Homeಮುಖಪುಟತಮಿಳುನಾಡು: ಎಡಿಎಂಕೆ ಸಂಸದನಿಗೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

ತಮಿಳುನಾಡು: ಎಡಿಎಂಕೆ ಸಂಸದನಿಗೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಘೋಷಿಸಲಾದ ‘ಉಂಗಲುಡನ್ ಸ್ಟಾಲಿನ್’ (ನಿಮ್ಮ ಸ್ಟಾಲಿನ್) ಯೋಜನೆಗೆ ತಮಿಳುನಾಡು ಸರ್ಕಾರ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹೆಸರನ್ನು ಬಳಸುವುದನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ (ಆಗಸ್ಟ್ 6) ರದ್ದುಗೊಳಿಸಿದೆ.

ಹೈಕೋರ್ಟ್‌ನ ಆದೇಶದ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಹಾಗೂ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಆದೇಶ ಹೊರಡಿಸಿದೆ.

ಸರ್ಕಾರಿ ಕಲ್ಯಾಣ ಯೋಜನೆಗಳಿಗೆ ಜೀವಂತ ವ್ಯಕ್ತಿಗಳು, ಮಾಜಿ ಮುಖ್ಯಮಂತ್ರಿಗಳು, ಪಕ್ಷದ ನಾಯಕರು ಅಥವಾ ರಾಜಕೀಯ ಪಕ್ಷಗಳ ಹೆಸರುಗಳು ಮತ್ತು ಛಾಯಾಚಿತ್ರಗಳನ್ನು ಬಳಸುವುದನ್ನು ಹೈಕೋರ್ಟ್‌ನ ಆದೇಶವು ನಿರ್ಬಂಧಿಸಿತ್ತು.

ದೇಶದಾದ್ಯಂತ ನಾಯಕರ ಹೆಸರಿನಲ್ಲಿ ಇಂತಹ ಯೋಜನೆಗಳು ಸಾಮಾನ್ಯವಾಗಿರುವಾಗ, ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ (ಹೈಕೋರ್ಟ್‌ನಲ್ಲಿ ಅರ್ಜಿದಾರ) ತಮಿಳುನಾಡು ಸರ್ಕಾರದ ಯೋಜನೆಯನ್ನು ಮಾತ್ರ ಎತ್ತಿ ತೋರಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ತೀವ್ರ ಟೀಕೆ ವ್ಯಕ್ತಪಡಿಸಿತು. ಎಐಎಡಿಎಂಕೆ ಅಧಿಕಾರಾವಧಿಯಲ್ಲಿ ನಾಯಕರ ಹೆಸರಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂಬ ಡಿಎಂಕೆಯ ವಾದವನ್ನು ನ್ಯಾಯಾಲಯ ಗಮನಿಸಿತು.

ಅರ್ಜಿದಾರರು ಭಾರತ ಚುನಾವಣಾ ಆಯೋಗಕ್ಕೆ ದೂರು ನೀಡಿದ ಮೂರು ದಿನಗಳಲ್ಲಿ ಹೈಕೋರ್ಟ್‌ಗೆ ಧಾವಿಸಿ ಬಂದಿರುದಕ್ಕೆ ನ್ಯಾಯಾಲಯ ಅಸಮಧಾನ ವ್ಯಕ್ತಪಡಿಸಿತು. ರಿಟ್ ಅರ್ಜಿಯು ‘ಕಾನೂನಿನಲ್ಲಿ ತಪ್ಪು ಕಲ್ಪನೆ’ ಮಾತ್ರವಲ್ಲದೆ ಕಾನೂನಿನ ಪ್ರಕ್ರಿಯೆಯ ದುರುಪಯೋಗ ವಾಗಿದೆ ಎಂದು ಹೇಳಿತು.

ಹೈಕೋರ್ಟ್‌ನಲ್ಲಿ ಬಾಕಿ ಇರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವರ್ಗಾಯಿಸಿಕೊಂಡಿತು ಮತ್ತು ಅರ್ಜಿದಾರನಿಗೆ 10 ಲಕ್ಷ ರೂ.ಗಳ ದಂಡ ವಿಧಿಸಿ ವಜಾಗೊಳಿಸಿತು. ಒಂದು ವಾರದೊಳಗೆ ತಮಿಳುನಾಡು ಸರ್ಕಾರಕ್ಕೆ ದಂಡದ ಹಣವನ್ನು ಠೇವಣಿ ಇಡಲು ನ್ಯಾಯಾಲಯ ನಿರ್ದೇಶಿಸಿದೆ. ಸರ್ಕಾರವು ಈ ಮೊತ್ತವನ್ನು ದೀನದಲಿತರ ಕಲ್ಯಾಣಕ್ಕಾಗಿ ಬಳಸಬೇಕೆಂದು ನ್ಯಾಯಾಲಯ ಸೂಚಿಸಿದೆ.

Courtesy : livelaw.in .

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...