Homeಮುಖಪುಟತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

- Advertisement -
- Advertisement -

ತಮಿಳುನಾಡಿನಲ್ಲಿ ಕಾನೂನು ವಿದ್ಯಾರ್ಥಿ ಅಬ್ದುಲ್ ರಹೀಂ (21) ಮೇಲೆ ದೌರ್ಜನ್ಯ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 9 ಮಂದಿ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವಿದ್ಯಾರ್ಥಿ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳು ಪುಲಿಯಂತೋಪ್‌ನ ಉಪ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ನಂತರ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಂಕೆಬಿ ನಗರದ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ನಜೀಮಾ ಮತ್ತು ಎಂಟು ಪೊಲೀಸ್ ಸಿಬ್ಬಂದಿ ಕಳೆದ ಶುಕ್ರವಾರ ಕಾನೂನು ವಿದ್ಯಾರ್ಥಿನಿಯೊಬ್ಬರನ್ನು ತೀವ್ರವಾಗಿ ಥಳಿಸಿದ್ದರು. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪೊಲೀಸ್ ಪೇದೆ ಮತ್ತು ಹೆಡ್ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಐದನೇ ವರ್ಷದ ಕಾನೂನು ವಿದ್ಯಾರ್ಥಿ ಅಬ್ದುಲ್ ರಹೀಂನನ್ನು ಕಳೆದ ಶುಕ್ರವಾರ ಕೊಡುಂಗೈಯೂರು ಬಳಿಯ ಎಂಆರ್ ನಗರದಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ಪೊಲೀಸರನ್ನು ತಡೆದಾಗ ಆತ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಬಂಧಿಸಲಾಗಿತ್ತು. ನಂತರ ಪೊಲೀಸರು ರಹೀಂನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಕೊರೊನಾ ವೀಕೆಂಡ್ ಕರ್ಫ್ಯೂ ರದ್ದು: ಸಿಎಂ ನೇತೃತ್ವದ ತಜ್ಞರ ಸಭೆಯಲ್ಲಿ ನಿರ್ಧಾರ

ಇದೇ ವೇಳೆ ಠಾಣೆಯಲ್ಲೇ ತನಗೆ ಪೊಲೀಸರು ಥಳಿಸಿ ಬೂಟಿನಿಂದ ಒದ್ದರು ಎಂದು ರಹೀಂ ಆರೋಪಿಸಿದ್ದರು. ಠಾಣೆಯೊಳಗೆ ಪೊಲೀಸರು ಹೇಗೆ ತಮಗೆ ಚಿತ್ರಹಿಂಸೆ ನೀಡಿದರು ಎಂದು ತಮ್ಮ ಗಾಯಗಳನ್ನು ತೋರಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಪ್ರಸಾರ ಮಾಡಿದ್ದರು.  ನಂತರ, ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

ಘಟನೆ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ವಿದ್ಯಾರ್ಥಿಗಳು, ವಕೀಲರು ಬೀದಿಗಿಳಿದು ಪೊಲೀಸ್ ಇನ್ಸ್‌ಪೆಕ್ಟರ್ ನಜೀಮಾ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದರು. ವಿದ್ಯಾರ್ಥಿ ರಹೀಂ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಇತರ ಎಂಟು ಮಂದಿಯನ್ನು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದಕ್ಕಾಗಿ ಶಿಕ್ಷೆ), 324 (ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಮತ್ತು 294 ( ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’...

0
ಯೂಟ್ಯೂಬರ್ ಒಬ್ಬರು ನಿರುದ್ಯೋಗದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಉತ್ತರ ಪ್ರದೇಶದ ಆಝಂಗಢ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ಅಥವಾ ನಿರಹುವಾ ಅವರು "ಪ್ರಧಾನಿ...