Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ನಿರ್ಮಿಸಲು ಮುಂದಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ನ.13) ವಜಾಗೊಳಿಸಿದ್ದು, ಪ್ರಸ್ತುತ ಅರ್ಜಿಯು ‘ಅಕಾಲಿಕ’ವಾಗಿದೆ (ಮುಂಚಿತವಾಗಿ ಅಥವಾ ತುಂಬಾ ಬೇಗ ಸಲ್ಲಿಸಲಾಗಿದೆ) ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ತಮಿಳುನಾಡಿನ ಆಕ್ಷೇಪಣೆಗಳು ಹಾಗೂ ತಜ್ಞ ಸಂಸ್ಥೆಗಳು, ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮತ್ತು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಅಭಿಪ್ರಾಯಗಳನ್ನು ಪರಿಗಣಿಸಿದ ನಂತರವೇ ಯೋಜನೆಯನ್ನು ಅನುಮೋದಿಸಲಾಗುವುದು ಎಂದು ಹೇಳಿದೆ.

ಈ ಹಂತದಲ್ಲಿ, ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಹೊರಡಿಸಿದ ಆದೇಶದಿಂದ ಮಾಡುತ್ತಿರುವ ಕೆಲಸ ಕೇವಲ ವಿವರವಾದ ಯೋಜನಾ ವರದಿ (ಡಿಪಿಆರ್‌) ತಯಾರಿಕೆ ಮಾತ್ರ, ಅದೂ ಕೂಡ, ತಮಿಳುನಾಡು ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗಳು, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ), ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ)ಯ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು (ಆಗಸ್ಟ್ 2023ರಲ್ಲಿ ಹೊರಡಿಸಿದ್ದು) ಸಹ ಉಲ್ಲೇಖಿಸಿದೆ. 2023ರ ಮುಂಗಾರು ಋತುವಿನ ಸಂಬಂಧಿತ ಸಮಸ್ಯೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು. ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಸಿಡಬ್ಲ್ಯೂಎಂಎಗೆ ಸೂಚಿಸಿತ್ತು. ನ್ಯಾಯಾಲಯಕ್ಕೆ ಈ ವಿಷಯದಲ್ಲಿ ತಜ್ಞತೆ ಇಲ್ಲ ಎಂದು ಹೇಳಿತ್ತು.

25 ಆಗಸ್ಟ್ 2023ರ ಆದೇಶದಲ್ಲಿ ನಾವು ಹೇಳಿದ್ದನ್ನು ಮತ್ತೊಮ್ಮೆ ಪುನರುಚ್ಚರಿಸುತ್ತೇವೆ. ನಮಗೆ ಈ ವಿಷಯದಲ್ಲಿ ತಜ್ಞತೆ ಇಲ್ಲ. ತಜ್ಞರ ಕೆಲಸಕ್ಕೆ ನಾವು ಅಡ್ಡಿ ಬರಬಾರದು ಎಂದು ನ್ಯಾಯಾಲಯ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಸಿಡಬ್ಲ್ಯೂಸಿಯ ನಿರ್ದೇಶನವು ತಜ್ಞ ಸಂಸ್ಥೆಗಳ ಸಲಹೆಗಳನ್ನು ಆಧರಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. ಅಷ್ಟೇ ಅಲ್ಲ, ಸಿಡಬ್ಲ್ಯೂಎಂಎ ಅದನ್ನು ಅನುಮೋದಿಸಿದರೆ ಮಾತ್ರ ಯೋಜನೆಯನ್ನು ಸಿಡಬ್ಲ್ಯೂಸಿ ಪರಿಗಣಿಸುತ್ತದೆ. ಈ ದೃಷ್ಟಿಯಿಂದ ನೋಡಿದಾಗ, ತಜ್ಞ ಸಂಸ್ಥೆ (ಸಿಡಬ್ಲ್ಯೂಎಂಎ) ಈ ವಿಷಯವನ್ನು ಪರಿಶೀಲಿಸುತ್ತಿರುವಾಗ, ಪ್ರಸ್ತುತ ಅರ್ಜಿಯು ಅಕಾಲಿಕ (ಮುಂಚಿತವಾಗಿ ಸಲ್ಲಿಸಲಾಗಿದೆ) ಎಂದು ನಾವು ಕಂಡುಕೊಂಡಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಾಲಯ ಮತ್ತು ಅಧಿಕಾರಿಗಳ ನಿರ್ದೇಶನಗಳನ್ನು ಅನುಸರಿಸಿ ತಮಿಳುನಾಡಿಗೆ ನೀರು ಬಿಡಲು ಬದ್ದವಾಗಿರುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ಈ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಕರ್ನಾಟಕ ವಿಫಲವಾದರೆ, ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಇದೇ ವೇಳೆ ಕೋರ್ಟ್ ಎಚ್ಚರಿಸಿದೆ.

ಒಂದು ವೇಳೆ ಡಿಪಿಆರ್ ಅನ್ನು ಸಿಡಬ್ಲ್ಯೂಸಿ ಅನುಮೋದಿಸಿದರೆ, ತಮಿಳುನಾಡು ರಾಜ್ಯಕ್ಕೆ ಕಾನೂನಿನಡಿ ಅನುಮತಿಸಲಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡು ಅದನ್ನು ಪ್ರಶ್ನಿಸಲು ಸ್ವತಂತ್ರವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 

ತಮಿಳುನಾಡು 2007ರಲ್ಲಿ ಕಾವೇರಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಅದು 2018ರಲ್ಲಿ ಮುಗಿಯಿತು. ಈಗ ಈ ಹೊಸ ಅರ್ಜಿಯನ್ನು ಆ ಹಳೆಯ ಮೇಲ್ಮನವಿಯಲ್ಲಿಯೇ ‘ವಿವಿಧ ಅರ್ಜಿ’ (Miscellaneous Application)ಎಂದು ಸೇರಿಸಿ ಸಲ್ಲಿಸಲಾಗಿದೆ.

1956ರ ಅಂತರ ರಾಜ್ಯ ನದಿ ಜಲ ವಿವಾದಗಳ ಕಾಯ್ದೆಯ (Inter-State River Water Disputes Act)ಸೆಕ್ಷನ್ 6A ಯಡಿ ನೀಡಲಾಗಿರುವ ಅಧಿಕಾರಗಳನ್ನು ಬಳಸಿಕೊಂಡು, ಕೇಂದ್ರ ಸರ್ಕಾರವು 2018ರಲ್ಲಿ ‘ಕಾವೇರಿ ಜಲ ನಿರ್ವಹಣಾ ಯೋಜನೆ’ (Cauvery Water Management Scheme) ಅನ್ನು ಅಧಿಸೂಚಿಸಿದೆ.

ಇದರ ಮುಖ್ಯ ಉದ್ದೇಶ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ’ (Cauvery Water Management Authority – CWMA) ಅನ್ನು ಸ್ಥಾಪಿಸುವುದು. ಇದನ್ನು ಕಾವೇರಿ ಜಲ ವಿವಾದ ನ್ಯಾಯಮಂಡಳಿ (Tribunal) ಯ ತೀರ್ಪನ್ನು ಜಾರಿಗೆ ತರುವುದಕ್ಕಾಗಿ ಮಾಡಲಾಗಿದೆ. ಆ ತೀರ್ಪನ್ನು ಸುಪ್ರೀಂ ಕೋರ್ಟ್ 16.02.2018ರ ಆದೇಶದ ಮೂಲಕ ತಿದ್ದುಪಡಿ ಮಾಡಿದೆ.

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...