Homeಮುಖಪುಟತಮಿಳುನಾಡು: ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶಿಸುವಂತೆ ನಿರ್ಣಯ ಮಂಡನೆ

ತಮಿಳುನಾಡು: ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶಿಸುವಂತೆ ನಿರ್ಣಯ ಮಂಡನೆ

- Advertisement -
- Advertisement -

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿ ಅಂಗೀಕರಿಸಲಾಗಿದೆ.

ರಾಜ್ಯದ ನದಿ ತಟದ ಪ್ರದೇಶದ ರೈತರ ಜೀವನವನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲು ನೆರೆಯ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕೆಂದು ತಮಿಳುನಾಡು ವಿಧಾನಸಭೆ ಸೋಮವಾರ ನಿರ್ಣಯವನ್ನು ಅಂಗೀಕರಿಸಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿಧಾನಸಭೆಯಲ್ಲಿ ಇಂದು ನಿಲುವಳಿ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ಅಂಗೀಕರಿಸಿದೆ. ಈ ನಿರ್ಣಯವನ್ನು ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆ ಬೆಂಬಲಿಸಿದೆ. ಕೇಸರಿ ಪಕ್ಷದ ಜೊತೆಗಿನ ಮೈತ್ರಿಯಿಂದ  ಬೇರ್ಪಟ್ಟ ನಂತರ ಇದು ಎಐಎಡಿಎಂಕೆಗೆ ಮೊದಲ ವಿಧಾನಸಭಾ ಅಧಿವೇಶನವಾಗಿದೆ.

ಕರ್ನಾಟಕ ಕೃತಕ ಬಿಕ್ಕಟ್ಟು ಸೃಷ್ಟಿಸುತ್ತಿದೆ ಮತ್ತು ಅಕ್ಟೋಬರ್‌ಗೆ ಅಗತ್ಯವಿರುವ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ನಿರಾಕರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. ಡಿಎಂಕೆ ಸರ್ಕಾರವು ರಾಜ್ಯಕ್ಕೆ ಅಗತ್ಯವಿರುವಷ್ಟು ಕಾವೇರಿ ನೀರನ್ನು ಪಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಇದೇ ವೇಳೆ ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ಬುಧವಾರ ಸಭೆ ನಡೆಸಲು ತೀರ್ಮಾನಿಸಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ನಿಗದಿಪಡಿಸಿದ ನೀರಿನ ಪ್ರಮಾಣವನ್ನು ಬಿಡುಗಡೆಗೆ ನೆರೆ ರಾಜ್ಯಕ್ಕೆ ನಿರ್ದೇಶನಕ್ಕೆ ಒತ್ತಾಯಿಸುತ್ತೇವೆ ಎಂದು ಸಿಎಂ ಸ್ಟ್ಯಾಲಿನ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ಹಮಾಸ್ ಎಂದರೆ ಯಾರು? ಪ್ಯಾಲೆಸ್ತೀನ್‌ನ ಸಶಸ್ತ್ರ ಗುಂಪಿನ ಬಗ್ಗೆ ಇಲ್ಲಿದೆ ಮಾಹಿತಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...