Homeಮುಖಪುಟಕರೂರಿನ ನಟ ವಿಜಯ್ ರ‍್ಯಾಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿಕೆ

ಕರೂರಿನ ನಟ ವಿಜಯ್ ರ‍್ಯಾಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿಕೆ

- Advertisement -
- Advertisement -

ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 18 ಮಹಿಳೆಯರು ಮತ್ತು ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ.

ಮೃತರೆಲ್ಲರ ಗುರುತುಗಳನ್ನು ಪತ್ತೆಹಚ್ಚಲಾಗಿದ್ದು, ಅವರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ತಮ್ಮ ಪ್ರಚಾರ ವಾಹನದ ಮೇಲಿನಿಂದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಲುಚಾಮಿ ಪುರಂ ಪ್ರದೇಶದಲ್ಲಿ ಸಂಜೆ 7:30 ರ ನಂತರ ಈ ಘಟನೆ ನಡೆಯಿತು.

ಸ್ಥಳದಲ್ಲಿ ಜನದಟ್ಟಣೆಯಿಂದಾಗಿ ಹಲವಾರು ಜನರು ಮೂರ್ಛೆ ಹೋದರು. ವಿಜಯ್ ಅವರ ಭಾಷಣದ ಸಮಯದಲ್ಲಿ ಕುಸಿದು ಬಿದ್ದ ವ್ಯಕ್ತಿಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು ಆಂಬ್ಯುಲೆನ್ಸ್‌ಗಳು ಜನಸಂದಣಿಯ ಮೂಲಕ ಸಾಗಬೇಕಾಯಿತು.

ರ‍್ಯಾಲಿಯಲ್ಲಿ ನಟ ವಿಜಯ್ ಅವರನ್ನು ಹತ್ತಿದಿಂದ ಕಾಣಲು ಉತ್ಸುಕರಾಗಿದ್ದ ಕೆಲವು ಬೆಂಬಲಿಗರು ಮರವನ್ನು ಹತ್ತಿದಾಗ ಗೊಂದಲ ತೀವ್ರಗೊಂಡಿತು. ಅದರ ಒಂದು ಕೊಂಬೆ ಮುರಿದು ಕೆಳಗೆ ಇದ್ದ ಜನಸಮೂಹದ ಮೇಲೆ ಉರುಳಿ ಬಿತ್ತು. ಜನಭಯಭೀತರಾದ ಬಳಿಕ ಅದು ಮಾರಣಾಂತಿಕ ನೂಕು ನುಗ್ಗಲಿಗೆ ಕಾರಣವಾಯಿತು.

ಇದರ ಪರಿಣಾಮವಾಗಿ, 111 ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ರಾತ್ರಿಯಿಡೀ ಮತ್ತು ಭಾನುವಾರ ಬೆಳಗಿನವರೆಗೆ, ಉನ್ನತ ಅಧಿಕಾರಿಗಳು, ನಾಯಕರು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗಳಿಗೆ ಬರಲು ಪ್ರಾರಂಭಿಸಿದರು.

ನ್ಯಾಯಾಂಗ ತನಿಖೆ ನಡೆಸುವ ಜವಾಬ್ದಾರಿಯನ್ನು ಹೊಂದಿರುವ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್, ಕಾಲ್ತುಳಿತದ ಸ್ಥಳವನ್ನು ಬೆಳಿಗ್ಗೆ ಪರಿಶೀಲಿಸಿದರು. ನಂತರ, ಕರೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಬೆಳಗಿನ ಜಾವ 3:15 ರ ಸುಮಾರಿಗೆ ಆಸ್ಪತ್ರೆಗೆ ತಲುಪಿ ಗಾಯಾಳುಗಳನ್ನು ಭೇಟಿ ಮಾಡಿ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ನಂತರ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೂಡ ಭೇಟಿ ನೀಡಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಸಂವಾದ ನಡೆಸಿದರು.

ಈ ಮಧ್ಯೆ, ತಮಿಳಗ ವೆಟ್ರಿ ಕಳಗಂ ಮದ್ರಾಸ್ ಹೈಕೋರ್ಟ್ ಅನ್ನು ಸಂಪರ್ಕಿಸಿ, ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ನೀಡಬೇಕೆಂದು ಒತ್ತಾಯಿಸಿತು.

ಈ ಗಲಭೆಯ ಹಿಂದೆ ‘ಕೆಲವು ಪಿತೂರಿಗಳು’ ಇರಬಹುದು ಎಂದು ಪಕ್ಷವು ತನ್ನ ಅರ್ಜಿಯಲ್ಲಿ ಆರೋಪಿಸಿದ್ದು, ಸ್ವಯಂಪ್ರೇರಿತ ತನಿಖೆ ಅಥವಾ ಸ್ವತಂತ್ರ ಸಂಸ್ಥೆಯ ತನಿಖೆಗೆ ಒತ್ತಾಯಿಸಿದೆ.

ಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ 40ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...