Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

- Advertisement -
- Advertisement -

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್ ಜಿಲ್ಲೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅದರ ಕಾರ್ಮಿಕನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಕಾರ್ಮಿಕ ಸಂಘಟನೆಯ ಹತ್ತು ಸದಸ್ಯರನ್ನು ಬಂಧಿಲಾಗಿದ್ದು, ಬುಧವಾರ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್ ಇಂಡಿಯಾ ಉತ್ಪಾದನಾ ಘಟಕದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಏಚೂರ್ ಗ್ರಾಮದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಟೆಂಟ್‌ಗಳನ್ನು ಬುಧವಾರ ಪೊಲೀಸರು ಕೆಡವಿದ್ದಾರೆ. ಆದರೆ, ಕಾರ್ಮಿಕರು ತೆರೆದ ಜಾಗದಲ್ಲಿ ಪ್ರತಿಭಟನೆ ಮುಂದುವರಿಸಿದ್ದು, ಪೊಲೀಸರು ಮತ್ತೊಂದು ಸುತ್ತಿನ ಬಂಧನಕ್ಕೆ ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಎಷ್ಟು ಜನರನ್ನು ಬಂಧಿಸಲಾಗಿದೆ ಅಥವಾ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲಎಂದು ಸ್ಕ್ರಾಲ್.ಕಾಂ ವರದಿ ಹೇಳಿದೆ. ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಇಂಡಿಯಾ ಗೃಹೋಪಯೋಗಿ ಕಾರ್ಖಾನೆಯ ಬಹುತೇಕ ಕಾರ್ಮಿಕರು ಸೆಪ್ಟೆಂಬರ್ 9 ರಿಂದ ಮುಷ್ಕರ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರತಿಭಟನೆಯು ಭಾರತದಲ್ಲಿ ಇತ್ತಿಚೆಗೆ ನಡೆಯುತ್ತಿರುವ ಅತಿದೊಡ್ಡ ಮುಷ್ಕರಗಳಲ್ಲಿ ಒಂದಾಗಿದೆ.

ಇದನ್ನೂಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ಉತ್ತಮ ಕೆಲಸದ ಪರಿಸ್ಥಿತಿಗಳು, ಹೆಚ್ಚಿನ ವೇತನ ಮತ್ತು ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಎಂಬ ತಮ್ಮ ಕಾರ್ಮಿಕ ಒಕ್ಕೂಟದ ಮಾನ್ಯತೆಗಾಗಿ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಟೋಬರ್ 2 ರಂದು, 900 ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದರು.

ಅಕ್ಟೋಬರ್ 3ರಂದು ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಟ್ರೇಡ್ ಯೂನಿಯನ್ ಆಕ್ಟ್ ಅಡಿಯಲ್ಲಿ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್ ಅನ್ನು ನೋಂದಾಯಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ನಿರ್ಧರಿಸಲು ಎರಡು ವಾರಗಳ ಕಾಲಾವಕಾಶ ನೀಡಿದೆ.

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಇದು ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ಹೊಂದಿದೆ.

ಇದನ್ನೂಓದಿ: ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಸೆಪ್ಟೆಂಬರ್ 16 ರಂದು, ಪೊಲೀಸರು 104 ಮುಷ್ಕರ ನಿರತ ಕಾರ್ಮಿಕರನ್ನು ಕಾರ್ಖಾನೆಯಲ್ಲಿ ಸುಮಾರು ಒಂದು ದಿನ ಬಂಧಿಸಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ಪ್ರತಿಭಟನೆಯು ಎರಡನೇ ತಿಂಗಳಿಗೆ ಪ್ರವೇಶಿಸುತ್ತಿದ್ದಂತೆ, ಬುಧವಾರದಂದು ಕಾರ್ಮಿಕರು ಸ್ಯಾಮ್‌ಸಂಗ್ ನೀಡಿದ ಪರಿಹಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕಂಪನಿಯು ಕಾರ್ಮಿಕರಿಗೆ ಮಾರ್ಚ್ ವರೆಗೆ ಮಾಸಿಕ 5,000 ರೂ.ಗಳ ಪ್ರೋತ್ಸಾಹಧನ, ಹೆಚ್ಚಿನ ಹವಾನಿಯಂತ್ರಿತ ಬಸ್ಸುಗಳು, ವೈವಿಧ್ಯಮಯ ಕೆಫೆಟೇರಿಯಾ ಮೆನು ಮತ್ತು ಹೆರಿಗೆಯ ಸಂದರ್ಭದಲ್ಲಿ ಸುಮಾರು 2,000 ರೂ.ಗಳ ಉಡುಗೊರೆ ಕಾರ್ಡ್ ಅನ್ನು ನೀಡಿತ್ತು. ಆದರೆ ಸ್ಯಾಮ್‌ಸಂಗ್ ಇಂಡಿಯಾ ತೊಳಿಲಾಲರ್ ಸಂಗಮ್‌ಗೆ ಮಾನ್ಯತೆ ನೀಡಲು ಕಂಪನಿಯು ಯಾವುದೇ ಇಚ್ಛೆಯನ್ನು ತೋರಿಸದ ಕಾರಣ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕ ಸಂಘವು ಕಂಪೆನಿಯ ಪ್ರಸ್ತಾಪವನ್ನು ತಿರಸ್ಕರಿಸಿತು.

ಭಾನುವಾರದಂದು ರಾಜ್ಯ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರು ಸ್ಯಾಮ್‌ಸಂಗ್‌ನ ಆಡಳಿತವು “ಗಮನಾರ್ಹವಾದ ವೇತನ ಹೆಚ್ಚಳ ಮತ್ತು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಂತೆ ತಮ್ಮ ಉದ್ಯೋಗಿಗಳು ಎತ್ತಿರುವ ಪ್ರಮುಖ ಬೇಡಿಕೆಗಳಿಗೆ ಸಮ್ಮತಿಸಿದೆ ಮತ್ತು ಉಳಿದ ಉದ್ಯೋಗಿಗಳು ಕೆಲಸಕ್ಕೆ ಮರಳಿದ ನಂತರ ಇತರ ಕೆಲವು ಬೇಡಿಕೆಗಳನ್ನು ಪರಿಗಣಿಸಲು ಸಹ ಒಪ್ಪಿಕೊಂಡಿದೆ” ಎಂದು ಹೇಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...