Homeಮುಖಪುಟತಮಿಳುನಾಡು: ಯುಜಿ ಪ್ರವೇಶಾತಿ ಆಗಸ್ಟ್‌‌ 1 ರಿಂದ ಪ್ರಾರಂಭ

ತಮಿಳುನಾಡು: ಯುಜಿ ಪ್ರವೇಶಾತಿ ಆಗಸ್ಟ್‌‌ 1 ರಿಂದ ಪ್ರಾರಂಭ

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಆಗಸ್ಟ್ 1 ರಿಂದ ಪ್ರಥಮ ವರ್ಷದ ಯುಜಿ ಪ್ರವೇಶವನ್ನು ಪ್ರಾರಂಭಿಸಲಿವೆ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಗುರುವಾರ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, 10, 11 ಮತ್ತು 12 ನೇ ತರಗತಿಯ ಫಲಿತಾಂಶಗಳ ಒಟ್ಟು ಮೊತ್ತವನ್ನು ಉನ್ನತ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಬಳಸಲಾಗುವುದು ಎಂದು ಹೇಳಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ‘ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ’ (ಡಿಒಟಿಇ) ದಿಂದ ಅನುಕೂಲವಾಗಲಿದೆ. ಒಟ್ಟು ಅಂಕಗಳನ್ನು ಬಳಸಿಕೊಂಡು ‘ಸಿಂಗಲ್-ವಿಂಡೋ’ ವ್ಯವಸ್ಥೆಯ ಮೂಲಕ ಪ್ರವೇಶಾತಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಪ್ರವೇಶಾತಿಯು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ನಡೆಯುತ್ತದೆಯೇ ಎಂದು ಅವರು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ಆಗಸ್ಟ್ 1 ರಿಂದ ಕಾಲೇಜುಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ. ಜುಲೈ 31 ನಂತರ ಕಾಲೇಜುಗಳಿಗೆ ತಮ್ಮ ಕ್ಯಾಂಪಸ್‌ನಲ್ಲಿ ಪ್ರವೇಶ ಪ್ರಕ್ರಿಯೆಯನ್ನು ನಿರ್ವಹಿಸಲು ಮತ್ತು ಆನ್‌ಲೈನ್ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳ ಉಪಕುಲಪತಿಳೊಂದಿಗೆ ಗುರುವಾರ ನಡೆದ ಆನ್‌ಲೈನ್‌‌ ಸಭೆಯ ನಂತರ ಮಾತನಾಡಿದ ಪೊನ್ಮುಡಿ, “ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ವ್ಯತ್ಯಾಸಗಳ ಬಗ್ಗೆ ಚರ್ಚಿಸಲಾಗಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ನೇಮಕಾತಿಯಲ್ಲಿ ಒಂದೇ ರೀತಿಯ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಾನು ಅವರನ್ನು ಕೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಳೆದ ಒಂದು ದಶಕದಲ್ಲಿ ಮಾಡಿದ ಪ್ರಮುಖ ನೇಮಕಾತಿಗಳ ಬಗ್ಗೆ ಸರ್ಕಾರ ಆಳವಾದ ಅವಲೋಕನವನ್ನು ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಮದ್ರಾಸ್ ವಿಶ್ವವಿದ್ಯಾಲಯವು ಎಂಫಿಲ್ ಕೋರ್ಸ್‌ಗಳನ್ನು ರದ್ದುಗೊಳಿಸಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಪೊನ್ಮುಡಿ, ಎಲ್ಲಾ ವಿಶ್ವವಿದ್ಯಾಲಯಗಳು ಈ ಕೋರ್ಸ್‌‌ಗಳನ್ನು ಮುಂದುವರಿಸಬೇಕು ಎಂದು ಹೇಳಿದ್ದಾರೆ. “ಎಲ್ಲಾ ವಿಶ್ವವಿದ್ಯಾಲಯಗಳಿಗೆ ಎಂಫಿಲ್ ಕೋರ್ಸ್‌ಗಳನ್ನು ಮುಂದುವರಿಸಲು ಸೂಚನೆ ನೀಡಲಾಗಿದೆ. ಈ ಕೋರ್ಸ್‌ ಸ್ಥಗಿತಗೊಳಿಸುವ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳಿವೆ” ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...