- Advertisement -
- Advertisement -
ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಕೆಲಮಂಗಲಂನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ 19 ವರ್ಷದ ವಿ. ಸುನೀಲ್ ಕುಮಾರ್ ಮತ್ತು ಮೂರನೇ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಎಸ್. ಮುರುಗನ್ (20) ಪಾಲಕೋಡ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಪಾಲಕೋಡ್ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಈ ಮಧ್ಯೆ, ಮೃತರ ಕುಟುಂಬ ಸದಸ್ಯರು ಜಾತಿ ಹತ್ಯೆ ಆರೋಪ ಹೊರಿಸಿ ಗುರುವಾರ ಪ್ರತಿಭಟನೆ ನಡೆಸಿದರು. ಇಬ್ಬರೂ ಯುವಕರು ಬೇರೆ ಸಮುದಾಯದ ಮಹಿಳೆಯರನ್ನು ಪ್ರೀತಿಸುತ್ತಿದ್ದರು, ಮಹಿಳೆಯರ ಕುಟುಂಬಗಳಿಂದ ಕೊಲೆ ಬೆದರಿಕೆ ಬಂದಿತ್ತು ಎಂದು ಅವರು ಹೇಳಿದರು. ಹೆಚ್ಚಿನ ತನಿಖೆ ನಡೆಯುತ್ತಿದೆ.


