Homeಮುಖಪುಟತಮಿಳುನಾಡು: ಮೋದಿ ಮುಖವಾಡ ಧರಿಸಿ ಡಿಎಂಕೆ ಕಾರ್ಯಕರ್ತರಿಂದ 'ವಡಾ ಪ್ರತಿಭಟನೆ'

ತಮಿಳುನಾಡು: ಮೋದಿ ಮುಖವಾಡ ಧರಿಸಿ ಡಿಎಂಕೆ ಕಾರ್ಯಕರ್ತರಿಂದ ‘ವಡಾ ಪ್ರತಿಭಟನೆ’

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಿದ್ದು, ಅವರು ಕೇವಲ “ಸುಳ್ಳು ಭರವಸೆಗಳನ್ನು” ನೀಡುತ್ತಾರೆ ಎಂದು ಆರೋಪಿಸಿದ್ದಾರೆ.

ಡಿಎಂಕೆ ಕಾರ್ಯಕರ್ತರು ಮತ್ತು ಬೆಂಬಲಿಗರು ಮೋದಿ ಮುಖದ ಮಾಸ್ಕ್ ಧರಿಸಿ ‘ವಡಾ’ (ಕರಿದ ತಿಂಡಿ) ವಿತರಿಸಿದರು. ಇದರ ವಿತರಣೆಯು ಜನರನ್ನು ದಾರಿತಪ್ಪಿಸುವ ಅಥವಾ ಸುಳ್ಳು ಭರವಸೆಗಳನ್ನು ನೀಡುವ ಸಂಕೇತವಾಗಿದೆ ಎಂದು ಹೇಳೀದ್ದಾರೆ.

ಫೆಬ್ರವರಿ 27 ಮತ್ತು ಫೆಬ್ರವರಿ 28ರಂದು ಪಿಎಂ ಮೋದಿಯವರು ತಿರುಪ್ಪೂರ್ ಮತ್ತು ತಿರುನೆಲ್ವೇಲಿಗೆ ಭೇಟಿ ನೀಡಿದ ನಂತರ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಅವರು ರಾಜ್ಯವನ್ನು ಭ್ರಷ್ಟಾಚಾರಕ್ಕಾಗಿ ಟೀಕಿಸಿ, ತಮಿಳುನಾಡು ಸರ್ಕಾರವು ಅವರ ಕೇಂದ್ರದಿಂದ ಜಾರಿಗೆ ತಂದ ಪ್ರಯೋಜನ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.

ಡಿಎಂಕೆ ಕಾರ್ಯಕರ್ತರು ಪ್ರಧಾನಿ ಮೋದಿಯವರ ಮುಖವನ್ನು ಹೋಲುವ ಮಾಸ್ಕ್‌ಗಳನ್ನು ಧರಿಸಿ, ಪ್ರಧಾನಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹15 ಲಕ್ಷ, ಮಧುರೈನಲ್ಲಿ ಏಮ್ಸ್ ನಿರ್ಮಾಣ ಮತ್ತು ಯುವಕರಿಗೆ ಉದ್ಯೋಗ ಸೃಷ್ಟಿಯ ಭರವಸೆಗಳು ಖಾಲಿ ಆಶ್ವಾಸನೆಗಳಲ್ಲದೆ ಬೇರೇನೂ ಅಲ್ಲ ಎಂದು ಡಿಎಂಕೆ ಕಾರ್ಯಕರ್ತರು ಪ್ರತಿಪಾದಿಸಿದರು.

ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಕುಲಶೇಖರಪಟ್ಟಿಣಂನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಎರಡನೇ ಬಾಹ್ಯಾಕಾಶ ನಿಲ್ದಾಣಕ್ಕೆ ಅಡಿಪಾಯ ಹಾಕಿದರು. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಇಸ್ರೋದ ಉಡಾವಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಮೂರು ಹೊಸ ಸೌಲಭ್ಯಗಳನ್ನು ಉದ್ಘಾಟಿಸಿದರು.

ಇದನ್ನೂ ಓದಿ; 18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ಮಾಸಿಕ ₹1,000; ದೆಹಲಿ ಸರ್ಕಾರದಿಂದ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...