Homeಮುಖಪುಟಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

- Advertisement -
- Advertisement -

ಚೆನ್ನೈನಲ್ಲಿ ಯುವತಿಯೊಬ್ಬರ ಮೇಲೆ ಆಕೆಯ ಅಪ್ರಾಪ್ತ ವಯಸ್ಸಿನಿಂದಲೂ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸುವಂತೆ ಒತ್ತಡ ಹೇರಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಆರೋಪಿಗಳು ಬಾಲಕಿಯ ಬೆತ್ತಲೆ ಚಿತ್ರಗಳನ್ನು ತೆಗೆದುಕೊಂಡು, ಗರ್ಭಪಾತ ಮಾಡಿಸಿಕೊಳ್ಳದಿದ್ದರೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಚೆನ್ನೈನಲ್ಲಿ ‘ಶಿರಡಿಪುರಂ ಸರ್ವ ಶಕ್ತಿ ಪೀಠದ ಸಾಯಿಬಾಬಾ ಕೊಯಿಲ್’ ಎಂಬ ದೇವಸ್ಥಾನವನ್ನು ನಡೆಸುತ್ತಿದ್ದಾರೆ. ಯುವತಿ 16 ವರ್ಷದವರಿದ್ದಾಗಿನಿಂದ ಆಕೆಯ ಮೇಲೆ ಅತ್ಯಾಚಾರ ಎಸಗಲು ಆರೋಪಿ ಪುಷ್ಪಲತಾ ಸತ್ಯ ನಾರಾಯಣನ್‌ಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“12 ನೇ ತರಗತಿಯಲ್ಲಿದ್ದಾಗ ನಾನು ನನ್ನ ಅಜ್ಜಿಯ ಮನೆಯಲ್ಲಿಯೇ ಇದ್ದೆ. ನಾವು ಆಗಾಗ್ಗೆ ದೇವಸ್ಥಾನಕ್ಕೆ ಹೋಗುತ್ತಿದ್ದೆವು. 2016 ರ ಏಪ್ರಿಲ್ 12 ರಂದು ನಾನು ದೇವಸ್ಥಾನಕ್ಕೆ ಹೋದಾಗ ಪುಷ್ಪಲತಾ ನನಗೆ ಜ್ಯೂಸ್ ಕೊಟ್ಟರು. ಎರಡು ಗಂಟೆಗಳ ನಂತರ ನನಗೆ ಪ್ರಜ್ಞೆ ಬಂದಾಗ, ನಾನು ಬಟ್ಟೆ ಇಲ್ಲದೆ ಹಾಸಿಗೆಯ ಮೇಲೆ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಪಕ್ಕದಲ್ಲಿ ಮಲಗಿದ್ದೆ” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಮುಂದುವರೆದು, ತನ್ನ ಮೇಲೆ ಪಾಪದ ಹೊರೆ ಇದೆ ಎಂದು ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಹೇಳಿದ್ದು, ಆಕೆಯನ್ನು ಅದರಿಂದ ಮುಕ್ತಗೊಳಿಸಿರುವುದಾಗಿ ತಿಳಿಸಿದರು. ಬಳಿಕ ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

2018 ರಲ್ಲಿ ಸಂತ್ರಸ್ತೆ ಮದುವೆಯಾಗಿತ್ತು. ಆಕೆಯ ಪತಿ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿದ ನಂತರ, ಆರೋಪಿ ನಾರಾಯಣನ್ ಮಾರ್ಚ್ 2020 ರಲ್ಲಿ ಮತ್ತೆ ಸಂತ್ರಸ್ತೆಗೆ ಕರೆ ಮಾಡಿ, ಭೇಟಿ ಮಾಡುವಂತೆ ಹೇಳಿದರು. ಇಲ್ಲದಿದ್ದರೆ ಆಕೆಯ ಪತಿಗೆ ನನ್ನ ಬೆತ್ತಲೆ ಚಿತ್ರಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಹಲವು ತಿಂಗಳುಗಳು ಅವರು ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜುಲೈ 2020 ತಾನು ಗರ್ಭಿಣಿ ಎಂದು ತಿಳಿದ ಸಂತ್ರಸ್ತೆಗೆ ತಿಳಿದಿದೆ. ಆದರೆ ಆರೋಪಿ ದಂಪತಿ ಗರ್ಭಪಾತ ಮಾಡಿಸುವಂತೆ ಬೆದರಿಕೆ ಹಾಕಿದರು. ಆದರೆ, ಅದಕ್ಕೆ ಯುವತಿ ಒಪ್ಪದೆ ಈ ವರ್ಷದ ಜನವರಿಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಇಷ್ಟಾದರೂ ಬೀಡದ ಆರೋಪಿಗಳು ಸಂತ್ರಸ್ತೆಯನ್ನು ಮತ್ತೊಮ್ಮೆ ಭೇಟಿಯಾಗುವಂತೆ ಒತ್ತಾಯಿಸಿದ್ದರು. ಈ ವೇಳೆ ಸಂತ್ರಸ್ತೆ ಪತಿಗೆ ಮಾಹಿತಿ ನೀಡಿದ್ದು, ನಗರದ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರಿನ ಆಧಾರದಲ್ಲಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಬ್ಬರ ವಿರುದ್ಧ IPC 328, IPS 376 (ಅತ್ಯಾಚಾರ), IPC 506 (ii) (ಕ್ರಿಮಿನಲ್ ಬೆದರಿಕೆ), POCSO ಕಾಯಿದೆ, ಸೆಕ್ಷನ್ 5 (f) ,ಸೇರಿದಂತೆ ಒಂಬತ್ತು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...