Homeಮುಖಪುಟತಮಿಳುನಾಡು ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 47ಕ್ಕೆ ಏರಿಕೆ, 30 ಜನರ ಸ್ಥಿತಿ ಗಂಭೀರ

ತಮಿಳುನಾಡು ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 47ಕ್ಕೆ ಏರಿಕೆ, 30 ಜನರ ಸ್ಥಿತಿ ಗಂಭೀರ

- Advertisement -
- Advertisement -

ಕಲ್ಲಕುರಿಚಿ ಕಳ್ಳಬಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 47 ಕ್ಕೆ ಏರಿದ್ದು, ಕನಿಷ್ಠ 30 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ತಿಳಿಸಿದೆ. ಗುರುವಾರದವರೆಗೆ ಸಾವನ್ನಪ್ಪಿದ 29 ಜನರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಮತ್ತು ಶವಗಳಿಗೆ ಅಂತಿಮ ಸಂಸ್ಕಾರ ಮಾಡಲಾಗಿದೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಪ್ರಶಾಂತ್ ಎಂಎಸ್ ತಿಳಿಸಿದ್ದಾರೆ.

“ಕಲ್ಲಕುರಿಚಿ, ಜಿಪ್ಮರ್, ಸೇಲಂ ಮತ್ತು ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 165 ಜನರನ್ನು ನಕಲಿ ಮದ್ಯ ಸೇವಿಸಿ ದಾಖಲಿಸಲಾಗಿದೆ. ಅವರಲ್ಲಿ ಇದುವರೆಗೆ 47 ಮಂದಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 118 ಮಂದಿಯಲ್ಲಿ 30 ಮಂದಿಯ ಸ್ಥಿತಿ ಗಂಭೀರವಾಗಿದೆ” ಎಂದು ಅವರು ಹೇಳಿದರು.

“ಒಂದು ಸಮಾಧಾನಾಕರ ಸುದ್ದಿ ಎಂದರೆ, ಚಿಕಿತ್ಸೆ ಪಡೆಯುತ್ತಿದ್ದ ಮೂವರು ವ್ಯಕ್ತಿಗಳು ಚೇತರಿಸಿಕೊಂಡಿದ್ದಾರೆ” ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಕಲ್ಲಾಕುರಿಚಿ ಜಿಎಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, “ಜಿಲ್ಲೆಯಲ್ಲಿ ಅಕ್ರಮ ಕಳ್ಳಬಟ್ಟಿ ಮಾರಾಟ ತಡೆಯಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸುವಂತೆ ತಿಳಿಸಲಾಗಿದೆ” ಎಂದರು.

ಅಕ್ರಮ ಮದ್ಯ ಸೇವಿಸಿದವರು ಸ್ವಯಂ ಪ್ರೇರಿತವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅಗತ್ಯವಿದ್ದರೆ ಚಿಕಿತ್ಸೆಗೆ ಒಳಪಡಿಸಿ ಜೀವ ಬೆದರಿಕೆಯನ್ನು ತಪ್ಪಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ; ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ; ಜಾಮೀನು ಆದೇಶಕ್ಕೆ ತಡೆ ನೀಡಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...