Homeಮುಖಪುಟಖಾಸಗಿ ಚಿತ್ರಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್‌: ಯುವಕನನ್ನು ಕೊಂದ ಅಪ್ರಾಪ್ತೆಯರ ಬಂಧನ

ಖಾಸಗಿ ಚಿತ್ರಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್‌: ಯುವಕನನ್ನು ಕೊಂದ ಅಪ್ರಾಪ್ತೆಯರ ಬಂಧನ

- Advertisement -
- Advertisement -

ಅಪ್ರಾಪ್ತೆಯರ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಬಾಲಕಿಯರು ಮತ್ತು ಅವರ ಸ್ನೇಹಿತರು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಅರಂಬಕ್ಕಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಯುವಕನನ್ನು 21 ವರ್ಷದ ಕಾಲೇಜು ವಿದ್ಯಾರ್ಥಿ ಒಟ್ಟೇರಿಯ ಪ್ರೇಮಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ, ಈಚಿಂಗಾಡು ಗ್ರಾಮದ ನಿರ್ಜನ ಸ್ಥಳದಲ್ಲಿ ರಕ್ತಸಿಕ್ತ ಹಲ್ಲು, ಕೂದಲು ದೊರೆತಿತ್ತು. ಈ ಬಗ್ಗೆ ಗ್ರಾಮಸ್ಥರು ತಿರುವಳ್ಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದರು.

ತನಿಖೆ ವೇಳೆ ಮೃತನ ಮೊಬೈಲ್ ದೊರೆತು ಅದರಿಂದ ಚೆಂಗಲ್‌ಪೇಟ್‌ನ ಇಬ್ಬರು ವಿದ್ಯಾರ್ಥಿನಿಯರ ಸುಳಿವು ಸಿಕ್ಕಿದೆ. ಮೃತ ಯುವಕ ಬಾಲಕಿಯರ ಖಾಸಗಿ ಫೋಟೋಗಳನ್ನು ತೆಗೆದುಕೊಂಡು ಅವರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೆ, 50,000 ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

ಯುವಕನಿಗೆ ಹಣ ಕೊಡಲು ಸಾಧ್ಯವಾಗದ ಬಾಲಕಿಯರು, ತಮಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಸ್ನೇಹಿತ ಅಶೋಕ್‌ನ ಸಹಾಯ ಕೇಳಿದ್ದರು. ಬಾಲಕಿಯರಿಗೆ ಸಹಾಯ ಮಾಡಲು ಒಪ್ಪಿಕೊಂಡ ಅಶೋಕ್‌, ಬಾಲಕಿಯರಿಗೆ ಪ್ರೇಮ್‌ಕುಮಾರ್‌ನನ್ನು ಶುಕ್ರವಾರ ಶೋಲವರಂ ಟೋಲ್ ಪ್ಲಾಜಾಕ್ಕೆ  ಕರೆದುಕೊಂಡು ಬರುವಂತೆ ಹೇಳಿದ್ದರು. ಅದರಂತೆ ಬಾಲಕಿಯರು ಪ್ರೇಮ್‌ಕುಮಾರ್‌ನನ್ನು ಕರೆತಂದಿದ್ದಾರೆ. ಆ ವೇಳೆ, ಆಶೋಕ್‌ ಮತ್ತು ಆತನ ಮತ್ತೊಬ್ಬ ಸ್ನೇಹಿತ ಸೇರಿ ಪ್ರೇಮಕುಮಾರ್‌ನನ್ನು ಅಪಹರಿಸಿ, ಈಚಂಗಾಡಿಗೆ ಕರೆದೊಯ್ದು ಅಲ್ಲಿ ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂಬ ಆರೋಪ ತನಿಖೆ ವೇಳೆ ಕೇಳಿಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯರನ್ನು ಬಂಧಿಸಿರುವ ಪೊಲೀಸರು, ನಾವು ಅಶೋಕ್‌ಗಾಗಿ ಹುಡುಕಾಟ ನಡೆಸಿದ್ದೇವೆ. ನಾವು ಅವನನ್ನು ಬಂಧಿಸಿದ ನಂತರವೇ ನಿಖರವಾಗಿ ಏನಾಯಿತು ಎಂದು ನಮಗೆ ತಿಳಿಯುತ್ತದೆ ಎಂದು ತಿಳಿಸಿದ್ದಾರೆ.

ಪ್ರೇಮಕುಮಾರ್ ಮೃತದೇಹವನ್ನು ಸೋಮವಾರ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.


ಇದನ್ನೂ ಓದಿ: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ರಸ್ತೆ ಅಪಘಾತ: ಪ್ರಕರಣದಿಂದ BJP ಮಾಜಿ ಶಾಸಕ ಸೆಂಗಾರ್‌‌ ವಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...