Homeಮುಖಪುಟತಮಿಳುನಾಡು | ವಿಡಿಯೊ ಕರೆ ಮೂಲಕ ರೋಗಿಗಳಿಗೆ ಚಿಕಿತ್ಸೆ: ಕ್ಲಿನಿಕ್‌ಗೆ ಸೀಲ್

ತಮಿಳುನಾಡು | ವಿಡಿಯೊ ಕರೆ ಮೂಲಕ ರೋಗಿಗಳಿಗೆ ಚಿಕಿತ್ಸೆ: ಕ್ಲಿನಿಕ್‌ಗೆ ಸೀಲ್

- Advertisement -
- Advertisement -

ವಿಡಿಯೊ ಕರೆ ಮಾಡಿ ನರ್ಸ್‌ಗೆ ಸೂಚನೆ ನೀಡುವ ಮೂಲಕ ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೋಮವಾರ ವಿಕ್ರಮಸಿಂಗಪುರದಲ್ಲಿ ಇರುವ ಅವರ ಖಾಸಗಿ ಕ್ಲಿನಿಕ್‌ಗೆ ಸೀಲ್ ಮಾಡಿದ್ದಾರೆ. ತಮಿಳುನಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಂಬಾಸಮುದ್ರಂ ತಹಶೀಲ್ದಾರ್ ಶಬರಿ ಮಲ್ಲಿಕಾ ಅವರು ಇತ್ತೀಚೆಗೆ ವಿಕ್ರಮಸಿಂಗಪುರದ ವೈಕಲ್‌ಪಾಲಂನಲ್ಲಿ ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಡಾಕ್ಟರ್ ಚಂದ್ರಶೇಖರ್ ಒಡೆತನದ ಕ್ಲಿನಿಕ್‌ನಲ್ಲಿ ನರ್ಸ್‌ಗಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಡಾಕ್ಟರ್‌ ತನ್ನ ನರ್ಸ್‌ಗೆ ವಿಡಿಯೊ ಕಾಲ್ ಮೂಲಕ ಸೂಚನೆಗಳನ್ನು ನೀಡುವುದು ಕಂಡು ಬಂದಿತ್ತು.

ಇದನ್ನೂಓದಿ: ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ಈ ಬಗ್ಗೆ ಆರೋಗ್ಯಾಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿದ್ದು ಕಳೆದ ಕೆಲವು ತಿಂಗಳುಗಳಿಂದ ಡಾ ಚಂದ್ರಶೇಖರನ್ ಅವರ ಕ್ಲಿನಿಕ್‌ಗೆ ಭೇಟಿ ನೀಡುತ್ತಿಲ್ಲ ಎಂದು ತಿಳಿದುಬಂದಿತ್ತು. ಸೋಮವಾರ, ತಿರುನಲ್ವೇಲಿಯ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕಿ ಡಾ.ಲತಾ ಅವರು ಅಂಬಾಸಮುದ್ರಂ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಗ್ರಾಮ ಆಡಳಿತಾಧಿಕಾರಿ ಮತ್ತು ವಿಕ್ರಮಸಿಂಗಪುರಂ ಪೊಲೀಸರ ಸಮ್ಮುಖದಲ್ಲಿ ಕ್ಲಿನಿಕ್‌ಗೆ ಸೀಲ್ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ತಮಿಳುನಾಡು

ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕಿ ಡಾ. ಲತಾ ಅವರ ಅವರ ದೂರಿನ ಆಧಾರದ ಮೇಲೆ ಪೊಲೀಸರು ಚಂದ್ರಶೇಖರನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. “ರೋಗಿಗಳಿಗೆ ಖುದ್ದಾಗಿ ಚಿಕಿತ್ಸೆ ನೀಡುವ ಬದಲು, ಚಂದ್ರಶೇಖರನ್ ಅವರು ವೀಡಿಯೊ ಕರೆ ಮೂಲಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ದಾದಿಯರಿಗೆ ಸೂಚನೆಗಳನ್ನು ನೀಡಿದ್ದರು. ಅವರ ಕ್ಲಿನಿಕ್ ವಿರುದ್ಧ ಕ್ಲಿನಿಕಲ್ ಎಸ್ಟಾಬ್ಲಿಷ್ಮೆಂಟ್ (ನೋಂದಣಿ ಮತ್ತು ನಿಯಂತ್ರಣ) ಕಾಯಿದೆಯಡಿಯಲ್ಲಿ ಕ್ರಮವನ್ನು ಪ್ರಾರಂಭಿಸಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...