Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...