Homeಮುಖಪುಟತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

36 ವರ್ಷದ ದಲಿತ ಶಾಸಕರೊಬ್ಬರು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

- Advertisement -
- Advertisement -

ತಮಿಳುನಾಡಿನ ಎಐಎಡಿಎಂಕೆ ಶಾಸಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು, ಈ ಸುದ್ಧಿ ರಾಜ್ಯದಾದ್ಯಂತ ಶರವೇಗದಲ್ಲಿ ವೈರಲ್ ಆಗಿತ್ತು. ಆದರೆ, ಯುವತಿಯ ತಂದೆ, “ತನ್ನ ಮಗಳನ್ನು ಅಪಹರಿಸಿ, ತಮ್ಮ ನಂಬಿಕೆಯನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿ, ಆತ್ಮಹತ್ಯೆಗೆ ಯತ್ನಿಸಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳುವ ಮೊದಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ದಲಿತ ಸಮುದಾಯಕ್ಕೆ ಸೇರಿದ 36 ವರ್ಷದ ಶಾಸಕ ಪ್ರಭು ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸೌಂದರ್ಯ ಎಂಬ ಬ್ರಾಹ್ಮಣ ಯುವತಿಯನ್ನು ವಿವಾಹವಾಗಿದ್ದರು. ಇದನ್ನು ಒಪ್ಪದ ಯುವತಿಯ ತಂದೆ ಎಸ್‌.ಸ್ವಾಮಿನಾಥನ್ ಅಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು.

ಇದನ್ನೂ ಓದಿ: 19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

“ಪ್ರಭು ನಮಗೆ ಹಲವು ವರ್ಷಗಳಿಂದ ಪರಿಚಯವಿದ್ದು, ನನ್ನ ಮಗನಂತೆ ಇದ್ದ. ಈಗ ಆ ನಂಬಿಕೆಯನ್ನು ಹಾಳುಮಾಡಿದ್ದಾನೆ.  ನನ್ನ ಮಗಳಿಗೆ ಆಮಿಷವೊಡ್ಡಿದ್ದಾನೆ. ಆಕೆಗೆ ಬೆದರಿಕೆ ಒಡ್ಡಿ ವಿವಾಹವಾಗಿದ್ದಾನೆ. ನನಗೆ ಜಾತಿ ಸಮಸ್ಯೆಯಲ್ಲ. ಆದರೆ ಅವರಿಬ್ಬರ ನಡುವೆ 17 ವರ್ಷಗಳ ವಯಸ್ಸಿನ ಅಂತರವಿದೆ. ಅಕ್ಟೋಬರ್ 1 ರಂದು 4 ಗಂಟೆಯ ಸುಮಾರಿಗೆ ತನ್ನ ಮಗಳನ್ನು ಅಪರಿಹಿಸಿದ್ದಾನೆ” ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ಆದರೆ ಪ್ರಭು ಅಪಹರಣದ ಆರೋಪವನ್ನು ತಿರಸ್ಕರಿಸಿ, ಇದನ್ನು ಸ್ಪಷ್ಟಪಡಿಸಲು ಸೌಂದರ್ಯ ಅವರೊಂದಿಗಿನ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಇದು ಈಗ ವೈರಲ್ ಆಗುತ್ತಿದೆ. ಯುವತಿಯ ಪೋಷಕರ ಆರೋಪಗಳನ್ನು ತಿರಸ್ಕರಿಸಿದ ಪ್ರಭು, “ಈ ವಿವಾಹಕ್ಕೆ ಅವರ ಅನುಮತಿ ಕೋರಿದ್ದೆ. ಆದರೆ ಅವರು ಒಪ್ಪಲಿಲ್ಲ. ನಾವಿಬ್ಬರೂ ಪರಸ್ಪರ ಪ್ರೀತಿಸಿದ್ದೇವೆ. ನನ್ನ ತಂದೆ ತಾಯಿಯ ಒಪ್ಪಿಗೆಯೊಂದಿಗೆ ಈಗ ವಿವಾಹವಾಗಿದ್ದೇವೆ. ಯುವತಿಯ ಪೋಷಕರು ಆರೋಪಿಸುವಂತೆ ಯಾವುದೇ ಕೊಲೆ ಬೆದರಿಕೆಯನ್ನೂ ನಾನು ಹಾಕಿಲ್ಲ” ಎಂದು ವೀಡಿಯೋದಲ್ಲಿ ಹೆಳಿದ್ದಾರೆ.

ಇದನ್ನೂ ಓದಿ: ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ವಿವಾಹ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ತಂದೆಯ ಮೇಲೆ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಆತ್ಮಹತ್ಯೆ ಪ್ರಯತ್ನದ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಜಾತಿಯಾಧಾರಿತ ಮ್ಯಾಟ್ರಿಮೋನಿಗೆ ಪರ್ಯಾಯ; “ಚೇಂಜ್ ಮೇಕರ್ಸ್ ಮ್ಯಾಟ್ರಿಮೋನಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...