Homeಮುಖಪುಟಸುಂಕ ಬೆದರಿಕೆ, ಭಾರತೀಯರ ಗಡಿಪಾರು ನಡುವೆ ಅಮೆರಿಕಕ್ಕೆ ಭೇಟಿ ನೀಡಲಿರುವ ಮೋದಿ

ಸುಂಕ ಬೆದರಿಕೆ, ಭಾರತೀಯರ ಗಡಿಪಾರು ನಡುವೆ ಅಮೆರಿಕಕ್ಕೆ ಭೇಟಿ ನೀಡಲಿರುವ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 12-13 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದು, ತಮ್ಮ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿರುವ “ಆತ್ಮೀಯ ಸ್ನೇಹಿತ” ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮೊದಲ ಸಭೆ ನಡೆಸಲಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಮೊದಲ ತಿಂಗಳೊಳಗೆ ನಡೆಯಲಿರುವ ಈ ಭೇಟಿಯು ಟ್ರಂಪ್ ಭಾರತಕ್ಕೆ ಸುಂಕ ವಿಧಿಸುವ ಬೆದರಿಕೆಗಳು ಮತ್ತು ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುತ್ತಿರುವ ಮಧ್ಯೆ ನಡೆಯುತ್ತಿದೆ. ಸುಂಕ ಬೆದರಿಕೆ

ಪ್ರಧಾನಿ ಮೋದಿಯ ಭೇಟಿಯನ್ನು ಘೋಷಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕಕ್ಕೆ ಭೇಟಿ ನೀಡುವ ಮೊದಲ ಕೆಲವು ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು. ಹೊಸ ಆಡಳಿತ ಅಧಿಕಾರ ವಹಿಸಿಕೊಂಡ ಕೇವಲ ಮೂರು ವಾರಗಳಲ್ಲಿ ಪ್ರಧಾನಿಯನ್ನು ಅಮೆರಿಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆ. ಇದು ಭಾರತ-ಅಮೆರಿಕದ ಪಾಲುದಾರಿಕೆಯ ಮಹತ್ವವನ್ನು ತೋರಿಸುತ್ತದೆ. ಈ ಪಾಲುದಾರಿಕೆ ಅಮೆರಿಕದಲ್ಲಿ ಅನುಭವಿಸುವ ದ್ವಿಪಕ್ಷೀಯ ಬೆಂಬಲವನ್ನು ಪ್ರತಿಬಿಂಬಿಸುತ್ತದೆ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ರಂಪ್ ಈಗಾಗಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿ ಮಾಡಿದ್ದಾರೆ ಮತ್ತು ಈ ವಾರ ವಾಷಿಂಗ್ಟನ್‌ನಲ್ಲಿ ಜಪಾನ್‌ನ ಶಿಗೇರು ಇಶಿಬಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಟ್ರಂಪ್ ಅವರ ಮೊದಲ ಅವಧಿಯಲ್ಲಿ ಆತ್ಮೀಯ ಸಂಬಂಧಗಳನ್ನು ಹಂಚಿಕೊಂಡ ಇಬ್ಬರು ನಾಯಕರು ಕಳೆದ ವಾರ ಫೋನ್ ಕರೆ ನಡೆಸಿದ್ದರು. ಈ ವೇಳೆ ವಲಸೆ, ಭದ್ರತೆ ಮತ್ತು ವ್ಯಾಪಾರ ಸಂಬಂಧಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಸುಂಕ ಬೆದರಿಕೆ

ಟ್ರಂಪ್ ಅವರನ್ನು ತಮ್ಮ “ಆತ್ಮೀಯ ಸ್ನೇಹಿತ” ಎಂದು ಉಲ್ಲೇಖಿಸಿದ ಪ್ರಧಾನಿ ಮೋದಿ, “ನಮ್ಮ ಜನರ ಕಲ್ಯಾಣಕ್ಕಾಗಿ” ಮತ್ತು “ಜಾಗತಿಕ ಶಾಂತಿಯ ಕಡೆಗೆ” ಇಬ್ಬರೂ ನಾಯಕರು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಟ್ರಂಪ್‌ ಕೂಡಾ ಕಳೆದ ವರ್ಷ ಪ್ರಧಾನಿ ಮೋದಿ ಅವರನ್ನು “ಶ್ರೇಷ್ಠ ನಾಯಕ” ಎಂದು ಕರೆದಿದ್ದರು. ಅದಾಗ್ಯೂ, ಈ ಹಿಂದೆ ಅವರು ಭಾರತವನ್ನು “ಸುಂಕದ ರಾಜ” ಮತ್ತು ವ್ಯಾಪಾರ ಸಂಬಂಧಗಳ “ದೊಡ್ಡ ದುರುಪಯೋಗ ಮಾಡುವ” ದೇಶ ಎಂದು ಬಣ್ಣಿಸಿದ್ದರು.

ಇದನ್ನೂಓದಿ:  ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...