Homeಮುಖಪುಟತಮಿಳುನಾಡು: ನೀಟ್‌ನಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ತಮಿಳುನಾಡು: ನೀಟ್‌ನಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

- Advertisement -
- Advertisement -

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಕಡಿಮೆ ಅಂಕ ಗಳಿಸಿದ್ದಕ್ಕಾಗಿ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ವಡಗುಮರೈ ನಿವಾಸಿ ಸುಭಾಶ್ಚಂದ್ರ ಬೋಸ್ ಅವರು ನಾಲ್ಕು ದಿನಗಳ ಹಿಂದಷ್ಟೇ ಫಲಿತಾಂಶ ಪ್ರಕಟವಾಗಿದ್ದ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಅವರು ಕಡಿಮೆ ಅಂಕ ಗಳಿಸಿದ್ದರು. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಕಾರಣ ಮನನೊಂದ ಅವರು ನವೆಂಬರ್ 2 ರಂದು ಕೀಟನಾಶಕ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ಹಾಸಿಗೆಯಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿದ ಪೋಷಕರು ಆತನನ್ನು ಆತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸೇಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಬೋಸ್ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಿಧನರಾಗಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಪಾರ ಸಂಖ್ಯೆಯ ಸಂಬಂಧಿಕರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿಯು ಉದ್ವಿಗ್ನಗೊಂಡಿತ್ತು.

ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ಕೆಲವು ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿಗಳು ಈ ಹಿಂದೆಯು ಆತ್ಮಹತ್ಯೆಗೆ ಶರಣಾಗಿದ್ದರು.

ವೈದ್ಯಕೀಯ ಆಕಾಂಕ್ಷಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಎಐಎಡಿಎಂಕೆ ಉನ್ನತ ನಾಯಕ ಕೆ ಪಳನಿಸ್ವಾಮಿ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ನಲ್ಲಿ ಇಂತಹ “ತಪ್ಪು” ನಿರ್ಧಾರಗಳನ್ನು ಆಶ್ರಯಿಸದಂತೆ ವಿದ್ಯಾರ್ಥಿಗಳಿಗೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

ನೀಟ್‌‌ನಿಂದ ಸಂಪೂರ್ಣ ವಿನಾಯಿತಿ ನೀಡುವ ಮಸೂದೆಯನ್ನು ತಮಿಳುನಾಡು ಸರ್ಕಾರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಿತ್ತು. ನೀಟ್‌ನಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳ ಬದುಕು ದುಸ್ತರವಾಗಿದೆ ಎಂದಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌, ನೀಟ್ ಪರೀಕ್ಷೆಯಿಂದ ಸಂಪೂರ್ಣ ವಿನಾಯಿತಿ ನೀಡುವ ಮಸೂದೆಗೆ ಅಂಗೀಕಾರ ಹಾಕಿದ್ದರು.

ದಕ್ಷಿಣ ಭಾರತದಲ್ಲೇ ನೀಟ್‌ ವಿರುದ್ದ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದು ತಮಿಳುನಾಡಿನಲ್ಲಾಗಿದೆ. ವಿದ್ಯಾರ್ಥಿಗಳು ನೀಟ್‌ ರದ್ದು ಮಾಡುವಂತೆ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಡಿಎಂಕೆ ಕೂಡಾ ನೀಟ್‌ ರದ್ದು ಮಾಡುವಂತೆ ಒಕ್ಕೂಟ ಸರ್ಕಾರದೊಂದಿಗೆ ಒತ್ತಡ ಹೇರುತ್ತಲೆ ಇದೆ.

ಇತ್ತೀಚೆಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಭಾರತದ ಇತರ ರಾಜ್ಯದ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ ವಿನಂತಿಸಿದ್ದರು.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: NEET ವಿರುದ್ಧ ಮಸೂದೆ ಅಂಗೀಕರಿಸಿದ ತಮಿಳುನಾಡು ಸರ್ಕಾರ; ಸಿಎಂ ಸ್ಟಾಲಿನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...