Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...