ಚೆನ್ನೈನಲ್ಲಿ ಯುವತಿಯೊಬ್ಬರ ಮೇಲೆ ಆಕೆಯ ಅಪ್ರಾಪ್ತ ವಯಸ್ಸಿನಿಂದಲೂ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸುವಂತೆ ಒತ್ತಡ ಹೇರಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆರೋಪಿಗಳು ಬಾಲಕಿಯ ಬೆತ್ತಲೆ ಚಿತ್ರಗಳನ್ನು ತೆಗೆದುಕೊಂಡು, ಗರ್ಭಪಾತ ಮಾಡಿಸಿಕೊಳ್ಳದಿದ್ದರೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಚೆನ್ನೈನಲ್ಲಿ ‘ಶಿರಡಿಪುರಂ ಸರ್ವ ಶಕ್ತಿ ಪೀಠದ ಸಾಯಿಬಾಬಾ ಕೊಯಿಲ್’ ಎಂಬ ದೇವಸ್ಥಾನವನ್ನು ನಡೆಸುತ್ತಿದ್ದಾರೆ. ಯುವತಿ 16 ವರ್ಷದವರಿದ್ದಾಗಿನಿಂದ ಆಕೆಯ ಮೇಲೆ ಅತ್ಯಾಚಾರ ಎಸಗಲು ಆರೋಪಿ ಪುಷ್ಪಲತಾ ಸತ್ಯ ನಾರಾಯಣನ್‌ಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“12 ನೇ ತರಗತಿಯಲ್ಲಿದ್ದಾಗ ನಾನು ನನ್ನ ಅಜ್ಜಿಯ ಮನೆಯಲ್ಲಿಯೇ ಇದ್ದೆ. ನಾವು ಆಗಾಗ್ಗೆ ದೇವಸ್ಥಾನಕ್ಕೆ ಹೋಗುತ್ತಿದ್ದೆವು. 2016 ರ ಏಪ್ರಿಲ್ 12 ರಂದು ನಾನು ದೇವಸ್ಥಾನಕ್ಕೆ ಹೋದಾಗ ಪುಷ್ಪಲತಾ ನನಗೆ ಜ್ಯೂಸ್ ಕೊಟ್ಟರು. ಎರಡು ಗಂಟೆಗಳ ನಂತರ ನನಗೆ ಪ್ರಜ್ಞೆ ಬಂದಾಗ, ನಾನು ಬಟ್ಟೆ ಇಲ್ಲದೆ ಹಾಸಿಗೆಯ ಮೇಲೆ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಪಕ್ಕದಲ್ಲಿ ಮಲಗಿದ್ದೆ” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ
ಮುಂದುವರೆದು, ತನ್ನ ಮೇಲೆ ಪಾಪದ ಹೊರೆ ಇದೆ ಎಂದು ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಹೇಳಿದ್ದು, ಆಕೆಯನ್ನು ಅದರಿಂದ ಮುಕ್ತಗೊಳಿಸಿರುವುದಾಗಿ ತಿಳಿಸಿದರು. ಬಳಿಕ ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
2018 ರಲ್ಲಿ ಸಂತ್ರಸ್ತೆ ಮದುವೆಯಾಗಿತ್ತು. ಆಕೆಯ ಪತಿ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿದ ನಂತರ, ಆರೋಪಿ ನಾರಾಯಣನ್ ಮಾರ್ಚ್ 2020 ರಲ್ಲಿ ಮತ್ತೆ ಸಂತ್ರಸ್ತೆಗೆ ಕರೆ ಮಾಡಿ, ಭೇಟಿ ಮಾಡುವಂತೆ ಹೇಳಿದರು. ಇಲ್ಲದಿದ್ದರೆ ಆಕೆಯ ಪತಿಗೆ ನನ್ನ ಬೆತ್ತಲೆ ಚಿತ್ರಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಹಲವು ತಿಂಗಳುಗಳು ಅವರು ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಜುಲೈ 2020 ತಾನು ಗರ್ಭಿಣಿ ಎಂದು ತಿಳಿದ ಸಂತ್ರಸ್ತೆಗೆ ತಿಳಿದಿದೆ. ಆದರೆ ಆರೋಪಿ ದಂಪತಿ ಗರ್ಭಪಾತ ಮಾಡಿಸುವಂತೆ ಬೆದರಿಕೆ ಹಾಕಿದರು. ಆದರೆ, ಅದಕ್ಕೆ ಯುವತಿ ಒಪ್ಪದೆ ಈ ವರ್ಷದ ಜನವರಿಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಇಷ್ಟಾದರೂ ಬೀಡದ ಆರೋಪಿಗಳು ಸಂತ್ರಸ್ತೆಯನ್ನು ಮತ್ತೊಮ್ಮೆ ಭೇಟಿಯಾಗುವಂತೆ ಒತ್ತಾಯಿಸಿದ್ದರು. ಈ ವೇಳೆ ಸಂತ್ರಸ್ತೆ ಪತಿಗೆ ಮಾಹಿತಿ ನೀಡಿದ್ದು, ನಗರದ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದೂರಿನ ಆಧಾರದಲ್ಲಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಬ್ಬರ ವಿರುದ್ಧ IPC 328, IPS 376 (ಅತ್ಯಾಚಾರ), IPC 506 (ii) (ಕ್ರಿಮಿನಲ್ ಬೆದರಿಕೆ), POCSO ಕಾಯಿದೆ, ಸೆಕ್ಷನ್ 5 (f) ,ಸೇರಿದಂತೆ ಒಂಬತ್ತು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


