Homeಮುಖಪುಟತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ತನಿಷ್ಕ್ ವಿರುದ್ಧದ ಕೆಟ್ಟ ಕಾಮೆಂಟ್‌ಗಳನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

- Advertisement -
- Advertisement -

ಪರ-ವಿರೋಧ ಚರ್ಚೆಗಳ ನಡುವೆ ಅಂತರ್-ಧರ್ಮೀಯ ಕುಟುಂಬಗಳ ಸೌಹಾರ್ದತೆ ಬಿಂಬಿಸುವ, ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ‘ಏಕತ್ವಂ’ ಜಾಹೀರಾತನ್ನು ಕಂಪನಿಯು ತೆಗೆದುಹಾಕಿದೆ. ಆದರೂ ಆಭರಣ ಮಳಿಗೆಗಳಿಗೆ ಬೆದರಿಕೆ ಕರೆಗಳು ಹೋಗುತ್ತಿರುವ ಕುರಿತು ವರದಿಯಾಗಿದೆ.

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ತನಿಷ್ಕ್ ಜುವೆಲ್ಲರಿ ಶಾಪ್‌ ಅನ್ನು ಗುರುಯಾಗಿಸಿಕೊಂಡು ಕೆಲವು ಗುಂಪುಗಳು ಬೆದರಿಕೆ ಕರೆಗಳನ್ನು ಮಾಡುತ್ತಿವೆ ಎಂದು ವರದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಂಗ್ ಆದ ನಂತರ ಜಾಹೀರಾತನ್ನು ಹಿಂಪಡೆಯಲಾಗಿತ್ತು.

“ಕೆಲವು ಜನರಿಗೆ ಜಾಹೀರಾತು ಇಷ್ಟವಾಗಿಲ್ಲ. ಕೆಲ ಸಮುದಾಯದವರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ಆರೋಪಿಸಿ ಕೆಲವು ಅಂಗಡಿ ಮಾಲೀಕರಿಗೆ ಬೆದರಿಕೆ ಕರೆಗಳು ಬಂದಿವೆ. ಪೊಲೀಸರು ನಿಯಮಿತವಾಗಿ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ. ಯಾವುದೇ ದರೋಡೆ, ಗಲಭೆ, ಪ್ರತಿಭಟನೆ ಅಥವಾ ದಾಳಿ ನಡೆದಿಲ್ಲ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೋಮವಾರ(ಅ.12) ರಾತ್ರಿ ತನಿಷ್ಕ್ ಅವರ ಗಾಂಧಿಧಾಮ್ ಅಂಗಡಿಯ ವ್ಯವಸ್ಥಾಪಕರಿಂದ ಕ್ಷಮೆಯಾಚನೆ ಟಿಪ್ಪಣಿ ಬರೆಯುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. “ಜಾಹೀರಾತು ನಾಚಿಕೆಗೇಡಿನ ಸಂಗತಿಯಾಗಿದೆ ಮತ್ತು ನಾವು ಕ್ಷಮೆಯಾಚಿಸುತ್ತೇವೆ ” ಎಂದು ವ್ಯವಸ್ಥಾಪಕರು ಬರೆದಿರುವ ಹೇಳಿಕೆಯನ್ನು ಬರೆಸಿಕೊಂಡ ದುಷ್ಕರ್ಮಿಗಳ ಗುಂಪು ಅದನ್ನು ಅಂಗಡಿಯಲ್ಲಿ ಅಂಟಿಸಿದೆ ಎಂದು ತಿಳಿದುಬಂದಿದೆ.

ct7fd6ko
PC: NDTV

ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆ ಗರ್ಭಿಣಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವರು ಕೆಟ್ಟ ಟ್ರೋಲಿಂಗ್ ಮಾಡಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...