Homeಮುಖಪುಟಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಅಂತರ್-ಧರ್ಮೀಯ ಕುಟುಂಬಗಳ ನಡುವಿನ ಸೌಹಾರ್ದತೆ ಬಿಂಬಿಸುವ ಟೈಟನ್ ಗ್ರೂಪ್‍ನ ತನಿಷ್ಕ್ ಜುವೆಲ್ಲರಿಯ ಏಕತ್ವಂ’ ಜಾಹೀರಾತು ಬಹುಚರ್ಚಿತ ಸುದ್ದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯ ನಡುವೆ ಕಂಪನಿಯು ಜಾಹೀರಾತನ್ನು ತೆಗೆದುಹಾಕಲಾಗಿದೆ.

ಟ್ವಿಟ್ಟರ್‌ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆಯಲ್ಲದೆ‍ ನಿನ್ನೆ #BoycottTanishq ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿ, ಈ ನಿರ್ದಿಷ್ಟ ತನಿಷ್ಕ್ ಜಾಹೀರಾತನ್ನು ನಿಷೇಧಿಸಬೇಕು ಎಂದು ಟ್ರೋಲ್ ಮಾಡಲಾಗಿತ್ತು. ಈ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು.

ಅದೇ ಸಮಯದಲ್ಲಿ ಬಹಳಷ್ಟು ಮಂದಿ ತನಿಷ್ಕ್ ಪರ ನಿಂತಿದ್ದಾರೆ. ಸೌಹಾರ್ದತೆ ಸಾರುವ ಆ ಜಾಹೀರಾತಿನಲ್ಲಿ ಆಕ್ಷೇಪಾರ್ಹವಾದುದು ಯಾವುದು ಇಲ್ಲ. ಇನ್ನು ಲವ್ ಜಿಹಾದ್ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರವೇ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಹೀಗಿರುವಾಗ ಮತಾಂಧವಾದಿಗಳ ಟ್ರೋಲ್‌ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾಗಿವೆ.

ಏಕತ್ವಂ ಎಂಬ ಶೀರ್ಷಿಕೆಯೊಂದಿಗೆ ತನಿಷ್ಕ್ ತನ್ನ ಹೊಸ ಆಭರಣವನ್ನು ಬಿಡುಗಡೆ ಮಾಡಿತ್ತು. ಅ.9ರಂದು ಬಿಡುಗಡೆಯಾದ 45 ಸೆಕೆಂಡ್‌ನ ಈ ಜಾಹೀರಾತಿನಲ್ಲಿ ಅಂತರ್‌-ಧರ್ಮೀಯ ಕುಟುಂಬಗಳನ್ನು ಒಳಗೊಂಡ ಸೌಹಾರ್ದತೆ ಸಾರುವುದಾಗಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ತನಿಷ್ಕ್ ಹೊಸ ಜಾಹೀರಾತಿನಲ್ಲಿ ಇರುವುದೇನು..?

ಮುಸ್ಲಿಂ ಕುಟುಂಬದ ವರನನ್ನು ಮದುವೆಯಾದ ಹಿಂದೂ ಮಹಿಳೆಯ ಕಥೆಯನ್ನು ಸುಂದರವಾದ ಜಾಹೀರಾತಾಗಿ ತನಿಷ್ಕ್ ಚಿತ್ರಿಸಿದ್ದಾರೆ. ಜಾಹೀರಾತಿನಲ್ಲಿ, ಹಿಂದೂ ಮಹಿಳೆಯು ಬಸುರಿಯಾಗಿದ್ದು, ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುತ್ತಾರೆ.  ಸೀಮಂತ ಸಮಾರಂಭಕ್ಕಾಗಿ ಅತ್ತೆ ಆಕೆಯನ್ನು ಕೈಹಿಡಿದು ಕರೆದೊಯ್ಯುತ್ತಾರೆ. ಸಂಭ್ರಮಾಚರಣೆಯ ಸ್ಥಳವನ್ನು ನೋಡಿ ಗರ್ಭಿಣಿ ಆಶ್ಚರ್ಯಪಡುತ್ತಾಳೆ. ಏಕೆಂದರೆ ಸಮಾರಂಭವನ್ನು ಹಿಂದೂ ಸಂಪ್ರದಾಯಗಳ ಪ್ರಕಾರ ಆಯೋಜಿಸಲಾಗಿರುತ್ತದೆ. ಗರ್ಭಿಣಿ ಅದರ ಬಗ್ಗೆ ತನ್ನ ಅತ್ತೆಯನ್ನು ’ಈ ರೀತಿಯ ಸಮಾರಂಭವನ್ನು ನಿಮ್ಮ ಮನೆಗಳಲ್ಲಿ ಆಚರಿಸಲಾಗುವುದಿಲ್ಲ, ಅಲ್ಲವೇ? ಎಂದು ಕೇಳುತ್ತಾಳೆ. ಆಗ ಆಕೆಯ ಅತ್ತೆ ’ಮಗಳನ್ನು ಸಂತೋಷಪಡಿಸುವ ಸಮಾರಂಭವನ್ನು ಪ್ರತಿ ಮನೆಯಲ್ಲಿಯೂ ನಡೆಸಲಾಗುತ್ತದೆ, ಅಲ್ಲವೇ..?’ ಎಂದು ಉತ್ತರಿಸುತ್ತಾರೆ.

ತನಿಷ್ಕ್ ಹೊಸ ಆಭರಣ ‘ಏಕತ್ವಂ’ಗಾಗಿ ಈ ವೀಡಿಯೋ ಜಾಹೀರಾತು ತಯಾರಿಸಲಾಗಿದೆ. ಯುಟ್ಯೂಬ್‍ನಲ್ಲಿ ವೀಡಿಯೊದ ವಿವರಣೆಯಲ್ಲಿ “ಆಕೆಯನ್ನು ತನ್ನ ಸ್ವಂತ ಮಗಳಂತೆ ಪ್ರೀತಿಸುವ ಕುಟುಂಬದಲ್ಲಿ ಆಕೆಯ ವಿವಾಹ ಮಾಡಿಕೊಡಲಾಗಿದೆ. ಆಕೆಗಾಗಿಯೇ ಅವರು  ತಾವು ಸಾಮಾನ್ಯವಾಗಿ ಆಚರಿಸದ ಪದ್ಧತಿಯನ್ನು ಅನುಸರಿಸಿ ಸಂಭ್ರಮಿಸುತ್ತಿದ್ದಾರೆ. ಎರಡು ಧರ್ಮಗಳು, ಪದ್ಧತಿಗಳು ಹಾಗೂ ಸಂಸ್ಕೃತಿಗಳ ಸುಂದರವಾದ ಸಂಗಮ ಎಂದು ಬರೆಯಲಾಗಿದೆ.

ತನಿಷ್ಕ್ ಜಾಹೀರಾತು ತೆಗೆದುಹಾಕಿದರೂ ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಟೈಮ್‌ಲೈನ್‌ಗಳಲ್ಲಿ ಆ ಜಾಹೀರಾತನ್ನು ಹಂಚಿಕೊಂಡು, ಈ ಸುಂದರ ಜಾಹೀರಾತನ್ನು ಇಷ್ಟಪಟ್ಟಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಜಾಹೀರಾತು ಬಹಳ ಇಷ್ಟವಾಯಿತು. ತಲೆಯಿಲ್ಲದ ದ್ವೇಷ ತುಂಬಿಕೊಂಡವರು ಮಾತ್ರ ಇದನ್ನು ಹಿಂದೂ ಮುಸ್ಲಿಂ ಕುಟುಂಬ ಎಂದು ನೋಡುತ್ತಾರೆ. ಆಭರಣ ಕಂಪನಿ ಜಾಹೀರಾತನ್ನು ಹಿಂತೆಗೆದುಕೊಂಡಿರುವುದು ವಿಷಕಾರುವವರಿಗೆ ಬೆಲೆ ಕೊಟ್ಟಂತೆ ಕಾಣುತ್ತದೆ. ಜೀವನ ಪೂರ್ತಿ ಟೈಟನ್ ವಾಚ್ ಧರಿಸಿರುವ ನಾನು ನಿಮ್ಮಿಂದ ಇದಕ್ಕಿಂತ ಉತ್ತಮವಾಗಿರುವುದನ್ನು ನಿರೀಕ್ಷಿಸಿದ್ದೆ. ಬನ್ನಿ ದ್ವೇಷದ ವಿರುದ್ಧ ಸೌಹಾರ್ದತೆಯಿಂದ ಹೋರಾಡೋಣ ಎಂದು ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

 

’ಈ ಸುಂದರವಾದ ಜಾಹೀರಾತಿನ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಹಿಂದುತ್ವವಾದಿಗಳು ಜಾಹೀರಾತು ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.  ಹಿಂದೂ-ಮುಸ್ಲಿಂ “ಏಕತ್ವಂ” ಜಾಹೀರಾತು ಅವರನ್ನು ಇಷ್ಟು ಕೆರಳಿಸುವುದಾದರೆ ಹಿಂದೂ ಮುಸ್ಲಿಂ ಏಕತೆಯ ಪ್ರತೀಕವಾಗಿರುವ ಭಾರತವನ್ನೇಕೆ ಅವರು ಬಾಯ್ಕಾಟ್ ಮಾಡಬಾರದು” ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...