Homeಮುಖಪುಟತಮಿಳುನಾಡು ಚುನಾವಣೆ: ಡಿಎಂಕೆ ಒಕ್ಕೂಟಕ್ಕೆ ಸ್ಪಷ್ಟ ಬಹುಮತವೆಂದ ABP-ಸಿ ವೋಟರ್ ಸಮೀಕ್ಷೆ

ತಮಿಳುನಾಡು ಚುನಾವಣೆ: ಡಿಎಂಕೆ ಒಕ್ಕೂಟಕ್ಕೆ ಸ್ಪಷ್ಟ ಬಹುಮತವೆಂದ ABP-ಸಿ ವೋಟರ್ ಸಮೀಕ್ಷೆ

ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಡಿಎಂಕೆ ಮೈತ್ರಿಕೂಟವು ಒಟ್ಟು 39 ಸ್ಥಾನಗಳಲ್ಲಿ 38 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

- Advertisement -
- Advertisement -

ಈ ವರ್ಷದ ಮೇ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಜಯಲಲಿತಾ ಮತ್ತು ಕರುಣಾನಿಧಿಯವರಿಲ್ಲದೆ ನಡೆಯುತ್ತಿರುವ ಮೊದಲ ಮಹಾ ಚುನಾವಣೆ ಇದಾಗಿದ್ದು ಆಡಳಿತರೂಡ AIMDMK ಒಕ್ಕೂಟವನ್ನು ಕಿತ್ತೊಗೆದು ಡಿಎಂಕೆ ಒಕ್ಕೂಟ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ-ಕಾಂಗ್ರೆಸ್ ಒಕ್ಕೂಟವು (ಯುಪಿಎ) 162 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ABP-ಸಿ ವೋಟರ್ ಸಮೀಕ್ಷೆ ಹೇಳಿದೆ. ಆಡಳಿತರೂಡ AIMDMK-ಬಿಜೆಪಿ (ಎನ್‌ಡಿಎ) ಒಕ್ಕೂಟವೇ ಕೇವಲ 64 ಸ್ಥಾನಗಳಿಗೆ ಕುಸಿಯಲಿದೆ ಎನ್ನಲಾಗಿದೆ.

2016 ರ ಚುನಾವಣೆಯಲ್ಲಿ ಆಡಳಿತರೂಡ ಎನ್‌ಡಿಎ 136 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ ಯುಪಿಎ 98 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿಯ ಒಟ್ಟು ಮತಗಳಿಕೆಯಲ್ಲಿ ಡಿಎಂಕೆ ಒಕ್ಕೂಟವು ಶೇ.1.7 ರಷ್ಟು ಮತಗಳಿಕೆಯನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. 2016ರಲ್ಲಿ ಶೇ. 39.4 ರಷ್ಟು ಮತ ಪಡೆದಿದ್ದ ಅದು ಈ ಬಾರಿ ಶೇ. 41.1 ಗಳಿಸಲಿದೆ ಎನ್ನಲಾಗಿದೆ.

AIMDMK ಒಕ್ಕೂಟವು ಐದು ವರ್ಷಗಳ ಆಡಳಿತ ಪೂರೈಸುತ್ತಿದೆ. ಈ ಐದು ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಗಮನಾರ್ಹ ಸಾಧನೆ ಕಂಡುಬಂದಿಲ್ಲ. ಅಲ್ಲದೇ ಅದು ತನ್ನೊಳಗೆ ಓ ಪನ್ನೀರಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಗುಂಪುಗಳಾಗಿ ಒಡೆದುಹೋಗಿದೆ. ಹಾಗಾಗಿ ವಿಭಜಿತ AIMDMK ಒಕ್ಕೂಟದ ಎದುರು ಬಲಿಷ್ಠ ಡಿಎಂಕೆಗೆ ಜಯ ಸುಲಭ ಎಂದು ಸಮೀಕ್ಷೆ ಹೇಳಿದೆ.

ಕಳೆದ ಚುನಾವಣೆಯಂತೆಯೇ ಈ ಬಾರಿಯು AIMDMK ಒಕ್ಕೂಟವು ಬಿಜೆಪಿ ಜೊತೆ ಮೈತ್ರಿ ಮುಂದುವರೆಸುದಾಗಿದೆ ಘೋಷಿಸಿದೆ. ವೆಟ್ರಿವೇಲ್ ಯಾತ್ರೆಯ ಸಂಬಂಧ ಈ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವೇರ್ಪಟ್ಟಿತ್ತು. ಅದನ್ನು ಬಗೆಹರಿಸಿಕೊಂಡು ಒಟ್ಟಿಗೆ ಚುನಾವಣೆ ಎದುರಿಸಲು ಅವು ನಿರ್ಧರಿಸಿವೆ. ಅದೇ ರೀತಿಯಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಸಹ ಮುಂದುವರೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೂ ಒಟ್ಟು 39 ಸ್ಥಾನಗಳಲ್ಲಿ 38 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.


ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...