Homeಮುಖಪುಟತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

ತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿರುವ ತಮಿಳುನಾಡಿನ ಕಂದಾಯ ಸಂಘಗಳ ಒಕ್ಕೂಟದ (ಎಫ್‌ಇಆರ್‌ಎ) ಸದಸ್ಯರು ಮಂಗಳವಾರದಿಂದ (ನವೆಂಬರ್ 18) ಪ್ರತಿಭಟನೆ ಆರಂಭಿಸಿದ್ದಾರೆ.

ಅತಿಯಾದ ಕೆಲಸದ ಒತ್ತಡ, ಸಾಕಷ್ಟು ಸಿಬ್ಬಂದಿ ಇಲ್ಲದಿರುವುದು, ಗಡುವಿನ ಒತ್ತಡ, ಸಾಕಷ್ಟು ತರಬೇತಿ ನೀಡದಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಆಡಳಿತದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಎಸ್‌ಐಆರ್‌ (ಸಂಬಂಧಿತ ದಾಖಲೆಗಳ ಡಿಜಿಟಲೈಸೇಶನ್ ಮತ್ತು ದೃಢೀಕರಣ ಕಾರ್ಯ) ಪ್ರಕ್ರಿಯೆ ಬಹಿಷ್ಕರಿಸಿದ್ದಾರೆ.

ಒಕ್ಕೂಟದ ಸದಸ್ಯರು ಬಹಿಷ್ಕಾರ ಆರಂಭಕ್ಕೂ ಮುನ್ನ, ಸೋಮವಾರ (ನವೆಂಬರ್ 17) ಸಂಜೆ ನಡೆದ “ಪೆರುಂದಿರಲ್ (ಸಾಮೂಹಿಕ ಅರ್ಜಿ) ಕಾರ್ಯಕ್ರಮ”ದಲ್ಲಿ ರಾಜ್ಯದ 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (ಕಲೆಕ್ಟರ್‌ಗಳಿಗೆ) ತಮ್ಮ ಬೇಡಿಕೆಗಳ ಪತ್ರ ಸಲ್ಲಿಸಿದ್ದಾರೆ.

ಮಂಗಳವಾರದಿಂದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಒಕ್ಕೂಟ ತಿಳಿಸಿದೆ. “ಇಂದಿನಿಂದ (ಮಂಗಳವಾರ) ನಾವು ಎಸ್‌ಐಆರ್‌ಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಹಾಜರಾಗುತ್ತಿಲ್ಲ” ಎಂದು ಎಫ್‌ಇಆರ್‌ಎ ರಾಜ್ಯ ಸಂಯೋಜಕ ಎಂ.ಪಿ ಮುರುಗಯ್ಯನ್ ಹೇಳಿದ್ದಾರೆ.

ಎಸ್‌ಐಆರ್‌ ಸಂಬಂಧಿತ ಕೆಲಸಗಳನ್ನು ಮಾತ್ರ ಬಹಿಷ್ಕರಿಸಿದ್ದೇವೆ. ಕಂದಾಯ ಇಲಾಖೆಯ ನಿಯಮಿತ ಕೆಲಸಗಳು ಮುಂದುವರಿಯಲಿದ್ದು, ಪ್ರತಿಭಟನೆಯಿಂದ ಅದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುರುಗಯ್ಯನ್ ತಿಳಿಸಿದ್ದಾರೆ.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು, ಹೆಚ್ಚುವರಿ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಬೇಕು ಮತ್ತು ಬಿಎಲ್‌ಒ ಹಂತದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಎಸ್‌ಐಆರ್ ಬಹಿಷ್ಕಾರ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮಧ್ಯರಾತ್ರಿಯವರೆಗೆ ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಮತ್ತು ಪರಿಶೀಲನೆಯ ಹೆಸರಿನಲ್ಲಿ ಪ್ರತಿದಿನ ಮೂರು ವಿಡಿಯೋ ಕಾನ್ಫರೆನ್ಸ್‌ ನಡೆಸುವುದನ್ನು ಒಕ್ಕೂಟ ವಿರೋಧಿಸಿದೆ.

ಡಿಸೆಂಬರ್ 4 ರಂದು ಮುಕ್ತಾಯಗೊಳ್ಳಲಿರುವ ಎಸ್‌ಐಆರ್ ಪ್ರಕ್ರಿಯೆಯ ಫಾರ್ಮ್‌ಗಳನ್ನು ವಿತರಿಸುವುದು ಮತ್ತು ಸಂಗ್ರಹಿಸುವುದು, ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದು ಮತ್ತು ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಕಂದಾಯ ಇಲಾಖೆಯ ಸಿಬ್ಬಂದಿಗೆ ವಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...