Homeದಲಿತ್ ಫೈಲ್ಸ್ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

- Advertisement -
- Advertisement -

ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧದ ಆರೋಪದ ಮೇಲೆ ಪರಯರ್ ಸಮುದಾಯದ 28 ವರ್ಷದ ದಲಿತ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೆಪ್ಟೆಂಬರ್ 15 ರ ಸೋಮವಾರ ತಡರಾತ್ರಿ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ನಡೆದಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಯುವಕನ ಹತ್ಯೆಯು ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದು, ಪದೇಪದೇ ದೂರುಗಳು ಬಂದರೂ ಪೊಲೀಸರು ಅಪರಾಧವನ್ನು ತಡೆಯಲು ವಿಫಲರಾಗಿದ್ದಾರೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದಾರೆ.

ಮೃತನನ್ನು ಡಿಎಂಇಯಲ್ಲಿ ಡಿಪ್ಲೊಮಾ ಪದವೀಧರ ಮತ್ತು ಆದಿಯಮಂಗಲಂ ಗ್ರಾಮದ ದ್ವಿಚಕ್ರ ವಾಹನ ಮೆಕ್ಯಾನಿಕ್ ಆಗಿರುವ ಕೆ. ವೈರಮುತ್ತು ಎಂದು ಗುರುತಿಸಲಾಗಿದ್ದು, ಚೆನ್ನೈನಲ್ಲಿ ಉದ್ಯೋಗದಲ್ಲಿರುವ ಎಂಬಿಎ ಪದವೀಧರೆ ಮಾಲಿನಿ (26) ಅವರೊಂದಿಗೆ ಹಲವು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆಕೆಯ ಕುಟುಂಬವು ಈ ಸಂಬಂಧವನ್ನು ವಿರೋಧಿಸಿತ್ತು.

ವರದಿಗಳ ಪ್ರಕಾರ, ರಾತ್ರಿ 10.30 ರ ಸುಮಾರಿಗೆ ವೈರಮುತ್ತು ಮನೆಗೆ ಹೋಗುತ್ತಿದ್ದಾಗ, ಪುರುಷರ ಗುಂಪೊಂದು ಅವರನ್ನು ಅಡ್ಡಗಟ್ಟಿ ಕುಡುಗೋಲುಗಳಿಂದ ಹಲ್ಲೆ ನಡೆಸಿತು. ಅವರ ಕುತ್ತಿಗೆ ಮತ್ತು ಮಣಿಕಟ್ಟುಗಳಿಗೆ ಆಳವಾದ ಗಾಯಗಳಾಗಿದ್ದು, ಗಾಯಾಳುವನ್ನು ಕೂಡಲೇ ಮೈಲಾಡುತುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು.

ಮಾಲಿನಿಯ ತಂದೆ ಪರೈಯರ್ ಸಮುದಾಯಕ್ಕೆ ಸೇರಿದವರಾಗಿದ್ದರೂ, ತಾಯಿ ವಿಜಯಾ ಹಿಂದುಳಿದ ವರ್ಗ (ಬಿಸಿ) ಚೆಟ್ಟಿಯಾರ್ ಸಮುದಾಯದವರು ಎಂದು ವರದಿಯಾಗಿದೆ. ಮಾಲಿನಿಯ ವೈರಮುತ್ತು ಜೊತೆಗಿನ ಸಂಬಂಧ ಮತ್ತು ಅವರ ವಿವಾಹ ಯೋಜನೆಗಳನ್ನು ವಿಜಯಾ ತೀವ್ರವಾಗಿ ವಿರೋಧಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್ 14 ರಂದು, ಪೊಲೀಸರು ಎರಡು ಕುಟುಂಬಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದರು. ಮಾಲಿನಿ ವೈರಮುತ್ತು ಅವರನ್ನು ಮದುವೆಯಾಗುವ ನಿರ್ಧಾರವನ್ನು ಪ್ರತಿಪಾದಿಸಿದರು. ಆದರೆ, ಅವರ ಕುಟುಂಬದ ಪ್ರಬಲ ವಿರೋಧದ ನಂತರವೂ ಯುವಕನೊಂದಿಗೆ ವಾಸಿಸುತ್ತಿದ್ದರು. ಅವರ ಕುಟುಂಬವು ಮದುವೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೊಲೀಸರಿಗೆ ಲಿಖಿತ ಹೇಳಿಕೆಯನ್ನೂ ನೀಡಿತ್ತು.

ವೈರಮುತ್ತು ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳಿಂದ ರಸ್ತೆ ತಡೆದು ಪ್ರತಿಭಟನೆ

ಕೊಲೆಯಾದ ದಿನ, ಮಾಲಿನಿ ತಮ್ಮ ಮದುವೆಯನ್ನು ನೋಂದಾಯಿಸಲು ದಾಖಲೆಗಳನ್ನು ಸಂಗ್ರಹಿಸಲು ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಆ ರಾತ್ರಿ, ವೈರಮುತ್ತು ಅವರನ್ನು ಅಡ್ಡಗಟ್ಟಿ ಕೊಲ್ಲಲಾಯಿತು.

ವೈರಮುತ್ತು ಅವರ ತಾಯಿ ರಾಜಲಕ್ಷ್ಮಿ ಅವರ ದೂರಿನ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕು ವಿಶೇಷ ತಂಡಗಳನ್ನು ರಚಿಸಿದರು. ಮಾಲಿನಿಯ ಸಹೋದರರಾದ ಗುಗನ್ ಮತ್ತು ಗುಣಲ್ ಸೇರಿದಂತೆ ಕನಿಷ್ಠ 10 ಶಂಕಿತರನ್ನು ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬಂಧಿಸಲಾಗಿದೆ.

ಈ ಹತ್ಯೆಯು ಮೈಲಾಡುತುರೈನಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಮಾಲಿನಿ, ವೈರಮುತ್ತು ಅವರ ಸಂಬಂಧಿಕರು ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಸಿಪಿಐ(ಎಂ), ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಮತ್ತು ತಮಿಳುನಾಡು ಅಸ್ಪೃಶ್ಯತಾ ನಿರ್ಮೂಲನಾ ರಂಗದ ಸದಸ್ಯರು ಸೇರಿದಂತೆ 150 ಕ್ಕೂ ಹೆಚ್ಚು ಜನರು ಮೈಲಾಡುತುರೈ ಸರ್ಕಾರಿ ಆಸ್ಪತ್ರೆ ಬಳಿ ಮತ್ತು ಮೈಲಾಡುತುರೈ-ಕುಂಭಕೋಣಂ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ವಿಜಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ವೈರಮುತ್ತು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ವೈರಮುತ್ತು ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ಮಂಗಳವಾರ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತವಾಯಿತು.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಹತ್ಯೆಯನ್ನು ಖಂಡಿಸಿದರು, ಇದನ್ನು ಜಾತಿ ಆಧಾರಿತ ಕೊಲೆ ಎಂದು ಬಣ್ಣಿಸಿದರು ಮತ್ತು ಪದೇ ಪದೇ ಬೆದರಿಕೆಗಳು ಮತ್ತು ದೂರುಗಳ ಹೊರತಾಗಿಯೂ, ಪೊಲೀಸರು ವೈರಮುತ್ತು ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಚೆನ್ನೈ| ಅನ್ಯಜಾತಿ ಯುವತಿಯನ್ನು ಭೇಟಿಯಾದ ದಲಿತ ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...