇಂಡಿಯಾ...