Homeಮುಖಪುಟ’ತಾಂಡವ್’ ಹಿಂದೂ‌ ಧಾರ್ಮಿಕ ಭಾವನೆಯನ್ನು ನೋಯಿಸಿದೆ, ಕ್ರಮಗಳನ್ನು ಎದುರಿಸಿ: ಯುಪಿ ಸರ್ಕಾರ

’ತಾಂಡವ್’ ಹಿಂದೂ‌ ಧಾರ್ಮಿಕ ಭಾವನೆಯನ್ನು ನೋಯಿಸಿದೆ, ಕ್ರಮಗಳನ್ನು ಎದುರಿಸಿ: ಯುಪಿ ಸರ್ಕಾರ

ವೆಬ್ ಸರಣಿ ವಿರುದ್ದ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಯುಪಿ ಪೊಲೀಸ್ ತಂಡವು ತನಿಖೆಗಾಗಿ ಮುಂಬೈ ತಲುಪಿದೆ.

- Advertisement -
- Advertisement -

ಅಮೆಜಾನ್ ಪ್ರೈಮ್‌‌ನಲ್ಲಿ ಬಿಡುಗಡೆಯಾಗಿ ಪ್ರಸಾರಗೊಳ್ಳುತ್ತಿರುವ ಹಿಂದಿ ವೆಬ್‌ ಸರಣಿಯ ನಿರ್ಮಾಪಕ, ನಿರ್ದೇಶಕ ಮತ್ತು ಕಲಾವಿದರು, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ, ಆದ್ದರಿಂದ ಅವರು ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಸರಣಿಯ ವಿರುದ್ಧ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಅನೇಕ ಪೊಲೀಸ್ ಪ್ರಕರಣಗಳು ದಾಖಲಾಗಿವೆ.

“ವೆಬ್ ಸರಣಿ ತಾಂಡವ್‌ನ ನಿರ್ಮಾಪಕ, ನಿರ್ದೇಶಕ ಮತ್ತು ಕಲಾವಿದರು ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆಯನ್ನು ಹಾಳುಮಾಡುವ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಪರಾಧ ಮಾಡಿದ್ದಾರೆ. ಆದ್ದರಿಂದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ವೆಬ್ ಸರಣಿಯ ತಯಾರಕರು ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನ ಅಧಿಕಾರಿಯ ವಿರುದ್ಧ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಯುಪಿ ಪೊಲೀಸ್ ತಂಡವು ತನಿಖೆಗಾಗಿ ಮುಂಬೈ ತಲುಪಿದೆ.

ಸೋಮವಾರದಂದು ತಾಂಡವ್ ವೆಬ್ ಸರಣಿಯ ಪಾತ್ರವರ್ಗಗಳು ಮತ್ತು ಇತರ ಸಿಬ್ಬಂದಿಗಳು “ಬೇಷರತ್ತಾದ” ಕ್ಷಮೆಯಾಚಿಸಿದ್ದಾರೆ. “ನಾವು ಧಾರ್ಮಿಕ ನಂಬಿಕೆಗಳನ್ನು ಅಥವಾ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿಲ್ಲ. ವೆಬ್ ಸರಣಿಯು ಕಾಲ್ಪನಿಕವಾಗಿದ್ದು ಸಂಪೂರ್ಣವಾಗಿ ಕಾಕತಾಳೀಯ” ಎಂದು ಹೇಳಿದ್ದಾರೆ. ಕ್ಷಮೆಯಾಚನೆಯ ನಂತರ ಅಮೆಜಾನ್ ಪ್ರೈಮ್‌ನಿಂದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರತಿಕ್ರಿಯೆ ಕೋರಿದೆ.

ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ವೆಬ್ ಸರಣಿಯಲ್ಲಿ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯಾ ಮತ್ತು ಮೊಹಮ್ಮದ್ ಝೀಶನ್ ಅಯೂಬ್ ನಟಿಸಿದ್ದಾರೆ. ಸರಣಿಯು ಕಳೆದ ಶುಕ್ರವಾರ ಬಿಡುಗಡೆಯಾಯಿತು. ಸರಣಿಯ ವಿರುದ್ದ ಈಗಾಗಲೇ ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಅನೇಕ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: ‘ತಾಂಡವ್’ ವೆಬ್‌ ಸೀರೀಸ್ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...