Homeಮುಖಪುಟಕೊರೊನಾ ಪರಿಹಾರ ನಿಧಿಗೆ ಚಿನ್ನದ ಸರ ನೀಡಿದ್ದ ಯುವತಿಗೆ ಉದ್ಯೋಗ ನೀಡಿದ ತಮಿಳುನಾಡು ಸಿಎಂ

ಕೊರೊನಾ ಪರಿಹಾರ ನಿಧಿಗೆ ಚಿನ್ನದ ಸರ ನೀಡಿದ್ದ ಯುವತಿಗೆ ಉದ್ಯೋಗ ನೀಡಿದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡಿನಲ್ಲಿ ಕೋವಿಡ್ ಪರಿಹಾರಕ್ಕಾಗಿ ತನ್ನ ಚಿನ್ನದ ಸರವನ್ನು ದಾನ ಮಾಡಿದ್ದ 23 ವರ್ಷದ ಯುವತಿಗೆ ಉದ್ಯೋಗ ನೀಡಲಾಗಿದೆ. ಈ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉದ್ಯೋಗ ನೀಡುವುದಾಗಿ ಹೇಳಿದ್ದ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಪೊತ್ತನೇರಿ ಗ್ರಾಮದ ಎಂಜಿನಿಯರಿಂಗ್ ಪದವೀಧರರಾದ ಆರ್.ಸೌಮ್ಯಾ ಅವರು ಸೇಲಂ ಬಳಿಯ ಮೆಟ್ಟೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಂ.ಕೆ.ಸ್ಟಾಲಿನ್ ಅವರಿಗೆ ಚಿನ್ನದ ಸರವನ್ನು ದೇಣಿಗೆ ನೀಡುವ ಜೊತೆಗೆ ಉದ್ಯೋಗದ ಅರ್ಜಿಯನ್ನು ನೀಡಿದ್ದರು.

ಕಳೆದ ವರ್ಷ ನ್ಯುಮೋನಿಯಾದಿಂದಾಗಿ ತನ್ನ ತಾಯಿ ಸಾವನ್ನಪ್ಪಿದ್ದಾರೆ. ತಮ್ಮ ತಂದೆಗೆ ಬರುವ 7,000 ರೂಪಾಯಿ ಪಿಂಚಣಿ ಹಣದಿಂದ ಕುಟುಂಬವನ್ನು ಪೂರೈಸಲು ಹೆಣಗಾಡುತ್ತಿದ್ದೇವೆ. ಮದುವೆಯಾಗಿರುವ ಇಬ್ಬರು ಹಿರಿಯ ಸಹೋದರಿಯರು ಆರ್ಥಿಕವಾಗಿ ಸಹಾಯ ಮಾಡುವ ಸ್ಥಿತಿಯಲ್ಲಿರಲಿಲ್ಲ, ನಾನು ಉದ್ಯೋಗ ಹುಡುಕುತ್ತಿದ್ದೇನೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

 

ಸೌಮ್ಯಾ ಅವರಿಗೆ ಕೆಲಸ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ಹಿಂದೆ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಈಗ ಆಕೆಗೆ ಉದ್ಯೋಗ ನೀಡಿ, ಚಿನ್ನದ ಮನಸ್ಸಿನ ಹುಡುಗಿ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿದ್ದಾರೆ. ಸೌಮ್ಯಾ ಅವರನ್ನು ದೂರವಾಣಿ ಮೂಲಕ ಸ್ಟಾಲಿನ್ ಅಭಿನಂದಿಸಿದ್ದಾರೆ.

ಸಚಿವ ವಿ ಸೆಂಥಿಲ್ ಬಾಲಾಜಿ ಮೆಟ್ಟೂರಿನ ಸೌಮ್ಯಾ ಅವರ ಮನೆಗೆ ಭೇಟಿ ನೀಡಿ ಜೆಎಸ್‌ಡಬ್ಲ್ಯು ಸ್ಟೀಲ್ಸ್ ಲಿಮಿಟೆಡ್‌ನಿಂದ (JSW Steels Ltd) ನೇಮಕಾತಿಯ ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ. ಆಕೆಗೆ ಮಾಸಿಕ ಒಟ್ಟು ವೇತನವಾಗಿ 17,500 ರೂಪಾಯಿ ನೀಡಲಾಗುತ್ತದೆ ಎನ್ನಲಾಗಿದೆ.

“ಮುಖ್ಯಮಂತ್ರಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಅರ್ಜಿಯನ್ನು ಪ್ರಸ್ತಾಪಿಸಿದಾಗ ಮತ್ತು ಉದ್ಯೋಗದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದಾಗ ನನಗೆ ಆತಂಕದಲ್ಲಿದ್ದೆ. ಅವರ ಕೆಲಸದ ಒತ್ತಡದ ನಡುವೆಯೂ, ಅವರು ನನ್ನ ಅರ್ಜಿಯನ್ನು ನೋಡಲು ಸಮಯ ನೀಡಿರುವುದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ. ’ನಾನು ನನ್ನ ಕೆಲಸವನ್ನು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಮತ್ತು ಮುಖ್ಯಮಂತ್ರಿಗಳಿಗೆ ಶಾಶ್ವತವಾಗಿ ಕೃತಜ್ಞಳಾಗಿರುತ್ತೇನೆ” ಎಂದು ಸೌಮ್ಯಾ ಹೇಳಿದ್ದಾರೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...