Homeಮುಖಪುಟಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

- Advertisement -
- Advertisement -

‘ಮಿಸ್ ಯೂನಿವರ್ಸ್-2021’ ಹರ್ನಾಜ್ ಸಂಧು ಅವರು ಹಿಜಾಬ್ ವಿಷಯ ಸೇರಿದಂತೆ ಹುಡುಗಿಯರನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದಾರೆ. ‘ಮಹಿಳೆಯರು ಆಯ್ಕೆಮಾಡಿದ ರೀತಿಯಲ್ಲಿ ಬದುಕಲು ಬಿಡಿ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ನೀಡಿರುವ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಿಜಾಬ್‌ ಕುರಿತು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಂಧು ಅವರು ತಮ್ಮ ಅಭಿಪ್ರಾಯಗಳನ್ನು ಈ ವಿಡಿಯೊದಲ್ಲಿ ಹೇಳಿದ್ದಾರೆ. ‘ಮಿಸ್ ಯೂನಿವರ್ಸ್ 2021’ ರ ಹೋಮ್‌ಕಮಿಂಗ್ ಗೌರವಾರ್ಥವಾಗಿ ಮಾರ್ಚ್ 17 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುವ ಮೊದಲು, ಸಂಘಟಕರು ಮಧ್ಯಪ್ರವೇಶಿಸಿ ವರದಿಗಾರರಿಗೆ ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಹಾಗೂ ಅವರ ಸಾಧನೆ ಬಗ್ಗೆ ಪ್ರಶ್ನಿಸುವಂತೆ ಕೇಳಿಕೊಂಡರು. ಆದರೂ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದಲ್ಲಿ ಹುಡುಗಿಯರು ಅದೆಷ್ಟು ಬಾರಿ ಗುರಿಯಾಗುತ್ತಾರೆ ಎಂದು ತನ್ನ ವೇದನೆಯನ್ನು ವ್ಯಕ್ತಪಡಿಸಿದರು.

“ಪ್ರಾಮಾಣಿಕವಾಗಿ, ನೀವು ಯಾವಾಗಲೂ ಹುಡುಗಿಯರನ್ನು ಏಕೆ ಟಾರ್ಗೆಟ್ ಮಾಡುತ್ತೀರಿ? ಈಗಲೂ ನೀವು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ. ಹಾಗೆ, ಹಿಜಾಬ್ ವಿಷಯದಲ್ಲೂ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹುಡುಗಿಯರು ಅವರು ಆಯ್ಕೆ ಮಾಡಿದ ರೀತಿಯಲ್ಲಿ ಬದುಕಲಿ. ಅವರು ತನ್ನ ಗುರಿಯನ್ನು ತಲುಪಲಿ. ಹುಡುಗಿಯರು ಹಾರಾಡಲಿ, ಅವರ ರೆಕ್ಕೆಗಳನ್ನು ಕತ್ತರಿಸಬೇಡಿ” ಎಂದು ಸಂಧು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ಇತ್ತೀಚೆಗೆ ವಜಾಗೊಳಿಸಿತ್ತು. ಹಿಜಾಬ್‌ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಉಡುಗೆ ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪುಕ್ಕಟೆಯಾಗಿ ಈ ರೀತಿಯಲ್ಲಾದರೂ ಪಬ್ಲಿಸಿಟಿ ಪಡೆಯೋಕ್ಕೆ ಇಂತಹ ಹೇಳಿಕೆಗಳನ್ನ ಕೊಡುತ್ತಿರುವುದು ನಾಚಿಕೆಗೇಡಿನ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...