Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...