Homeಮುಖಪುಟತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

- Advertisement -
- Advertisement -

ಕಳೆದ ಶನಿವಾರ (ಫೆ.19) ರಂದು ಮುಕ್ತಾಯಗೊಂಡ ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೆಲ್ಲೂರು ನಗರ ಮುನ್ಸಿಪಲ್ ಕಾರ್ಪೊರೇಷನ್ (ವಿಎಂಸಿ) ನಿಂದ ಡಿಎಂಕೆಯ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ, 49 ವರ್ಷದ ಆರ್.ಗಂಗಾ ಅವರು 15 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್. ಗಂಗಾ ಅವರು ವೆಲ್ಲೂರು ಜಿಲ್ಲೆಯಲ್ಲಿ ಕಾರ್ಪೊರೇಷನ್ ಕೌನ್ಸಿಲರ್ ಆಗಿ ಆಯ್ಕೆಯಾದ ಮೊದಲ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿದ್ದಾರೆ. ವೆಲ್ಲೂರು ನಗರ ಪಾಲಿಕೆಯ (ವಿಸಿಎಂಸಿ) ವಾರ್ಡ್ 37 ರಿಂದ ಐವರು ಅಭ್ಯರ್ಥಿಗಳ ವಿರುದ್ಧ ಡಿಎಂಕೆ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಗಂಗಾ ಅವರು ಮಂಗಳವಾರ 2,131 ಮತಗಳನ್ನು ಗಳಿಸಿ 15 ಮತಗಳ ವ್ಯತ್ಯಾಸದಿಂದ ಗೆದ್ದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಪಕ್ಷದ ಸದಸ್ಯೆಯಾಗಿದ್ದಾರೆ.

ತಮಿಳುನಾಡಿನ 21 ನಿಗಮಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯಿತಿಗಳ 12,607 ಸ್ಥಾನಗಳಿಗೆ ಒಂದೇ ಹಂತದಲ್ಲಿ ಶನಿವಾರ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಿತು.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಗಂಗಾ ಅವರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ದಾರೆ. ಗಂಗಾ ಅವರು ವೆಲ್ಲೂರ್ ಡಿಸ್ಟ್ರಿಕ್ಟ್ ಆಲ್ ಜೆಂಡರ್ ಪಾಸಿಟಿವ್ ನೆಟ್‌ವರ್ಕ್ ಅನ್ನು ನಡೆಸುತ್ತಿದ್ದಾರೆ. ಎಚ್‌ಐವಿ/ಏಡ್ಸ್ ಮತ್ತು ವಿಕಲಾಂಗ ವ್ಯಕ್ತಿಗಳಿಗೆ ಸಹಾಯ ಮಾಡುತ್ತಾರೆ. ಇವರು ಸೌತ್ ಇಂಡಿಯನ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್‌ನ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ.

“ಮಹಿಳೆಯರಿಗೆ ಸಾರ್ವಜನಿಕ ಶೌಚಾಲಯಗಳು ಮತ್ತು ಯುವಕರಿಗೆ ಆಟದ ಮೈದಾನವನ್ನು ಸ್ಥಾಪಿಸಲಾಗುವುದು. ಇಲ್ಲಿನ ನಿವಾಸಿಗಳು ಪ್ರಸ್ತುತ ಕಳಪೆ-ನಿರ್ವಹಣೆಯ ಓವರ್‌ಹೆಡ್ ಟ್ಯಾಂಕ್‌ನಿಂದ ಸರಬರಾಜು ಮಾಡುವ ನೀರನ್ನು ಬಳಸುತ್ತಿದ್ದಾರೆ. ಅವರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕಾಗಿದೆ” ಎಂದು ಚುನಾವಣೆಗೆ ಮುಂಚೆ ಗಂಗಾ ತಿಳಿಸಿದ್ದರು.

ಒಂದು ದಶಕದ ನಂತರ ನಡೆದ ನಗರ ಸ್ಥಲೀಯ ಸಂಸ್ಥೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಭರ್ಜರಿ ಜಯ ದಾಖಲಿಸಿದೆ. ತಮಿಳುನಾಡಿನ ಎಲ್ಲಾ 21 ನಗರ ನಿಗಮಗಳು ಮತ್ತು 138 ಪುರಸಭೆಗಳ ಪೈಕಿ 128 ಅನ್ನು ಗೆದ್ದಿದೆ. 489 ಪಟ್ಟಣ ಪಂಚಾಯಿತಿಗಳ ಪೈಕಿ 400ರಲ್ಲಿಯೂ ಪಕ್ಷ ಗೆಲುವು ಸಾಧಿಸಿದೆ.


ಇದನ್ನೂ ಓದಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...