Homeಮುಖಪುಟತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಾಗಿ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಅಂತಿಮ ನಿರ್ಧಾರ ಹೊರಬಂದಿಲ್ಲ.

- Advertisement -
- Advertisement -

2021ರ ತಮಿಳುನಾಡು ವಿಧಾನಸಭೆ ಚುನಾವಣೆ ಕಣ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ನಟರು, ಪಕ್ಷಗಳ ಒಡಕುಗಳು, ಹೊಸ ಹೊಸ ಪಕ್ಷಗಳ ಹುಟ್ಟು ಇವುಗಳ ಆಚೆಗೂ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಹಳೆಯ ಅಭ್ಯಾಸದಂತೆ ಇತರ ಪಕ್ಷಗಳಿಂದ ಮುಖಂಡರನ್ನು ಸೆಳೆಯಲು ಮುಂದಾಗಿದೆ.

ನಟ, ರಾಜಕಾರಣಿ ಕಮಲ್ ಹಾಸನ್ ಈ ಬಾರಿಯ ವಿಧಾನಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಆದರೆ ಮಕ್ಕಳ ನಿಧಿ ಮಯ್ಯಂ ಪಕ್ಷದ ನಾಯಕ, ಪ್ರಧಾನ ಕಾರ್ಯದರ್ಶಿ ಎ.ಅರುಣಾಚಲಂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಮಲ್ ಹಾಸನ್ ತಮಿಳುನಾಡಿನಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರ ನಡೆಸುತ್ತಿರುವ ಹೊತ್ತಿನಲ್ಲೇ ತನ್ನ ಪಕ್ಷದ ಹಿರಿಯ ಮುಖಂಡರು ಭಾರತೀಯ ಜನತಾ ಪಾಟಿಗೆ ಸೇರ್ಪಡೆಗೊಂಡಿರುವುದು ಕಮಲ್ ಹಾಸನ್‌ಗೆ  ಚುನಾವಣೆಗೂ ಮುನ್ನವೇ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬಿಗ್‌ಬಾಸ್ ನಡೆಸುವವರಿ‌ಗೆ ರಾಜಕೀಯದ ಬಗ್ಗೆ ಏನು ಗೊತ್ತು – ತಮಿಳುನಾಡು ಸಿಎಂ: ತಿರುಗೇಟು ನೀಡಿದ ಕಮಲ್

ಚೆನ್ನೈನ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಎಂಎನ್‌ಎಂ ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲಂ, ತೂತುಕುಡಿ ಜಿಲ್ಲೆಯ ಒಂದು ಹಳ್ಳಿಯವರಾಗಿದ್ದು, ತಮಿಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ್ ನೀಧಿ ಮಯ್ಯಂಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಚುನಾವಣಾ ಪ್ರಚಾರ ಆರಂಭಿಸಿದ್ದ ವೇಳೆ ಪಕ್ಷದ ಮುಖಂಡ ಕಮಲ್ ಹಾಸನ್, ಪ್ರಚಾರ ಕಾರ್ಯಗಳಲ್ಲಿ ಅರುಣಾಚಲಂ ಅವರಿಗೆ ಪ್ರಾಮುಖ್ಯತೆ ನೀಡಲಾಗಿಲ್ಲ ಮತ್ತು ಕಮಲ್ ಹಾಸನ್ ಪಕ್ಷ ಮುನ್ನಡೆಸುತ್ತಿರುವ ಬಗ್ಗೆ ಇತರರಿಗೆ ಅಸಮಾಧಾನ ಇದೆ ಎಂದು ಮಾಹಿತಿ ದೊರೆತಿದೆ.

ಕಮಲ್ ಹಾಸನ್ ಈ ತಿಂಗಳ ಆರಂಭದಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಈಗ ಎರಡನೇ ಹಂತದಲ್ಲಿದೆ ಪ್ರಚಾರ ಕಾರ್ಯ ನಡೆಯುತ್ತಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ತೀವ್ರ ಟೀಕೆ, ಆರೋಪಗಳನ್ನು ಮಾಡುತ್ತಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ಚುನಾವಣೆಗೆ  ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಎಲ್ಲ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ನಟ ರಜನಿಕಾಂತ್ ಇದೇ ತಿಂಗಳ ಅಂತ್ಯದಲ್ಲಿ ತಮ್ಮ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ.

ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಯಾವುದೇ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿಲ್ಲ. ಆದರೆ, “ನಮ್ಮ ಸಿದ್ಧಾಂತವು ಹೊಂದಿಕೆಯಾಗುವಂತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ” ಎಂದು ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...