Homeದಲಿತ್ ಫೈಲ್ಸ್ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

- Advertisement -
- Advertisement -

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

” ನಾನು ದಲಿತ ಸಮುದಾಯ ಎಂಬ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಕರೂರಿನಲ್ಲಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಅರ್ಜಿ ದೂರು ನೀಡಿದ್ದು, “ಇದು ಜಾತಿ ಆಧಾರಿತ ತಾರತಮ್ಯ” ಎಂದು ದೂರಿದ್ದಾರೆ.

ತೊಗಮಲೈ ಒಕ್ಕೂಟದ ಚಿನ್ನ ರೆಡ್ಡಿಪಟ್ಟಿಯ ನಿವಾಸಿ ಆರ್. ನಿರೋಷಾ ಅವರನ್ನು ಸೆಪ್ಟೆಂಬರ್ 10, 2025 ರಂದು ಶಾಲೆಯಲ್ಲಿ ಹೊಸ ಯೋಜನೆ ಪ್ರಾರಂಭಿಸಿದಾಗ ಸಿಎಮ್‌ಬಿಎಸ್ ಅಡಿಯಲ್ಲಿ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ ಅಡುಗೆಯವರಾಗಿ ನೇಮಿಸಲಾಯಿತು. ಶಾಲೆಯಲ್ಲಿ ಈ ಯೋಜನೆಯಡಿ ಕೆಲಸ ಮಾಡುತ್ತಿರುವ ಇಬ್ಬರು ಅಡುಗೆಯವರಲ್ಲಿ ನಿರೋಷಾ ಕೂಡ ಒಬ್ಬರಾಗಿದ್ದರು.

ಈ ಬಗ್ಗೆ ಮಾತನಾಡಿರುವ ನಿರೋಷಾ, “ಈ ಯೋಜನೆಯ ಲಾಭ ಪಡೆಯುತ್ತಿರುವ ಕೆಲವು ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ನಾನು ಅಡುಗೆ ಮಾಡುವುದನ್ನು ವಿರೋಧಿಸಿದ್ದಾರೆ. ಡಿಸೆಂಬರ್ 16 ರಂದು, ಮುಖ್ಯೋಪಾಧ್ಯಾಯಿನಿ ನನಗೆ ಕೆಲಸ ಬಿಡುವಂತೆ ಹೇಳಿದರು. ಪೋಷಕರು ತಮ್ಮ ಮಕ್ಕಳನ್ನು ಊಟಕ್ಕೆ ಕಳುಹಿಸುತ್ತಿಲ್ಲ ಎಂದು ಶಿಕ್ಷಕಿ ಕಾರಣ ನೀಡಿದ್ದಾರೆ” ಎಂದು ಹೇಳಿದರು.

ಮರುದಿನ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಶಾಲೆಗೆ ತೆರಳಿದಾಗ, ನನ್ನ ಜಾಗದಲ್ಲಿ ಮತ್ತೊಬ್ಬ ಮಹಿಳೆ ಕೆಲಸ ಮಾಡುತ್ತಿರುವುದು ಕಂಡುಬಂದಿತು ಎಂದು ಅವರು ಹೇಳಿದರು. ಹೊಸದಾಗಿ ನೇಮಕವಾದ ಮಹಿಳೆ, ತಾನು ಮೇಲ್ಜಾತಿ ಎಂದು ಹೇಳಿಕೊಂಡರು. ನಂತರ ನಾನು ಬ್ಲಾಕ್ ಮಿಷನ್ ಮ್ಯಾನೇಜರ್ (ಬಿಎಂಎಂ) ಮಹಲಿರ್ ತಿಟ್ಟಮ್ ಅವರನ್ನು ಸಂಪರ್ಕಿಸಿದರು, ಅವರು ಮುಖ್ಯೋಪಾಧ್ಯಾಯಿನಿ ತೆಗೆದುಕೊಂಡ ನಿಲುವನ್ನು ಪುನರುಚ್ಚರಿಸಿದರು” ಎಂದರು.

“ಡಿಸೆಂಬರ್ 18 ರಂದು, ನಿರೋಷಾ ತೋಗಮಲೈ ಪೊಲೀಸ್ ಠಾಣೆಯಲ್ಲಿ ಸಿಎಸ್ಆರ್ ದೂರು ಸಲ್ಲಿಸಿದರು. ಅದರಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಭಾನುಮತಿಯವರ ಒತ್ತಡದ ಮೇರೆಗೆ ತೋಗಮಲೈ ಒಕ್ಕೂಟದ ಬಿಎಂಎಂ ಕರ್ತವ್ಯಕ್ಕೆ ಹಾಜರಾಗುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ” ಎಂದು ಹೇಳಲಾಗಿತ್ತು.

ವಿಚಾರಣೆಯ ಸಮಯದಲ್ಲಿ, “ನಿರೋಷಾ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿಲ್ಲ. ಅವರು ಕೆಲ ದಿನಗಳಿಂದ ಕೆಲಸಕ್ಕೆ ಗೈರುಹಾಜರಾಗಿದ್ದಾರೆ” ಎಂದು ಬಿಎಂಎಂ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...