Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...