HomeUncategorizedತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್ಸಂಗ್ ಇಂಡಿಯಾ ಕಂಪೆನಿಯ ಕಾರ್ಮಿಕರ ಮುಷ್ಕರವನ್ನು ಮುಂದುವರೆಸಿದ್ದು, ಒಕ್ಕೂಟದ ಮಾನ್ಯತೆ ನೀಡುವಂತೆ ಮತ್ತು ಸ್ವಾಭಿಮಾನಕ್ಕಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ಮತ್ತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್‌ 9ರಿಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂಓದಿ: ಗೌರಿ ಲಂಕೇಶ್ ಅವರಿಗೆ ALIFA ಬಹಿರಂಗ ಪತ್ರ | ‘ಬೆಂಕಿ ಮತ್ತು ಹೂವುವಿನಂತ ಗೌರಿ!’

“ನಮ್ಮೆಲ್ಲರ ಗುರುತಿನ ಚೀಟಿಗಳಲ್ಲಿ ನಮ್ಮ ಹೆಸರುಗಳಿವೆ ಮತ್ತು ನಮ್ಮಲ್ಲಿ ಹೆಚ್ಚಿನವರು ಹಲವಾರು ವರ್ಷಗಳಿಂದ ಇಲ್ಲಿ ಕೆಲಸ ಮಾಡಿದ್ದೇವೆ ಆದರೆ ನಮ್ಮ ತಕ್ಷಣದ ಮೇಲ್ವಿಚಾರಣಾ ಎಂಜಿನಿಯರ್‌ಗಳು ಎಂದಿಗೂ ನಮ್ಮ ಹೆಸರನ್ನು ಕರೆಯುವುದಿಲ್ಲ” ಎಂದು ಅಸೆಂಬ್ಲಿ ಆಪರೇಟರ್ ಆಗಿ ಕೆಲಸ ಮಾಡುವ ಶ್ರೀನಿವಾಸನ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಮುಷ್ಕರದಲ್ಲಿ ಭಾಗವಹಿಸುವ ಅದರ 1800 ಕಾರ್ಮಿಕರಲ್ಲಿ ಹೆಚ್ಚಿನ 1300 ಮಂದಿ ಅಸೆಂಬ್ಲಿ ಆಪರೇಟರ್‌ಗಳಾಗಿ ಕೆಲಸ ಮಾಡುತ್ತಾರೆ. ಇವರಲ್ಲಿ ಸುಮಾರು 50-60% ಮಹಿಳೆಯರಾಗಿದ್ದು, ಯಾವುದೇ ಮಹಿಳಾ ಕಾರ್ಮಿಕರು ಪ್ರತಿಭಟನೆಯ ಭಾಗವಾಗಿಲ್ಲದಿದ್ದರೂ, ಪ್ರತಿಭಟನೆಯನ್ನು ಬೆಂಬಲಿಸಲು ಅರ್ಧದಷ್ಟು ಜನರು ಕೆಲಸಕ್ಕೆ ಹಾಜರಾಗಲಿಲ್ಲ ಎಂದು ಸಿಐಟಿಯು ಸಂಘಟಕರು ಹೇಳಿದ್ದಾರೆ.

ಕಾರ್ಮಿಕರು ವರ್ಷಕ್ಕೆ 20 ವೈಯಕ್ತಿಕ ರಜೆಗಳು ಮತ್ತು 7 ಕ್ಯಾಶುಯಲ್ ರಜೆಗಳಿಗೆ ಅರ್ಹರಾಗಿರುತ್ತಾರೆ. ಆದರೆ ಅವುಗಳನ್ನು ಬಳಸಲು ಯಾವಾಗಲೂ ಅನುಮತಿಸಲಾಗುವುದಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.ತಮಿಳುನಾಡು

ಇದನ್ನೂಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

“ಕುಟುಂಬದಲ್ಲಿ ಸಾವಿನ ಸಂದರ್ಭದಲ್ಲಿ ಸಹ, ನಮಗೆ ಮೂರು ಅಥವಾ ನಾಲ್ಕನೇ ದಿನ ಫೋನ್ ಕರೆಗಳು ಬರುತ್ತವೆ. ಕರೆ ಮಾಡಿ, ಯಾವಾಗ ಕೆಲಸಕ್ಕೆ ಮರಳುತ್ತೀರ ಎಂದು ಅವರು ಕೇಳುತ್ತಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುವ ಪ್ರವೀಣ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಈಗ ಅಧಿಕೃತವಾಗಿ ದಿನಕ್ಕೆ ಒಂಬತ್ತು ಗಂಟೆಗಳ ಕಾಲ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಕೆಲಸ ಮಾಡುತ್ತಾರೆ. ಪ್ರತಿದಿನ 40 ನಿಮಿಷಗಳ ಕಾಲ ಊಟಕ್ಕೆ ಬಿಡುತ್ತಾರೆ. ಆದಾಗ್ಯೂ, ಪ್ರತಿದಿನ ಸಂಜೆ 5:30 ಕ್ಕೆ ಹೊರಡುವ ಬಸ್‌ಗಳನ್ನು ಹಿಡಿಯಲು ಕೆಲವೇ ನಿಮಿಷಗಳು ಬಾಕಿ ಇರುವಾಗ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗುತ್ತದೆ ಎಂದು ಅರೋಪಿಸಲಾಗಿದೆ. ತಮಗೆ ಈಗ ಎಂಟು ಗಂಟೆಗಳ ಕೆಲಸದ ಅವಧಿ ಮಾಡಬೇಕು ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ಸೋಮವಾರ, ಅನುಮತಿ ಪಡೆಯದೆ ಕಾಂಚೀಪುರಂ ಕಲೆಕ್ಟರೇಟ್‌ಗೆ ಮೆರವಣಿಗೆ ನಡೆಸಿದ ಆರೋಪದ ಮೇಲೆ ಮುತ್ತುಕುಮಾರ್ ಸೇರಿದಂತೆ 117 ಕಾರ್ಮಿಕರನ್ನು ಬಂಧಿಸಲಾಗಿತ್ತು. ತಮಿಳುನಾಡು

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಸದನದಲ್ಲಿ ಕೆ.ಎಸ್ ಪುಟ್ಟಣ್ಣಯ್ಯನವರು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಹೀಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...