Homeಮುಖಪುಟನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ 6.5 ಎಕರೆ ಜಮೀನು ಹೊಂದಿರುವ ಇಬ್ಬರು ರೈತರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ತಿಂಗಳು ನಿವೃತ್ತರಾಗಲಿರುವ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯೊಬ್ಬರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಚೆನ್ನೈ (ಉತ್ತರ) ಜಿಎಸ್‌ಟಿ ಮತ್ತು ಸೆಂಟ್ರಲ್ ಎಕ್ಸೈಸ್‌ನ ಡೆಪ್ಯುಟಿ ಕಮಿಷನರ್ ಬಿ ಬಾಲಮುರುಗನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ನಿರ್ಮಲಾ ಸೀತಾರಾಮನ್‌ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದಾರೆ.

ರೈತರು ತಮ್ಮ ಜಮೀನು ಕಬಳಿಸುವ ಪ್ರಯತ್ನವನ್ನು ವಿರೋಧಿಸಿದ್ದಕ್ಕೆ ಟಾರ್ಗೆಟ್ ಮಾಡಲಾಗಿದೆ ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಪ್ರಕರಣವು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುವುದನ್ನು ತೋರಿಸುತ್ತದೆ. ವಾಸ್ತವವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಾಲಮುರುಗನ್ ಹೇಳಿದ್ದಾರೆ.

ಬಡ ದಲಿತ ರೈತರಿಗೆ ನ್ಯಾಯ ಒದಗಿಸಲು ಮತ್ತು ಜಾರಿ ನಿರ್ದೇಶನಾಲಯವನ್ನು ಉಳಿಸಲು ಸೀತಾರಾಮನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರಪತಿಯನ್ನು ಒತ್ತಾಯಿಸಿದ್ದಾರೆ.

ಅಧಿಕಾರಿ ಬಾಲಮುರುಗನ್ ಅವರು ಈ ಹಿಂದೆ ತನ್ನ ಸಾರ್ವಜನಿಕ ಸೇವೆಯಿಂದ ಸ್ವಯಂ ನಿವೃತ್ತಿ (ವಿಆರ್‌ಎಸ್) ಕೋರಿದ್ದರು. ಆದರೆ, ಹಣಕಾಸು ಇಲಾಖೆ ಅದನ್ನು ಮಾನ್ಯ ಮಾಡಿರಲಿಲ್ಲ. ಇದೇ ಜನವರಿ 31ರಂದು ಅವರು ವಯೋ ನಿವೃತ್ತಿ ಹೊಂದಲಿದ್ದಾರೆ.

2020ರಲ್ಲಿ ತನ್ನ ಸಹೋದ್ಯೋಗಿಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಧಿಕಾರಿ ಬಾಲಮುರುಗನ್ ಸುದ್ದಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆಯೂ ಇವರು ಅನುಮಾನ ವ್ಯಕ್ತಪಡಿಸಿದ್ದರು.

ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನ ಕಣ್ಣಯ್ಯನ್ ಮತ್ತು ಕೃಷ್ಣನ್ ಎಂಬ ಇಬ್ಬರು ರೈತರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಡಿ ನೋಟಿಸ್ ನೀಡಿದೆ. ಇವರ ವಿರುದ್ಧ ಎರಡು ಭಾರತೀಯ ಕಾಡೆಮ್ಮೆಗಳ ಸಾವಿಗೆ ಕಾರಣವಾದ ಅಕ್ರಮ ವಿದ್ಯುತ್ ಬೇಲಿಯನ್ನು ನಿರ್ಮಿಸಿದ್ದಕ್ಕಾಗಿ 2017 ರಲ್ಲಿ ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅತ್ತೂರಿನ ಸ್ಥಳೀಯ ನ್ಯಾಯಾಲಯವು ಇಬ್ಬರನ್ನು ಖುಲಾಸೆಗೊಳಿಸಿತ್ತು. ವನ್ಯಜೀವಿ (ರಕ್ಷಣೆ) ಕಾಯ್ದೆಯಡಿ ದಾಖಲಿಸಲಾದ ಪ್ರಕರಣಗಳನ್ನು ತನಿಖೆ ಮಾಡಲು ಇಡಿಗೆ ಅಧಿಕಾರವಿದ್ದರೂ, 2021 ರಲ್ಲಿ ರೈತರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಸೂಚಿಸಿದೆ. ಇದಾಗಿ ಎರಡು ವರ್ಷಗಳ ನಂತರ ಇಡಿ ನೋಟಿಸ್ ನೀಡಿದೆ ಎಂದು ಅಧಿಕಾರಿ ಬಾಲಮುರುಗನ್‌ ಹೇಳಿದ್ದಾರೆ.

ಜೂನ್ 2023ರಲ್ಲಿ ಇಬ್ಬರು ರೈತ ಸಹೋದರರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ಸ್ಥಳೀಯ ವಕೀಲರ ಸಹಾಯದಿಂದ ಇಬ್ಬರು ಇಡಿ ಮುಂದೆ ಹಾಜರಾಗಿದ್ದರು. ಇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಈ ವಿಷಯ ಬಯಲಾಗಿತ್ತು.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...