HomeUncategorizedತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

ತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

- Advertisement -
- Advertisement -

ದೇಶದಾದ್ಯಂತ ಅಂತರ್ಜಾತಿ ವಿವಾಹವಾದ ದಂಪತಿಗಳನ್ನು ಕುಟುಂಬದ ಸದಸ್ಯರು ಜಾತಿ ಕಾರಣಕ್ಕಾಗಿ ಹತ್ಯೆ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ತಮಿಳುನಾಡಿನ ವಿಧಾನಸಭೆಯ ಕಲಾಪದ ವೇಳೆ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ವಿರುದ್ದ ಪ್ರಭಲವಾದ ಕಾಯ್ದೆಯನ್ನು ರೂಪಿಸಲು ತಮ್ಮ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ “ಈಗಿರುವ ಪ್ರಸ್ತುತ ಕಾನೂನಿನಲ್ಲೇ ಇದನ್ನು ತಡೆಗಟ್ಟಬಹುದು, ಪ್ರತ್ಯೇಕ ಕಾಯ್ದೆ ಅಗತ್ಯವಿಲ್ಲ” ಎಂದಿದ್ದರು. ಡಿಎಂಕೆಯ ಮಿತ್ರ ಪಕ್ಷಗಳಾದ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಗಳ ಒತ್ತಡಕ್ಕೆ ಮಣಿದು ಅಂತಿಮವಾಗಿ ಜಾತಿ ಆಧಾರಿತ ದ್ವೇಷ ಅಪರಾಧಗಳು ಮತ್ತು ಮರ್ಯಾದೆಗೇಡು ಹತ್ಯೆಗಳು ತಡೆಗಟ್ಟುವ ಗುರಿಯನ್ನು ಹೊಂದಿರುವ ಕಾನೂನನ್ನು ರೂಪಿಸಲಾಗವುದು ಎಂದು ತಿಳಿಸಿದ್ದಾರೆ.

ಕಠಿಣ ಕಾನೂನು ಮತ್ತು ತೀರ್ಪುಗಳತ್ತ ಕರ್ನಾಟಕದ ನಿರಂತರ ಪ್ರಯತ್ನಗಳು
ಮಹಿಳಾ ಮತ್ತು ಸಮಾಜದ ವಿರುದ್ಧ ನಡೆಯುತ್ತಿರುವ ಗಂಭೀರ ಅಪರಾಧಗಳನ್ನು ನಿಗ್ರಹಿಸಲು ಕರ್ನಾಟಕ ಸರ್ಕಾವೂ ಮುಂದಾಗಿದೆ. ಈ ಹಿಂದೆ ಸೆಪ್ಟೆಂಬರ್ 2023ರಲ್ಲಿ ಮಾಧ್ಯಮ ವರದಿಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತಿಯ (ಐಪಿಸಿ) ನಿಯಮಗಳು ಇಂತಹ ಅಪರಾಧಗಳಿಗೆ ಸಾಕಷ್ಟು ಕಠಿಣವಲ್ಲವೆಂದು ಅಭಿಪ್ರಾಯಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಹೊಸ, ಕಠಿಣ ರಾಜ್ಯ ಕಾನೂನನ್ನು ರೂಪಿಸುವ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದರು. ಮಹಿಳಾ ಸಂಘಟನೆಗಳು, ಕಾನೂನು ತಜ್ಞರು ಮತ್ತು ಇತರ ಸಾಮಾಜಿಕ ಪಾಲುದಾರರೊಂದಿಗೆ ವಿಚಾರಣಾ ಸಭೆಗಳನ್ನು ನಡೆಸುವ ಯೋಜನೆಯನ್ನು ಹೊಂದಿದ್ದೇವೆ, ಹೊಸ ಕಾನೂನು ಗಂಭೀರ ಅಪರಾಧಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರೂಪಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು.

ಇತ್ತ, ರಾಜ್ಯದ ನ್ಯಾಯಾಂಗವೂ ಇಂತಹ ಪ್ರಕರಣಗಳಲ್ಲಿ ಕಠಿಣ ತೀರ್ಪುಗಳನ್ನು ನೀಡುತ್ತಿದೆ ಎಂಬುದರ ಉದಾಹರಣೆಯಾಗಿ ಇತ್ತೀಚಿನ ಎರಡು ಪ್ರಮುಖ ತೀರ್ಪುಗಳು ಗಮನ ಸೆಳೆಯುತ್ತಿವೆ:

  • ಫೆಬ್ರವರಿ 2025: ಗದಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯವು 2019ರ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ನಡೆದ “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ನಾಲ್ಕು ಸಂಬಂಧಿಕರಿಗೆ ಮರಣದಂಡನೆ ವಿಧಿಸಿತು.
  • ಏಪ್ರಿಲ್ 2025: ಕರ್ನಾಟಕದ ಮತ್ತೊಂದು ನ್ಯಾಯಾಲಯವು ಇಂತಹದೇ ಮತ್ತೊಂದು “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ ಹಾಗೂ ಒಂಬತ್ತು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಕಠಿಣ ಕಾನೂನು ರೂಪಿಸುತ್ತಿರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತವೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...