Homeಮುಖಪುಟಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!

ಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!

- Advertisement -
- Advertisement -

ಹಣವನ್ನು ಕಳೆದುಕೊಂಡಿರುವ ಗೇಮರುಗಳು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಬೆಟ್ಟಿಂಗ್ ಒಳಗೊಂಡ “ಆನ್‌ಲೈನ್ ರಮ್ಮಿ ಗೇಮಿಂಗ್” ನಿಷೇಧಿಸಿ ಸುಗ್ರೀವಾಜ್ಞೆಯನ್ನು ಪ್ರಕಟಿಸಿದೆ.

ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಕೆಲ ದಿನಗಳ ಹಿಂದೆಯೆ ಭರವಸೆ ನೀಡಿದ್ದರು. ರಾಜ್ಯ ಸರ್ಕಾರದ ಪ್ರಸ್ತಾವನೆಯ ಆಧಾರದ ಮೇಲೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಸುಗ್ರೀವಾಜ್ಞೆಯನ್ನು ನಿನ್ನೆ ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಆಂಧ್ರಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ಆನ್‌ಲೈನ್ ರಮ್ಮಿಯನ್ನು ನಿಷೇಧಿಸಿತ್ತು. ಬೆಟ್ಟಿಂಗ್ ಮತ್ತು ಜೂಜಾಟದ ಕಾರಣಕ್ಕಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದು ಗೇಮಿಂಗ್‌ ಅನ್ನು ನಿಷೇಧಿಸುವಂತೆ ಕೇಳಿಕೊಂಡಿದೆ.

ಸುಗ್ರೀವಾಜ್ಞೆಯು, “ಕಂಪ್ಯೂಟರ್ ಅಥವಾ ಯಾವುದೇ ಸಂವಹನ ಸಾಧನ ಅಥವಾ ಸಂಪನ್ಮೂಲವನ್ನು ಬಳಸಿಕೊಂಡು ಸೈಬರ್‌‌ಸ್ಪೇಸ್‌‌ನಲ್ಲಿ ಜೂಜಾಡುವುದನ್ನು ನಿಷೇಧಿಸಲಾಗಿದೆ” ಎಂದು ಹೇಳಿದೆ.

ಅಷ್ಟೇ ಅಲ್ಲದೆ, ಮದ್ರಾಸ್ ಹೈಕೋರ್ಟ್ ಮಧುರೈ ಪೀಠವು ಆನ್‌ಲೈನ್ ರಮ್ಮಿ ಗೇಮಿಂಗ್ ವಿರುದ್ಧದ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದೆ. ಆನ್‌ಲೈನ್ ರಮ್ಮಿ ಆಟದಲ್ಲಿ ಭಾರಿ ಆರ್ಥಿಕ ನಷ್ಟದಿಂದಾಗಿ ಕೊಯಮತ್ತೂರಿನಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಾನೂನಿನ ಹೊರತಾಗಿಯು ಆನ್‌ಲೈನ್‌ನಲ್ಲಿ ಜೂಜಾಡಿದರೆ 5,000 ರೂ.ಗಳ ದಂಡ ಮತ್ತು ಆರು ತಿಂಗಳ ಜೈಲು ಶಿಕ್ಷೆ ಹಾಗೂ ಗೇಮ್‌ಗೆ ಸ್ಪೇಸ್ ನೀಡಿದವರಿಗೆ ಎರಡು ವರ್ಷಗಳ ಜೈಲು ಮತ್ತು 10,000 ರೂ.ಗಳ ದಂಡವನ್ನು ವಿಧಿಸಲಾಗುವು ಎಂದು ಸುಗ್ರೀವಾಜ್ಞೆ ಹೇಳಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...