Homeಮುಖಪುಟತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದ ಎನ್ನಲಾಗಿದೆ.

- Advertisement -
- Advertisement -

ಕುಖ್ಯಾತ ದರೋಡೆಕೋರನೊಬ್ಬ ಸೋಮವಾರ ಚೆನ್ನೈನ ವಂಡಲೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕಕ್ಕೆ ಸೇರಲು ಪ್ರಯತ್ನಿಸಿದ್ದು, ಆದರೆ ಪೊಲೀಸರನ್ನು ನೋಡಿದ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ.

50 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸೂರ್ಯ, ರಾಜ್ಯ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲು ಹೊರಟಿದ್ದರು ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸೂರ್ಯ ಪಾಲ್ಗೊಳ್ಳಲಿದ್ದಾನೆ ಎಂದು ಚೆಂಗಲ್ಪಟ್ಟು ಜಿಲ್ಲಾ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಆ ಸ್ಥಳಕ್ಕೆ ತೆರಳಿದರು. ಆದರೆ, ಪೋಲೀಸರು ಬಂದುದ್ದನ್ನು ಗಮನಿಸಿದ ಆತ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ.

ಈ ಕುರಿತು ಟ್ವೀಟ್ ಮಾಡಿರುವ ಪತ್ರಕರ್ತ ಶರವಣನ್, “ವಂಡಲೂರು ಬಳಿ, ಭಾಜಾಪ ನಾಯಕ ಎಲ್.ಮುರುಗನ್ ಅವರ ಮುಂದಾಳತ್ವದಲ್ಲಿ, ಬಿಜೆಪಿ ಸೇರುವುದಕ್ಕೆ ಬಂದಿದ್ದ ಪ್ರಬಲ ರೌಡಿ ನೆರ್ಕುಂಡ್ರಂ ಸೂರ್ಯ(7 ಕೊಲೆ ಸೇರಿದಂತೆ 52 ಪ್ರಕರಣಗಳು) ಪೋಲೀಸರನ್ನು ಕಂಡೊಡನೆ ಪರಾರಿಯಾಗಿದ್ದಾನೆ. ಇತ್ತೀಚೆಗೆ ದಕ್ಷಿಣ ಚೆನ್ನೈನ ಕುಖ್ಯಾತ ದಾದಾ ಕಲ್ವೆಟ್ಟು ರವಿ ಭಾಜಾಪದೊಂದಿಗೆ ಸೇರಿಕೊಂಡಿದ್ದಾನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ತಮಿಳುನಾಡು ಘಟಕದಿಂದ ಕೀಳುಮಟ್ಟದ ಟ್ವೀಟ್‌: ನೆಟ್ಟಿಗರ ಖಂಡನೆ

ಈ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ, ಚಾಕು ಇಟ್ಟುಕೊಂಡಿದ್ದ ಇತರೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಸೂರ್ಯನೊಂದಿಗೆ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ದಿ ಹಿಂದು ವರದಿ ಮಾಡಿದೆ.

ಆರು ಆರೋಪಿಗಳೊಂದಿಗೆ ಪಕ್ಷದ ಇಬ್ಬರು ಸದಸ್ಯರನ್ನು ಸಹ ಬಂಧಿಸಲಾಗಿರುವುದರಿಂದ, ಪೊಲೀಸ್ ಠಾಣೆಯ ಹೊರಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ತಮಿಳುನಾಡು ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಪತ್ರಿಕೆಗೆ ತಿಳಿಸಿದ್ದಾರೆ. “ಆ ಇಬ್ಬರು ಮಾತ್ರ ನಮ್ಮ ಪಕ್ಷದ ಸದಸ್ಯರು. ಆ ಆರು ಜನರ ಬಿಡುಗಡೆಯನ್ನು ನಾವು ಬಯಸಲಿಲ್ಲ” ಎಂದು ಅವರು ಹೇಳಿದರು.

ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರುತ್ತಿರುವುದರ ಬಗ್ಗೆ ರಾಘವನ್ ಅವರನ್ನು ಪ್ರಶ್ನಿಸಿದಾಗ, “ನೂರಾರು ಜನರು ಬಿಜೆಪಿಗೆ ಸೇರುತ್ತಿರುವುದರಿಂದ ಪ್ರತಿಯೊಬ್ಬರ ವಿವರಗಳನ್ನು ಪರಿಶೀಲಿಸುವುದು ಕಷ್ಟ. ಸದಸ್ಯರ ಒಳಹರಿವು ಹೆಚ್ಚಾಗಿದ್ದಾಗ ಈ ರೀತಿಯ ಒಂದೆರೆಡು ಪ್ರಕರಣಗಳು ಜರುಗಿವೆ. ಈ ಬಗ್ಗೆ ನಾವು ಜಾಗರೂಕರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಕೆ.ಅಣ್ಣಾಮಲೈ

“ದರೋಡೆಕೋರರು ತಮ್ಮ ಪಕ್ಷಕ್ಕೆ ಸೇರಲು ಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಕಾಳಜಿ ವಹಿಸುತ್ತದೆಯೇ” ಎಂದು ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸೂರ್ಯ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕಗಳ ಬಳಕೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹಳಷ್ಟು ರೌಡಿ ಹಿನ್ನೆಲೆಯ ಜನರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಬಿಜೆಪಿ ಸೇರಿದರೆ ತಮ್ಮ ಮೇಲಿನ ಪ್ರಕರಣಗಳನ್ನು ಕೈಬಿಡಲಾಗುತ್ತದೆ ಎಂಬ ಆಮಿಷ ಒಡ್ಡಲಾಗುತ್ತಿದೆ ಎಂಬ ವದಂತಿ ಸಹ ಚಾಲ್ತಿಯಲ್ಲಿದೆ ಎನ್ನಲಾಗಿದೆ.


ಇದನ್ನೂ ಓದಿ: ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತ್ತೆ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

0
ಜೂನ್ 10 ರಿಂದ ಗೋಧಿಗೆ ಬೋನಸ್ ಮತ್ತು ಭತ್ತ ಬಿತ್ತನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಒತ್ತಾಯಿಸಿರುವ ಪಂಜಾಬ್‌ನ ರೈತರು ಮೇ 17 ರ ಮಂಗಳವಾರದಂದು ಚಂಡೀಗಢ...