Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...