Homeಅಂತರಾಷ್ಟ್ರೀಯಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು ಗುರಿಯಾಗಿಸಲಾಗುತ್ತಿದೆ: ಪ್ರಧಾನಿ ಕಳವಳ

ಅಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನಾವು ಚಿಂತಿತರಾಗಿದ್ದೇವೆ ಎಂದು ಹೇಳಿದ್ದಾರೆ.

- Advertisement -
- Advertisement -

ಕಾನೂಲ್‌ನಲ್ಲಿ ಭಾರತ ನಿರ್ಮಿಸುತ್ತಿರುವ ಅಣೆಕಟ್ಟಿನ ಒಪ್ಪಂದದ ಬಗ್ಗೆ ಚರ್ಚಿಸಲು ಅಫ್ಘಾನಿಸ್ಥಾನದ ಅಧ್ಯಕ್ಷ ಅಶ್ರಫ್ ಘನಿ ಅವರ ಜೊತೆ ನಡೆದ ವಿಡಿಯೋ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಫ್ಘಾನಿಸ್ಥಾನದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಫ್ಘಾನ್‌‌‌ ಅಭಿವೃದ್ದಿಗೆ ಭಾರತವು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಪ್ರಧಾನಿ ಮೋದಿ, ಯುದ್ಧವನ್ನು ಕೊನೆಗೊಳಿಸಲು ದೀರ್ಘಕಾಲದ ಕದನವಿರಾಮ ಘೋಷಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

‘‘ಭಾರತವು ಅಫ್ಘಾನ್ ಕೇವಲ ಭೌಗೋಳಿಕವಾಗಿ ಮಾತ್ರವಲ್ಲ,  ನಮ್ಮ ಇತಿಹಾಸ ಮತ್ತು ಸಂಸ್ಕೃತಿಗಳು ಒಟ್ಟಿಗೆ ಬೆಸೆದುಕೊಂಡಿದೆ. ಈ ಎರಡೂ ನಮ್ಮನ್ನು ಪರಸ್ಪರ ಪ್ರಭಾವಿತರನ್ನಾಗಿ ಮಾಡಿದೆ. ಬಲವಾದ ಕಾರ್ಯತಂತ್ರ ಪಾಲುದಾರ ರಾಷ್ಟ್ರಗಳಾಗಿರುವ ಭಾರತ ಮತ್ತು ಅಫ್ಘಾನಿಸ್ಥಾನವನ್ನು ಭಯೋತ್ಪಾದನಾ ಮುಕ್ತ ವಲಯವನ್ನು ನೋಡಲು ಬಯಸುತ್ತವೆ” ಎಂದು ಹೇಳಿದರು.

‘‘ಯಾವುದೇ ಬಾಹ್ಯ ಶಕ್ತಿಗಳು ಅಫ್ಘಾನಿಸ್ಥಾನದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ. ಜೊತೆಗೆ ಭಾರತ-ಅಫ್ಘಾನಿಸ್ಥಾನದ ಭಾರತದೊಂದಿಗಿನ ಸ್ನೇಹವನ್ನು ತಪ್ಪಿಸಲು ಸಾಧ್ಯವಿಲ್ಲ. ಅಫ್ಘಾನಿಸ್ಥಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಫ್ಘಾನಿಸ್ಥಾನದಲ್ಲಿ ನಿರ್ದೋಷಿ ನಾಗರಿಕರು, ಪತ್ರಕರ್ತರನ್ನು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ. ದೇಶದಲ್ಲಿ ಪೂರ್ಣ ಕದನ ವಿರಾಮವನ್ನು ನಾವು ಬೆಂಬಲಿಸುತ್ತೇವೆ” ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಪ್ರದಾನಿ ಜಾಣಕುರುಡರಾಗಿದ್ದಾರಾ? ಅಲ್ಲಿ ನಡೆಯುತ್ತಿರುವುದು ಇಲ್ಲಿಯೂ ನಡೆಯುತ್ತಿದೆ. ತನ ತಟ್ಟೆಯಲ್ಲಿ ಸತ್ತುಬಿದ್ದಿರುವ ಹೆಗ್ಗಣವನ್ನು ನಿರ್ಲಕ್ಷಿಸಿ ಕಂಡೋರ ತಟ್ಟೆಯಲ್ಲಿ ಬಿದ್ದಿರುವ ನೊಣದ ಬಗ್ಗೆ ಮಾತನಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...